More

    The Kashmir Filesಗೆ ತೆರಿಗೆ ವಿನಾಯತಿ ನೀಡಿದ ಸಿಎಂ, ಸ್ಪೀಕರ್ ವತಿಯಿಂದ ಸಚಿವರು-ಶಾಸಕರಿಗೆ ಸ್ಪೆಷಲ್ ಶೋ!

    ಬೆಂಗಳೂರು: 1990 ರಲ್ಲಿ ಕಾಶ್ಮೀರಿ ಪಂಡಿತರ ನರಮೇಧದ ಕಥೆಯನ್ನು ಆಧರಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆಯೇ ಸದ್ಯ ಇಡೀ ಭಾರತ ದೇಶದಲ್ಲಿ ಮಾತುಕತೆ ನಡೆಯುತ್ತಿದೆ. ಈ ಸಿನಿಮಾ ತೆರೆಗಪ್ಪಳಿಸಿದ ಎರಡೇ ದಿನಕ್ಕೆ ದೇಶಾದ್ಯಂತ ಹಲವು ದಾಖಲೆಗಳನ್ನು ಮುರಿದಿದೆ. ಹೌದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಸದ್ಯ ಅತ್ಯುತ್ತಮ ಪ್ರದರ್ಶನ ಕಾಣುತ್ತಿದ್ದು ಬಹುತೇಕ ಸಿನಿತಾರೆಯರು, ಸೆಲೆಬ್ರಿಟಿಗಳು, ಜನಸಾಮಾನ್ಯರು, ಸಿನಿ ವಿಮರ್ಶಕರು ಮೆಚ್ಚುಗೆ ಸೂಚಿಸಿದ್ದಾರೆ. ಇನ್ನು, ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆನ್ನೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಿದ್ದಾರೆ. ಚಿತ್ರವನ್ನು ವೀಕ್ಷಸಿ ದಿಲ್ ಖುಷ್ ಆಗಿರುವ ಸಿಎಂ ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ನಮ್ಮ ರಾಜ್ಯದ ಚಿತ್ರಮಂದಿರಗಳಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.
    ಅಂದಹಾಗೆ, ಕಾಶ್ಮೀರಿ ಪಂಡಿತರ ಹತ್ಯಾಕಾಂಡಕ್ಕೆ ಸಂಬಂಧಿಸಿದ ಸಿನಿಮಾ ಇದಾದರಿಂದ ಪಕ್ಷದ ಸೂಚನೆ ಮೇರೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸಿನಿಮಾ ಚಿತ್ರವನ್ನು ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ಬಳಿಕ ಸಿಎಂ, ”ಈ ಸಿನಿಮಾ ನೋಡಿದ ಬಳಿಕ ನನಗೆ ಮಾತನಾಡಲು ಆಗುತ್ತಿಲ್ಲ. ಯಾವ ಪರಿ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ದಾಳಿಯಾಗಿತ್ತು ಎನ್ನುವದನ್ನ ತೋರಿಸಿದ್ದಾರೆ. ಅದೆಷ್ಟೂ ಜನ ಉಗ್ರರ ಕೈಲಿ ಸಿಕ್ಕಿ ಪ್ರಾಣವನ್ನ ಬಿಟ್ಟಿದ್ದಾರೆ. ಹೀಗಾಗಿಯೇ, ಅಲ್ಲಿ ಆರ್ಟಿಕಲ್ 370 ಯನ್ನ ನರೇಂದ್ರ ಮೋದಿ ಸರ್ಕಾರ ತೆರವುಗೊಳಿಸಿತು. ಇದಕ್ಕಾಗಿ, ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಪ್ರತಿಯೊಬ್ಬ ಭಾರತೀಯರು ಈ ಸಿನಿಮಾವನ್ನ ನೋಡಬೇಕು. ಹೀಗಾಗಿ ನಮ್ಮ ರಾಜ್ಯದಲ್ಲಿ ನಾನು ಈ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡಿ, ನಾಳೆಯೇ ಅದೇಶ ಮಾಡುತ್ತೇನೆಎಂದು ಮಾಧ್ಯಮಗಳ ಮುಂದೆ ತಿಳಿಸಿದ್ದಾರೆ.
    ಇನ್ನು ಕೇವಲ ಕರ್ನಾಟಕ ಮಾತ್ರವಲ್ಲದೆ ಗುಜರಾತ್, ಹರಿಯಾಣ, ಮಧ್ಯಪ್ರದೇಶದ ರಾಜ್ಯಗಳಲ್ಲೂ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ಶನಿವಾರ (ಮಾ.12 ರಂದು) ಸಂಜೆ ದಿ ಕಾಶ್ಮೀರ್ ಫೈಲ್ಸ್ನೋಡಿ ಚಿತ್ರತಂಡಕ್ಕೆ ಪ್ರಧಾನಿ ಮೋದಿ ಅವರೂ ಮೆಚ್ಚುಗೆ ಸೂಚಿಸಿದ್ದರು. ಇದೀಗ, ದೇಶದೆಲ್ಲಡೆ ಹೌಸ್​ಫುಲ್ ಪ್ರದರ್ಶನ ಕಾಣುತ್ತಿರುವ ದಿ ಕಾಶ್ಮೀರ್​ ಫೈಲ್ಸ್​ಸಿನಿಮಾವನ್ನು ಕರ್ನಾಟಕದ ಸಚಿವರು, ಶಾಸಕರು ಕೂಡ ವೀಕ್ಷಣೆ ಮಾಡಲಿದ್ದಾರೆ. ಅದಕ್ಕಾಗಿ ವಿಶೇಷ ವ್ಯವಸ್ಥೆಯನ್ನು ಸ್ವತಃ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ ಮಾಡಿದ್ದಾರೆ. ಈ ಬಗ್ಗೆ ಸ್ಪೀಕರ್ ಅವರು ಸದನದಲ್ಲಿ ಘೋಷಣೆ ಮಾಡಿದ್ದಾರೆ. ಹೌದು, ಮಂಗಳವಾರ (ಮಾ.15 ರಂದು) ಸಂಜೆ 6.45ಕ್ಕೆ ಬೆಂಗಳೂರಿನ ಮಂತ್ರಿ ಮಾಲ್​ನಲ್ಲಿ ಸಚಿವರು, ಶಾಸಕರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ನೋಡಲು ವಿಧಾನಸಭೆ ಸಚಿವಾಲಯದಿಂದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ

    The Kashmir Filesಗೆ ತೆರಿಗೆ ವಿನಾಯತಿ ನೀಡಿದ ಸಿಎಂ, ಸ್ಪೀಕರ್ ವತಿಯಿಂದ ಸಚಿವರು-ಶಾಸಕರಿಗೆ ಸ್ಪೆಷಲ್ ಶೋ! The Kashmir Filesಗೆ ತೆರಿಗೆ ವಿನಾಯತಿ ನೀಡಿದ ಸಿಎಂ, ಸ್ಪೀಕರ್ ವತಿಯಿಂದ ಸಚಿವರು-ಶಾಸಕರಿಗೆ ಸ್ಪೆಷಲ್ ಶೋ!

    100 ಎಕರೆ, 52,000 ಅಡಿಯ ಎಲ್​ಇಡಿ ಸ್ಕ್ರೀನ್! RRR ಪ್ರೀ-ರಿಲೀಸ್ ಇವೆಂಟ್​ನ ವಿಶೇಷತೆ, ಅತಿಥಿಗಳು ಯಾರು?

    ನಾನು ತುಂಬ ಲಕ್ಕಿ, ವಿಚ್ಛೇದನವಾದರೂ ಈಗಲೂ ಇಬ್ಬರು ಪತ್ನಿಯರೂ ನನ್ನ ಜತೆಗಿದ್ದಾರೆ: ಅಮಿರ್ ಖಾನ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts