ಎಕ್ಸಿಟ್ ಪೋಲ್ ಒಂದೇ ರೀತಿ ಇಲ್ಲ; ಮೇ 13ರವರೆಗೆ ಕಾಯೋಣ: ಬೊಮ್ಮಾಯಿ‌

Basavaraja Bommai
ಸಾಂದರ್ಭಿಕ ಚಿತ್ರ
Published on

ಹಾವೇರಿ: ಮತದಾನೋತ್ತರ ಸಮೀಕ್ಷೆಗಳು (ಎಕ್ಸಿಟ್ ಪೋಲ್) ಒಂದೊಂದು ರೀತಿ ಫಲಿತಾಂಶವನ್ನು ತೋರಿಸುತ್ತಿವೆ. ನಮ್ಮ ಪಕ್ಷದ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಪ್ರಕಾರ ನಾವು ಸಂಪೂರ್ಣ ಬಹುಮತ ಪಡೆಯುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಬುಧವಾರ ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದೂ ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚುನಾವಣೆಯ ನಿಜವಾದ ಫಲಿತಾಂಶಕ್ಕೆ ಮೇ 13ರವರೆಗೆ ಕಾಯೋಣ. ರೆಸಾರ್ಟ್‌ ರಾಜಕೀಯ ನಡೆಯುವ ಸಾಧ್ಯತೆ ಇಲ್ಲ. ಈ ಬಾರಿ ಅತಂತ್ರ ಫಲಿತಾಂಶ ಬರುವ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಜೆಡಿಎಸ್ ಕಿಂಗ್ ಮೇಕರ್ ಆಗುವ ಅವಶ್ಯಕತೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net