More

    ಆಡಳಿತಕ್ಕೆ ಚುರುಕು: ಸಿಎಂ ನೇತೃತ್ವದಲ್ಲಿ ಬಜೆಟ್​ ಅನುಷ್ಠಾನದ ಸಭೆ

    ಬೆಂಗಳೂರು: 2022-23 ನೇ ಸಾಲಿನ ಬಜೆಟ್ ಅನುಷ್ಠಾನ ಕುರಿತು ಸಭೇ ನಡೆಸಿದ ಮುಖ್ಯಮಂತ್ರಿಗಳು ಆಡಳಿತ ವರ್ಗಕ್ಕೆ ಚುರುಕು ಮುಟ್ಟಿಸಿದರು.
    ಕಡತ ವಿಲೇವಾರಿ ಹಾಗೂ ಇನ್ನಿತರೆ ವಿಷಯಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು.

    ಸಭೆ ನಂತರ ಮಾತನಾಡಿದ ಸಿಎಂ‌ ಬಸವರಾಜ್ ಬೊಮ್ಮಾಯಿ, ಮೊನ್ನೆ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒಗಳ ಹಂತದ ಸಭೆ ಮಾಡಿದ್ದೆವು.ಜಿಲ್ಲಾ ಹಂತದ ಆಡಳಿತ ಚುರುಕುಗೊಳಿಸಿ ಸರ್ಕಾರದ ಕಾರ್ಯಕ್ರಮ ಜನರಿಗೆ ಮುಟ್ಟಿಸಲು ಸೂಚಿಸಿದ್ದೆವು.ಅದೇ ರೀತಿ ರಾಜ್ಯ ಮಟ್ಟದ ಅಧಿಕಾರಿಗಳಿಗೂ ಸೂಚನೆ ಕೊಡಬೇಕು ಎಂದು ಹೇಳಿದರು.

    ಬಜೆಟ್ ಇಂಪ್ಲಿಮೆಂಟ್ ಮಾಡುವುದು ಸೇರಿದಂತೆ, ಹಲವು ಯೋಜನೆಗಳಿಗೆ ಸಂಬಂಧಿಸಿದಂತೆ ಇಲಾಖೆಗಳ ಕೋ ಆರ್ಡಿನೇಷನ್ ಇಲ್ಲ.ಅದನ್ನ ಯಾವ ರೀತಿ ಮಾಡಬೇಕು ಅಂತ ಚರ್ಚೆ ಮಾಡಿದ್ದೇವೆ.ವಿಶೇಷವಾಗಿ ಬಡವರ ಕಾರ್ಯಕ್ರಮ ಸಕಾಲದಲ್ಲಿ ಇಂಪ್ಲಿಮೆಂಟ್ ಆಗಬೇಕು.ಕಟ್ಟಕಡೆಯ ವ್ಯಕ್ತಿಗೂ ಯೋಜನೆಗಳು ಮುಟ್ಟಬೇಕು ಎಂದರು.

    ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ವಿ ಸೋಮಣ್ಣ, ಜೆ ಸಿ ಮಾಧುಸ್ವಾಮಿ, ಮುನಿರತ್ನ, ಎಂ ಟಿ ಬಿ ನಾಗರಾಜ, ಡಾ. ನಾರಾಯಣಗೌಡ, ಅರಗ ಜ್ಞಾನೇಂದ್ರ, ಬೈರತಿ ಬಸವರಾಜ ಸೇರಿದಂತೆ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಅಲ್ಲದೇ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆಯಲ್ಲಿ ಇದ್ದರು.

    ಗೆಳೆಯರೊಂದಿಗೆ ಡ್ಯಾನ್ಸ್​ ಮಾಡುವಲ್ಲೇ ಮಗ್ನನಾದ ವರ: ಇತ್ತ ಬೇರೆಯವನನ್ನು ವರಿಸಿದ ವಧು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts