More

    ಭರ್ಜರಿ ಗೆಲುವು ದಾಖಲಿಸಿದ ಸಿಎಂ ಬಸವರಾಜ್​ ಬೊಮ್ಮಾಯಿ

    ಶಿಗ್ಗಾಂವಿ: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಅತಿಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಹುಮತ ಸಾಧಿಸಿದೆ. ಆದರೆ, ಈ ಚುನಾವಣೆಯಲ್ಲಿ ಅತಿ ಹೆಚ್ಚು ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ ಶಿಗ್ಗಾಂವಿಯೂ ಒಂದಾಗಿದ್ದು, ಸಿಎಂ ಬಸವರಾಜ್​ ಬೊಮ್ಮಾಯಿ ಭರ್ಜರಿ ಗೆಲುವನ್ನು ದಾಖಲಿಸಿದ್ದಾರೆ.

    ಸತತ ನಾಲ್ಕನೇ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಸಿಎಂ ಬೊಮ್ಮಾಯಿ 35,978 ಮತಗಳ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಮೊದಲಿನಿಂದಲೂ ಮುನ್ನಡೆಯನ್ನು ಕಾಯ್ದುಕೊಂಡಿದ್ದ ಬೊಮ್ಮಾಯಿ ಒಟ್ಟು 1,00,016 ಮತಗಳನ್ನು ಪಡೆದಿದ್ದು, ಕಾಂಗ್ರೆಸ್​ನ ಯಾಸೀರ್​ಖಾನ್ ಪಠಾಣ್ 64,038 ಮತಗಳನ್ನು ಪಡೆದಿದ್ದಾರೆ.

    ಇದನ್ನೂ ಓದಿ; ಆರು ಬಾರಿ ಗೆದ್ದು ಬೀಗಿದ್ದ ಕಾಗೇರಿಗೆ ಸೋಲುಣಿಸಿದ ಕಾಂಗ್ರೆಸ್​​ ಅಭ್ಯರ್ಥಿ ಭೀಮಣ್ಣ ನಾಯ್ಕ

    ಲಿಂಗಾಯಿತರ ಪ್ರಾಬಲ್ಯ ಹೆಚ್ಚಿರುವ ಈ ಕ್ಷೇತ್ರದಲ್ಲಿ ಒಂದು ಹಂತದಲ್ಲಿ ಧಾರವಾಡದ ಮಾಜಿ ಶಾಸಕ ವಿನಯ್​ ಕುಲಕರ್ಣಿಯನ್ನು ಸಿಎಂ ಎದುರು ಕಣಕ್ಕಿಳಿಸಲು ಯೋಜನೆ ಮಾಡಲಾಗಿತ್ತು. ಆದರೆ ಕೊನೆಗೆ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್​ಖಾನ್ ಪಠಾಣ್​ರನ್ನು ಕಣಕ್ಕಳಿಸಲಾಗಿತ್ತು.

    ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಸ್ಪಷ್ಟ ಬಹುಮತದತ್ತ ದಾಪುಗಾಲು ಇಟ್ಟಿದೆ. ಈ ಹಿನ್ನೇಲೆಯಲ್ಲಿ ಬಸವರಾಜ್​ ಬೊಮ್ಮಾಯಿ ಇಂದು ಸಂಜೆ ಶಿಗ್ಗಾವಿಯಿಂದ ಬೆಂಗಳೂರಿಗೆ ಆಗಮಿಸಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ. ಚುನಾವಣಾ ಫಲಿತಾಂಶದ ಸದ್ಯದ ಟ್ರೆಂಡ್​ ಪ್ರಕಾರ ಕಾಂಗ್ರೆಸ್​ 134 ಕ್ಷೇತ್ರಗಳಲ್ಲಿ ಮುಂದಿದ್ದರೆ, ಬಿಜೆಪಿ 65 ಮತ್ತು ಜೆಡಿಎಸ್​ 21 ಹಾಗೂ ಇತರೆ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.(ಏಜೆನ್ಸೀಸ್) 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts