25.9 C
Bengaluru
Wednesday, January 22, 2020

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು.

ಶ್ರೀಮಠದ ಆವರಣದಲ್ಲಿ ಗುರುವಾರ ಭಾವೈಕ್ಯ ಧರ್ಮಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಬಿಎಸ್‌ವೈ, ಕುಪ್ಪೂರು ಮಠಕ್ಕೆ ಬರುವ ಭಕ್ತರಿಗೆ ಮೂಲಸೌಕರ್ಯ ಒದಗಿಸಲು 3 ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದರು. ಸ್ಥಿರ ಸರ್ಕಾರಕ್ಕೆ ರಾಜ್ಯದ ಜನರ ಆಶೀರ್ವಾದ ಸಿಕ್ಕಿದ್ದು ಮುಂದಿನ ದಿನದಲ್ಲಿ ಯಾರ ಕಡೆಗೂ ಬೊಟ್ಟು ಮಾಡಿ ತೋರಿಸದೆ ಜನಮೆಚ್ಚುವ ಆಡಳಿತ ನೀಡುತ್ತೇನೆ ಎಂದು ಭರವಸೆ ನೀಡಿದರು. ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಿದರೆ ನಾಡಿನ ರೈತರು ಬದುಕುತ್ತಾರೆ. ಹಾಗಾಗಿ, ನೀರಾವರಿಗೆ ಹೆಚ್ಚು ಆದ್ಯತೆ ನೀಡುತ್ತೇನೆ. ಉದ್ಯೋಗ ಸೃಷ್ಟಿ, ಮಹಿಳಾ ಸಬಲೀಕರಣ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸಲಾಗುವುದು ಎಂದರು.

ಎಡಿಯೂರು ಕ್ಷೇತ್ರದ ಶ್ರೀರೇಣುಕ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು, ಹೊನ್ನವಳ್ಳಿ ಕರಿಸಿದ್ದೇಶ್ವರ ಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಶ್ರೀಗುರು ಮರುಳಸಿದ್ದೇಶ್ವರ ಪುರಾಣ ವ್ಯಾಖ್ಯಾನ ಪುಸ್ತಕವನ್ನು ಮುಡುಕುತೊರೆಯ ತೋಪಿನ ಮಠದ ಶ್ರೀಮಹಾಲಿಂಗ ಶಿವಾಚಾರ್ಯ ಸ್ವಾಮೀಜಿ ಬಿಡುಗಡೆ ಮಾಡಿದರು.

ಕಂದಾಯ ಸಚಿವ ಆರ್.ಆಶೋಕ್ ಪುರಾಣದ ಕಾವ್ಯಧಾರೆ ಪುಸ್ತಕ, ಅಷ್ಟೋತ್ತರ ಸಹಸ್ತ್ರ ನಾಮಾವಳಿ ಪುಸ್ತಕ, ಕ್ಯಾಲೆಂಡರ್, ಶ್ರೀಗುರುಮರುಳಸಿದ್ದೇಶ್ವರರ ಭಾವಚಿತ್ರವನ್ನು, ಸೋಳಾಸೋಮವಾರ ವ್ರತ ಪುಸ್ತಕ ಬಿಡುಗಡೆ ಮಾಡಿದರು. ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕ ಬಿ.ಸಿ.ನಾಗೇಶ್, ಕೆ.ಆರ್.ರತ್ನಾಕರಭಟ್ ಮತ್ತಿತರರು ಇದ್ದರು.

ಚಿಕ್ಕನಾಯಕನಹಳ್ಳಿಗೆ ‘ಹೇಮೆ’ ಸಿಎಂ ಯಡಿಯೂರಪ್ಪ ವರ!: ಬಿಎಸ್‌ವೈ ಈ ಹಿಂದೆ ಸಿಎಂ ಆಗಿದ್ದಾಗ 106 ಕೋಟಿ ರೂ. ನೀಡಿ 26 ಕೆರೆಗಳಿಗೆ ಹೇಮಾವತಿ ನೀರು ನೀಡಿ ಕ್ರಾಂತಿಕಾರಕ ಆದೇಶ ಮಾಡಿದ್ದರು. ಸದ್ಯ ಈ ಭಾಗದ ಜನರ ಬದುಕು ಉಳಿಸುವ ಸಂಕಲ್ಪದೊಂದಿಗೆ 96 ಕೆರೆಗೆ ನೀರುಣಿಸಲು 250 ಕೋಟಿ ರೂ. ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಚಿಕ್ಕನಾಯನಹಳ್ಳಿ ತಾಲೂಕಿನ ಎಲ್ಲ ಕೆರೆಗಳಿಗೂ ನೀರು ಹರಿಯಲಿದೆ. ಹಾಗೆಯೇ ತುಮಕೂರು ಜಿಲ್ಲೆಯ ಉಳಿದ ತಾಲೂಕುಗಳಿಗೂ ವಿವಿಧ ಮೂಲಗಳಿಂದ ನೀರು ತುಂಬಿಸಲು ಸಿಎಂ ಒಪ್ಪಿಸಲಾಗುವುದು ಎಂದು ಭರವಸೆ ನೀಡಿದರು. ಹೇಮಾವತಿ ನಾಲೆ ಆಧುನೀಕರಣಕ್ಕೆ 550ಕೋಟಿ ರೂ. ಮಂಜೂರು ಮಾಡಿದ್ದು, ಜಿಲ್ಲೆಗೆ ಒಮ್ಮೆಗೆ 2400 ಕ್ಯೂಸೆಕ್ ನೀರು ಸರಾಗವಾಗಿ ಹರಿಯಲಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಮೋಡದ ಮರೆಯಲ್ಲಿರುವ ತುಮಕೂರು ಜಿಲ್ಲೆಯ ಕಣ್ಣಾಗಿದ್ದಾರೆ ಎಂದರು. ಸಂದಿಗ್ಧ ಪರಿಸ್ಥಿತಿಯಲ್ಲಿ 110 ದಿನ ಕಳೆದಿದ್ದು ಇನ್ನು ಮುಂದೆ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಉತ್ತಮ ಕೆಲಸ ಮಾಡುತ್ತಾರೆ, ನೀರಾವರಿ, ರಸ್ತೆಗೆ ವಿಶೇಷ ಆದ್ಯತೆ ನೀಡಲಾಗಿದ್ದು ಜಿಲ್ಲೆಯ ಜನತೆ ಯಡಿಯೂರಪ್ಪ ಅವರನ್ನು ಬಹುಕಾಲ ಸ್ಮರಿಸಿಕೊಳ್ಳಲಿದೆ ಎಂದರು.

ಪ್ರಸಾದಕ್ಕೆ ಬಸವ ಪಾದ ಸ್ಪರ್ಶ: ಅನ್ನ ದಾಸೋಹಕ್ಕೆ ಖ್ಯಾತಿಗಳಿಸಿರುವ ಕುಪ್ಪೂರು ಜಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಪ್ರಸಾದ ಸ್ವೀಕರಿಸುವುದು ವಾಡಿಕೆ. ಇಲ್ಲಿ ಪ್ರಸಾದ ಸ್ವೀಕರಿಸುವುದೇ ಒಂದು ದೈವಿಕ ಕಾರ್ಯ ಎಂದೇ ಜನರು ನಂಬಿದ್ದಾರೆ. ಈ ಪುಣ್ಯ ಕ್ಷೇತ್ರದಲ್ಲಿ ಕ್ವಿಂಟಲ್‌ಗಟ್ಟಲೇ ದವಸ, ಧಾನ್ಯ ಬಳಕೆಯಿಂದ ನಡೆಯುವ ಜಾತ್ರೆ ದಾಸೋಹಕ್ಕೆ ಚಾಲನೆ ನೀಡುವುದು ಬಸವಣ್ಣ. ಪ್ರಸಾದಕ್ಕೆ ಗುದ್ದುಗೆಯ ಬಸವ ತನ್ನ ಪಾದ ಸ್ಪರ್ಶಿಸುವ ಮೂಲಕ ದಾಸೋಹ ಆರಂಭವಾಗುವುದು ಸಂಪ್ರದಾಯ. ಈ ಜಾತ್ರೆಯಲ್ಲಿಯೂ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ಗುರುವಾರ ಕೈಂಕರ್ಯ ನಡೆಯಿತು.

ಸಿಎಂ ಬೆಲ್ಲದ ತುಲಾಭಾರ ಸೇವೆ ರದ್ದು!: ಶ್ರೀಮಠದ ವತಿಯಿಂದ ಆಯೋಜಿಸಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಂದ ಬೆಲ್ಲದ ತುಲಾಭಾರ ಸೇವೆಯನ್ನು ಕೊನೆ ಕ್ಷಣದಲ್ಲಿ ರದ್ದು ಮಾಡಲಾಯಿತು. ಕ್ಯಾಬಿನೆಟ್ ಸಭೆಗೆ ತೆರಳುವ ಆತುರದಲ್ಲಿದ್ದ ಸಿಎಂ ಗೆ ತುಲಾಭಾರ ಸೇವೆಗೆ ಸಮಯಾವಕಾಶ ಸಿಗಲಿಲ್ಲ. ಸೇವೆಗಾಗಿ ಬೆಲ್ಲ, ಖರ್ಜೂರ, ತಕ್ಕಡಿ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಆದರೆ, ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಸಮಯದ ಅಭಾವವಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು. ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ ವಾಪಸಾದರು.

ಕಾಂಗ್ರೆಸ್, ಜೆಡಿಎಸ್ ಪ್ರೇತಾತ್ಮವಾಗಿವೆ !: ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯದಲ್ಲಿ ರಾಜಕೀಯ ನೆಲೆ ಕಳೆದುಕೊಂಡು ಅಲೆದಾಡುತ್ತಿರುವ ಪ್ರೇತಾತ್ಮಗಳು ಎಂದು ಕಂದಾಯ ಸಚಿವ ಆರ್.ಆಶೋಕ್ ವ್ಯಂಗ್ಯವಾಡಿದರು. ಕುಪ್ಪೂರು ಗದ್ದುಗೆ ಮಠದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಗೌರವವಿತ್ತು, ಸಹಾಯ ಮಾಡಿರುವವರೆಲ್ಲರಿಗೆ ನಾವು ಭರವಸೆ ನೀಡಿರುವಂತೆ ಅವಕಾಶ ನೀಡುತ್ತೇವೆ ಎಂದರು. ಚುನಾವಣೆಯಲ್ಲಿ ಸೋತವರ ಬಗ್ಗೆ ಸಿಎಂ ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳುತ್ತಾರೆ, ಮುಂದಿನ ಮೂರೂವರೆ ವರ್ಷ ರಾಜ್ಯದ ಜನತೆ ಸ್ಥಿರ ಸರ್ಕಾರಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದರು. ನಮ್ಮ ಜವಾಬ್ದಾರಿ ಹೆಚ್ಚಿದ್ದು ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳ ಕಡೆ ನಮ್ಮ ಸರ್ಕಾರ ಹೆಚ್ಚು ಗಮನ ನೀಡಲಿದೆ, ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದುವರಿದ ರಾಜಾಹುಲಿ ಟ್ರೆಂಡ್: ವೇದಿಕೆಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಸನ್ಮಾನಿಸುವಾಗ ‘ಜೈ ರಾಜಾಹುಲಿ’ ಎಂದು ಅಭಿಮಾನಿಗಳು ಘೋಷಣೆ ಕೂಗಿ ಸಂಭ್ರಮಿಸಿದರು. ಉಪ ಚುನಾವಣೆಯಲ್ಲಿ ಗೆದ್ದು ಬೀಗಿದ ಬಳಿಕ ಸಿಎಂ ಯಡಿಯೂರಪ್ಪ ಭಾಗವಹಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ‘ಹೌದೊ ರಾಜಾಹುಲಿ’ ಕೂಗುವ ಟ್ರೆಂಡ್‌ಗೆ ಕುಪ್ಪೂರು ಮಠದ ಕಾರ್ಯಕ್ರಮ ಕೂಡ ಸಾಕ್ಷಿಯಾಯಿತು. ಅಭಿಮಾನಿಗಳು ರಾಜಾಹುಲಿ ಎಂದು ಕೂಗಿದಾಗ ವೇದಿಕೆ ಮೇಲಿದ್ದ ಸಿಎಂ ನಸುನಕ್ಕರು, ವಿಕ್ಟರಿ ಸಿಂಬಲ್‌ನಲ್ಲಿ ಕೈಬೀಸಿದರು. ಅಭಿಮಾನಿಗಳು ಮತ್ತಷ್ಟು ಉತ್ಸಾಹದಿಂದ ಘೋಷಣೆ ಕೂಗುವುದನ್ನು ಮುಂಂದುವರಿಸಿದರು.

ಶ್ರೀಮಠದಿಂದ ಕುಪ್ಪೂರು ಮರಳಸಿದ್ದೇಶ್ವರ ಪ್ರಶಸ್ತಿ ಲಭಿಸಿರುವುದು ನನ್ನ ಭಾಗ್ಯ. ಮತ್ತಷ್ಟು ಒಳ್ಳೆಯ ಕೆಲಸಕ್ಕೆ ಮರುಳಸಿದ್ಧರ ಆಶೀರ್ವಾದ ಪ್ರೇರಕವಾಗಿದೆ. ವೀರಶೈವ ಸಮಾಜದ ಒಡಕಿನ ಸಂದರ್ಭದಲ್ಲಿ ಗಟ್ಟಿಯಾಗಿ ನಿಲ್ಲಲು ಯಡಿಯೂರಪ್ಪ ಅವರ ಸಹಕಾರ ಪೂರಕವಾಗಿತ್ತು. ಅವರ ಬೆಂಬಲದಿಂದ ನಮಗೆ ಜಯವಾಯಿತು.
ಶಾಮನೂರು ಶಿವಶಂಕರಪ್ಪ ಅಧ್ಯಕ್ಷರು, ಅಖಿಲ ಭಾರತ ವೀರಶೈವ ಮಹಾಸಭಾ

ಈ ವರ್ಷದ ಜಾತ್ರೆ ಸಿಎಂ ಆಗಮನದಿಂದ ಮತ್ತಷ್ಟು ಕಳೆಕಟ್ಟಿದೆ, ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಬೆಳೆಸಿದ ಮಠದಲ್ಲಿ ತ್ರಿಕಾಲ ಪೂಜೆ ಸೇರಿ ಮಠಕ್ಕೆ ಬರುವಂತಹ ಭಕ್ತರಿಗೆ ನಿತ್ಯದಾಸೋಹ ಮಠದ ಅಭಿವೃದ್ಧಿಗೆ ನೆರವಾಗಿದೆ. ಸರ್ಕಾರ, ಭಕ್ತರ ನೆರವು ಶ್ರೀಮಠ ಬಯಸುತ್ತದೆ.
ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಕುಪ್ಪೂರು ಗದ್ದುಗೆ ಶ್ರೀಮಠ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...