More

    ಪರಿಶಿಷ್ಟ ಜಾತಿಗೆ ಮಡಿವಾಳ ಸಮುದಾಯ ಸೇರ್ಪಡೆ; ಸಿಎಂ ಬೊಮ್ಮಾಯಿ ಭರವಸೆ: ಬಿಎಸ್​ವೈಗೆ ಮಾಚಿದೇವ ಪ್ರಶಸ್ತಿ ಪ್ರದಾನ

    ಚಿತ್ರದುರ್ಗ: ಇತರೆ ಸಮುದಾಯಗಳಿಗೆ ಅನ್ಯಾಯವಾಗದಂತೆ, ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಂವಿಧಾನದ ಚೌಕಟ್ಟಿನಲ್ಲಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಮಡಿವಾಳ ಮಠದ 14ನೇ ವಾರ್ಷಿಕೋತ್ಸವ, ಪೀಠಾಧಿಪತಿ ಶ್ರೀ ಬಸವ ಮಾಚಿದೇವ ಸ್ವಾಮೀಜಿ ಅವರ 24ನೇ ಜಂಗಮದೀಕ್ಷೆ, 39ನೇ ಜನ್ಮದಿನದ ಅಂಗವಾಗಿ ನಗರದ ಮಡಿವಾಳ ಮಾಚಿದೇವ ಗುರುಪೀಠದಲ್ಲಿ ಆಯೋಜಿಸಿರುವ 2 ದಿನಗಳ ಕಾಯಕ ಜನೋತ್ಸವಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು. ಪರಿಶಿಷ್ಟ ಜಾತಿಗೆ ಮಡಿವಾಳರನ್ನು ಸೇರಿಸಬೇಕೆಂಬ ಕಳಕಳಿ ನನಗಿದೆ. ಬೇಡಿಕೆಯನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ನ್ಯಾಯಸಮ್ಮತ ತೀರ್ಮಾನ ತೆಗೆದುಕೊಳ್ಳಲಾಗುವುದು. ಅನ್ನಪೂರ್ಣಮ್ಮ ಸಮಿತಿಯ ಕುಲಶಾಸ್ತ್ರ ಅಧ್ಯಯನದ ವರದಿ ಸಲ್ಲಿಕೆಯಾಗಿ 8 ವರ್ಷಗಳಾದರೂ ನೀವ್ಯಾರೂ ಕೇಳಲಿಲ್ಲ. ನಿಮ್ಮಿಂದ ಸನ್ಮಾನ ಮಾಡಿಸಿಕೊಂಡವರು ಬೇಡಿಕೆಗಳಿಗೆ ಸ್ಪಂದಿಸಿಲ್ಲವೆಂದು ಕಾಂಗ್ರೆಸ್ ಧುರೀಣರನ್ನು ಕೆಣಕಿದರು.

    ಬಿ.ಎಸ್.ಯಡಿಯೂರಪ್ಪ ಸಮಿತಿ ನೇಮಿಸಿದರು. ಸಮುದಾಯವನ್ನು ಗುರುತಿಸಿ, ರಾಜಕೀಯ ಸ್ಥಾನಮಾನ ಕಲ್ಪಿಸಿದರು. ಹಲವು ಬೇಡಿಕೆಗಳಿಗೆ ಸ್ಪಂದಿಸಿದ್ದರು. ರಾಜ್ಯದ ಸಣ್ಣ ಸಣ್ಣ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ನೀಡುವ ಕುರಿತು ಯಡಿಯೂರಪ್ಪ ನನ್ನೊಂದಿಗೆ ರ್ಚಚಿಸಿದ್ದಾರೆ. ಬಿಜೆಪಿ ಹೊರತುಪಡಿಸಿ ಇನ್ಯಾವುದೇ ಪಕ್ಷಗಳಿಂದ ಸಾಮಾಜಿಕ ನ್ಯಾಯ ಕೊಡಲಾಗದು ಎಂದರು. ಈ ಬಾರಿಯ ಬಜೆಟ್​ನಲ್ಲಿ ಮಾಚಿದೇವ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ, ರಾಜ್ಯದ ಎಲ್ಲ ನಗರ, ಪಟ್ಟಣಗಳಲ್ಲಿರುವ ದೋಬಿಘಾಟ್​ಗಳಲ್ಲಿ ಆಧುನಿಕ ಯಂತ್ರೋಪಕರಣಗಳ ಅಳವಡಿಕೆಗೆ ವಿಶೇಷ ಅನುದಾನ ನೀಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

    ಮಾಚಿದೇವಶ್ರೀ ಪ್ರಶಸ್ತಿ ಸ್ವೀಕರಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಪ್ರಶಸ್ತಿಯಿಂದಾಗಿ ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಶಕ್ತಿ ಸಿಕ್ಕಿದೆ. ನಾನು ಡಿಸಿಎಂ, ಸಿಎಂ ಆಗಿದ್ದಾಗ ಶಕ್ತಿ ಮೀರಿ ಹಲವು ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದರು. ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ವಿಶೇಷ ಗಮನ ಹರಿಸಬೇಕು, ರಾಜಕೀಯ ಪ್ರಾತಿನಿಧ್ಯ ಕೊಡಲು ಮುಖ್ಯಮಂತ್ರಿ ಬದ್ಧತೆ ಪ್ರದರ್ಶಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಬಿಎಸ್​ವೈ ಹೇಳಿದರು.

    ಮಠಕ್ಕೆ ನೀಡಿದ ಅನುದಾನ ಹಿಂಪಡೆದು, ಬೇಡಿಕೆ ಈಡೇರಿಸಿ: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಬೇಕು. ಅಭಿವೃದ್ಧಿ ನಿಗಮದ ಅನುದಾನವನ್ನು 500 ಕೋಟಿ ರೂ.ಗೆ ಹೆಚ್ಚಿಸಬೇಕು. ಕುಲಕಸುಬಿನವರಿಗೆ ಉಚಿತ ವಿದ್ಯುತ್ ಕೊಡಬೇಕು. ಮಠಕ್ಕೆ ಮಂಜೂರಾದ ಅನುದಾನ ಹಿಂಪಡೆಯಿರಿ. ಆದರೆ ಸಮುದಾಯದ ಬೇಡಿಕೆಗಳನ್ನು ಈಡೇರಿಸಿ ಎಂದು ಶ್ರೀ ಬಸವ ಮಡಿವಾಳ ಮಾಚಿದೇವ ಸ್ವಾಮೀಜಿ ಮನವಿ ಮಾಡಿದರು. ನಮ್ಮ ಈ ಎಲ್ಲ ಬೆಳವಣಿಗೆಗೆ ಯಡಿಯೂರಪ್ಪ ಕಾರಣರಾಗಿದ್ದಾರೆ. ಅವರು ಕೊಟ್ಟಿದ್ದ 50 ಲಕ್ಷ ರೂ. ಅನುದಾನ ಮಠದ ಅಭಿವೃದ್ಧಿಗೆ ನಾಂದಿಯಾಯಿತು. ಪ್ರಶಸ್ತಿ ಪ್ರದಾನ ಮಾಡಿ ಅವರ ಋಣ ತೀರಿಸುವ ಕೆಲಸ ಮಾಡಿದ್ದೇವೆ ಎಂದರು.

    ಸ್ಮಶಾನದ ಹಾದಿಯಲ್ಲಿ ಕಣ್ಣು ತೆರೆದ ‘ಶವ’!; ಮಹಿಳೆ ಮೃತಪಟ್ಟಳು ಎಂದು ವೈದ್ಯರು ದೃಢೀಕರಿಸಿದ್ದರೂ ಸಂಭವಿಸಿದ ಅಚ್ಚರಿ!

    ಸಂಸಾರ ನಿಭಾಯಿಸಲಿಕ್ಕೂ ಇಲ್ಲಿದೆ ಒಂದು ಕೋರ್ಸ್​; ಮದುವೆ ಆಗುವವರಿಗೂ-ಆದವರಿಗೂ ನೀಡ್ತಾರೆ ತರಬೇತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts