ಭ್ರಷ್ಟ ಸಿಎಂ ಎಂದ ಸಿದ್ದರಾಮಯ್ಯಗೆ ಟ್ವೀಟ್​ ಮೂಲಕ ಬಸವರಾಜ ಬೊಮ್ಮಾಯಿ ತಿರುಗೇಟು

Siddaramaiah and Basavaraja Bommai
ಸಿದ್ದರಾಮಯ್ಯ ಮತ್ತು ಬಸವರಾಜ ಬೊಮ್ಮಾಯಿ
Published on

ಬೆಂಗಳೂರು: ಭ್ರಷ್ಟ ಮುಖ್ಯಮಂತ್ರಿ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ.

ದಿಂಬಿನಲ್ಲಿಯೂ ಬಿಡಲಿಲ್ಲ

ಕರ್ನಾಟಕ ಕಂಡಂತ ಅತ್ಯಂತ ಭ್ರಷ್ಟ ಸರ್ಕಾರ ನಿಮ್ಮದು. 2013 ರಿಂದ 18 ರವರೆಗೆ ಭ್ರಷ್ಟ ಸರ್ಕಾರ ನಡೆಸಿದವರು ನೀವು. ಬಿಡಿಎಯಲ್ಲಿ ರಿಡೂ ಭ್ರಷ್ಟಾಚಾರ, ಸಣ್ಣ ಹಾಗೂ ಬೃಹತ್ ನಿರಾವರಿ, ಎಸ್ಸಿ-ಎಸ್ಟಿ ಮಕ್ಕಳಿಗೆ ನೀಡುವ ಹಾಸಿಗೆ ದಿಂಬಿನಲ್ಲಿಯೂ ಬಿಡಲಿಲ್ಲ.

ನೈತಿಕ ಅಧಿಕಾರ ಇಲ್ಲ

ಲೋಕಾಯುಕ್ತವನ್ನು ಸಂಪೂರ್ಣ ನಿಷ್ಕ್ರೀಯ ‌ಮಾಡಿದ ಖ್ಯಾತಿ ನಿಮ್ಮದು. ಎಸಿಬಿ ಮಾಡಿ ಎಲ್ಲ ಹಗರಣ ಮುಚ್ಚಿ ಹಾಕುವ ಕೆಲಸ ಮಾಡದ್ದೀರಿ. ಭ್ರಷ್ಟ ಅಧಿಕಾರಿ ಹಾಗೂ ರಾಜಕರಣಿಗಳನ್ನು ರಕ್ಷಣೆ ಮಾಡಿದ್ದೀರಿ. ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್​ಗೆ ನೈತಿಕ ಅಧಿಕಾರ ಇಲ್ಲ. ನಿಮ್ಮಿಂದ ಸರ್ಟಿಫಿಕೆಟ್ ಪಡೆಯುವ ಅವಶ್ಯಕತೆಯಿಲ್ಲ ಎಂದು ಬೊಮ್ಮಾಯಿ ಟ್ವೀಟ್​ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಂತಹ ಸಮಯದಲ್ಲಿ ನಡೆದಿದೆ ಎನ್ನಲಾದ ಸಾಲು, ಸಾಲು ಭ್ರಷ್ಟಾಚಾರ ಪ್ರಕರಣವನ್ನು ಉಲ್ಲೇಖಿಸಿ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಭ್ರಷ್ಟ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ ಮೂಲಕವೇ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net