ಇನ್ನು ಕೇವಲ ಕರ್ನಾಟಕ ಮಾತ್ರವಲ್ಲದೆ ಗುಜರಾತ್, ಹರಿಯಾಣ, ಮಧ್ಯಪ್ರದೇಶದ ರಾಜ್ಯಗಳಲ್ಲೂ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ಶನಿವಾರ (ಮಾ.12 ರಂದು) ಸಂಜೆ ''ದಿ ಕಾಶ್ಮೀರ್ ಫೈಲ್ಸ್'' ನೋಡಿ ಚಿತ್ರತಂಡಕ್ಕೆ ಪ್ರಧಾನಿ ಮೋದಿ ಅವರೂ ಮೆಚ್ಚುಗೆ ಸೂಚಿಸಿದ್ದರು. ಇದೀಗ, ದೇಶದೆಲ್ಲಡೆ ಹೌಸ್ಫುಲ್ ಪ್ರದರ್ಶನ ಕಾಣುತ್ತಿರುವ ''ದಿ ಕಾಶ್ಮೀರ್ ಫೈಲ್ಸ್'' ಸಿನಿಮಾವನ್ನು ಕರ್ನಾಟಕದ ಸಚಿವರು, ಶಾಸಕರು ಕೂಡ ವೀಕ್ಷಣೆ ಮಾಡಲಿದ್ದಾರೆ. ಅದಕ್ಕಾಗಿ ವಿಶೇಷ ವ್ಯವಸ್ಥೆಯನ್ನು ಸ್ವತಃ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ ಮಾಡಿದ್ದಾರೆ. ಈ ಬಗ್ಗೆ ಸ್ಪೀಕರ್ ಅವರು ಸದನದಲ್ಲಿ ಘೋಷಣೆ ಮಾಡಿದ್ದಾರೆ. ಹೌದು, ಮಂಗಳವಾರ (ಮಾ.15 ರಂದು) ಸಂಜೆ 6.45ಕ್ಕೆ ಬೆಂಗಳೂರಿನ ಮಂತ್ರಿ ಮಾಲ್ನಲ್ಲಿ ಸಚಿವರು, ಶಾಸಕರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಲು ವಿಧಾನಸಭೆ ಸಚಿವಾಲಯದಿಂದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.