More

    ಮೋದಿ ಸರ್ಕಾರವೇ ಮಾಡಿದ್ದು ಅಂತ ಜನರಿಗೂ ಗೊತ್ತಾಗಿದೆ; ಯಾರಿಗೆ ಕ್ರೆಡಿಟ್ ಅಂತ ಜನರೇ ನಿರ್ಧರಿಸಲಿ: ಸಿಎಂ

    ಬೆಂಗಳೂರು: ಮೈಸೂರು-ಬೆಂಗಳೂರು ದಶಪಥ ಇದೀಗ ಕ್ರೆಡಿಟ್​ ವಾರ್​ಗೆ ವೇದಿಕೆಯಾಗಿ ಪರಿಣಮಿಸಿದ್ದು, ಎಲ್ಲ ಪಕ್ಷಗಳವರೂ ರಸ್ತೆಗೆ ಕಾರಣ ನಾವು ಎಂದು ಕ್ರೆಡಿಟ್​ ತೆಗೆದುಕೊಳ್ಳಲು ಆರಂಭಿಸಿದ್ದಾರೆ. ಈ ಮಧ್ಯೆ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಕ್ರೆಡಿಟ್ ಯಾರಿಗೆ ಸಲ್ಲಬೇಕು ಎಂಬುದನ್ನೂ ಹೇಳಿದ್ದಾರೆ.

    ಇದನ್ನೂ ಓದಿ: ಸದ್ಯಕ್ಕಿಲ್ಲ 5 ಮತ್ತು 8ನೇ ತರಗತಿ ಪರೀಕ್ಷೆ; ಮುಂದೂಡುವುದಾಗಿ ಹೇಳಿದ ಸರ್ಕಾರ

    ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 2014ರಲ್ಲಿ ಘೋಷಣೆ ಆಗಿ, ಡಿಪಿಆರ್​ ಕೂಡ ಆಯಿತು. ಅದು ಅಲೈನ್ಮೆಂಟ್ ಆಗಿದ್ದು 2015ರಲ್ಲಿ ಆಗ ಎನ್​ಡಿಎ ಸರ್ಕಾರವಿತ್ತು‌. ಬೆಂಗಳೂರು-ಮೈಸೂರು ಹೈವೇ 2016ರಲ್ಲಿ ನ್ಯಾಷನಲ್ ಹೈವೇ ಅಥಾರಿಟಿಗೆ ಹ್ಯಾಂಡ್ ಓವರ್ ಆಯ್ತು‌. ಆಗಲೂ ಎನ್​ಡಿಎ ಸರ್ಕಾರವಿತ್ತು‌. ಆಮೇಲೆ ಟೆಂಡರ್ ಪ್ರಕ್ರಿಯೆ ಮುಗಿದು ಹಣ ಬಿಡುಗಡೆ ಕೂಡ ಆಗಿ, 2023ರಲ್ಲಿ ದಶಪಥ ನಿರ್ಮಾಣ ಕೂಡ ಮುಗಿದಿದೆ ಎಂದು ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

    ಇದನ್ನೂ ಓದಿ: ಈ ಸಮಯದಲ್ಲಿ ಮಲಗಿದರೆ ಹೃದಯಾಘಾತ ಸಾಧ್ಯತೆ ಕಡಿಮೆ ಅಂತೆ; ಅಧ್ಯಯನದಲ್ಲಿ ಬಯಲಾಯಿತು ಹೃದಯದ ಆರೋಗ್ಯ ಮಾಹಿತಿ

    ಸಂಪೂರ್ಣ ಎನ್​​ಡಿಎ ಅವಧಿಯಲ್ಲೇ ಈ ಯೋಜನೆ ಆಗಿದ್ದು, ಮೋದಿಯವರ ನೇತೃತ್ವದಲ್ಲಿ ಈ ಯೋಜನೆಯಾಗಿದೆ. ಜನರಿಗೆ ಮಾಹಿತಿ ಕೊಡಬೇಕು ಅಂತ ನಾನು ಕೊಟ್ಟಿದ್ದೇನೆ. ಈ ಮಧ್ಯೆ ನೈಸ್ ರೋಡ್ ಮಾಡ್ತೀವಿ ಅಂತ ನಿಲ್ಲಿಸಿದ್ದರು, ನೈಸ್ ರೋಡ್ ಸಹ ಬರಲಿಲ್ಲ ಇದು ಆಗಲಿಲ್ಲ. ಆಗ ವಾಹನ ದಟ್ಟಣೆ ಜಾಸ್ತಿ ಆಯ್ತು ಅಂತ ಮೋದಿ ನೇತೃತ್ವದ ಸರ್ಕಾರ ಈ ಯೋಜನೆ ಮುಗಿಸಿದಿದೆ. ಯಾರಿಗೆ ಕ್ರೆಡಿಟ್ ಎನ್ನುವುದನ್ನು ಜನರು ತೀರ್ಮಾನ ಮಾಡಲಿ, ಮೋದಿ ನೇತೃತ್ವದ ಸರ್ಕಾರ ತಾನೇ ಹಣ ಬಿಡುಗಡೆ ಮಾಡಿ ಯೋಜನೆ ಮುಗಿಸಿದ್ದು. ಮೋದಿ ಸರ್ಕಾರವೇ ಈ ಯೋಜನೆ ಮಾಡಿದ್ದು ಅಂತ ಜನರಿಗೂ ಗೊತ್ತಾಗಿದೆ ಅಂತ ನಾನು ಭಾವಿಸುತ್ತೇನೆ. ಇದರ ಸಂಪೂರ್ಣ ಕ್ರೆಡಿಟ್ ನರೇಂದ್ರ ಮೋದಿ ಅವರಿಗೇ ಎಂದು ಸಿಎಂ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts