More

    ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ತನಿಖೆಗೆ ಪೊಲೀಸರಿಗೆ ಮುಕ್ತ ಸ್ವಾತಂತ್ರೃ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

    ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ತನಿಖೆಗೆ ಪೊಲೀಸರಿಗೆ ಮುಕ್ತ ಸ್ವತಂತ್ರ ಕೊಡಲಾಗಿದೆ. ಅವರು ತಮ್ಮದೇ ಆದ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಆದಷ್ಟು ಶೀಘ್ರದಲ್ಲಿ ಎಲ್ಲ ಕೊಲೆಗಡುಕರನ್ನು ಹಿಡಿಯಲಿದ್ದಾರೆ. ಅಪರಾಧಿಗಳಿಗೆ ಕಾನೂನು ಪ್ರಕಾರ ಉಗ್ರ ಶಿಕ್ಷೆ ಕೊಡಲು ಎಲ್ಲ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಪ್ರವೀಣ್ ಮನೆಯವರಿಗೆ ಸಾಂತ್ವನ ಹೇಳಲು ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

    ಘಟನೆ ನಡೆದ ಮಾಹಿತಿ ಬಂದ ಕ್ಷಣದಿಂದ ಜಿಲ್ಲಾಡಳಿತ, ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಡಿಜಿ ಜತೆಗೂ ಮಾತನಾಡಿದ್ದೇನೆ. ಕಾಸರಗೋಡು ಪೊಲೀಸ್ ವರಿಷ್ಠಾಧಿಕಾರಿ ಜತೆಗೂ ಪೊಲೀಸ್ ಇಲಾಖೆ ನಿರಂತರ ಸಂಪರ್ಕದಲ್ಲಿದೆ. ಕೇರಳ ಗಡಿ ಭಾಗದಲ್ಲಿ ಆಗಿರುವ ಘಟನೆ ಹಿನ್ನೆಯೆಯಲ್ಲಿ ಕೇರಳಕ್ಕೂ ಲಿಂಕ್ ಇರುವ ಕುರಿತು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಕೇರಳ ಪೊಲೀಸರೂ ಈ ನಿಟ್ಟಿನ್ಲಲಿ ಸಹಕಾರ ನೀಡುತ್ತಿದ್ದಾರೆ. ಇಬ್ಬರನ್ನೂ ಈಗಾಗಲೇ ಬಂಧಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.

    ಈಗ ಬಂಧಿಸಲ್ಪಟ್ಟವರ ವಿಚಾರಣೆ ವೇಳೆ ಯಾವ ಮಾಹಿತಿ ಲಭ್ಯವಾಗುತ್ತದೆ ಎಂದು ನೋಡಿ ಮುಂದಿನ ಕಾರ್ಯಾಚರಣೆಯನ್ನು ಪೊಲೀಸರು ಕಾನೂನು ಪ್ರಕಾರ ಕೈಗೊಳ್ಳಲಿದ್ದಾರೆ. ತನಿಖೆ ಸಂದರ್ಭದಲ್ಲಿ ಮಾಹಿತಿ ಬಹಿರಂಗ ಮಾಡುವುದು ಕಷ್ಟ, ತನಿಖೆಯಾಗಲಿ ಎಲ್ಲ ವಿಚಾರಗಳೂ ಬಹಿರಂಗವಾಗಲಿದೆ ಎಂದರು.
    ಗೃಹ ಸಚಿವರಾದ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮೊದಲಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts