More

    ಏಳನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ; ಮೂವರು ಸದಸ್ಯರ ನೇಮಕ..

    ಬೆಂಗಳೂರು: ಏಳನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅನುಮೋದನೆ ನೀಡಿದ್ದು, ಕೆ.ಸುಧಾಕರ್ ರಾವ್ ಅಧ್ಯಕ್ಷತೆಯ ಆಯೋಗಕ್ಕೆ ಮೂವರು ಸದಸ್ಯರನ್ನೂ ನೇಮಕ ಮಾಡಲಾಗಿದೆ.

    ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ್ ರಾವ್ ಅಧ್ಯಕ್ಷತೆಯ ವೇತನ ಆಯೋಗಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕ ಶ್ರೀಕಾಂತ್ ಬಿ. ವನಹಳ್ಳಿ ಮತ್ತು ಮೂಲಸೌಕರ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

    ಏಳನೇ ವೇತನ ಆಯೋಗವು ನೂತನ ವೇತನ ಶ್ರೇಣಿಯನ್ನು ಶಿಫಾರಸು ಮಾಡಲಿದ್ದು, ಕೇಂದ್ರದ ವೇತನ ಶ್ರೇಣಿಯನ್ನು ರಾಜ್ಯದಲ್ಲಿ ಅಳವಡಿಸುವ ಕುರಿತು ಪರಿಶೀಲಿಸಲಿದೆ. ರಾಜ್ಯ ಸರ್ಕಾರವು ತುಟ್ಟಿಭತ್ಯೆ ನೀಡಲು ಅನುಸರಿಸಬೇಕಾದ ಸೂತ್ರವನ್ನು ರೂಪಿಸುವುದು, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ಪ್ರವಾಸ ರಜೆ ಸೌಲಭ್ಯ, ವೈದ್ಯಕೀಯ ಸೌಲಭ್ಯಗಳನ್ನು ನಿಗದಿ ಪಡಿಸುವುದು ಮುಂತಾದವುಗಳಿಗೆ ಸಂಬಂಧಿಸಿದಂತೆ ಈ ವೇತನ ಆಯೋಗವು ಶಿಫಾರಸುಗಳನ್ನು ಮಾಡಲಿದೆ.

    ಮತ್ತೆ ಬರುತ್ತೆ ಆರ್ಕುಟ್​?; ರಿಪ್​ ಟ್ವಿಟರ್​ ಟ್ರೆಂಡಿಂಗ್​ ಬೆನ್ನಿಗೇ ಗರಿಗೆದರಿದ ನಿರೀಕ್ಷೆ..

    ಶೂಟಿಂಗ್ ವೇಳೆ ಎಡವಟ್ಟು, ನಟಿ ರಾಗಿಣಿ ದ್ವಿವೇದಿಗೆ ಪೆಟ್ಟು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts