More

    ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ… ರಾಹುಲ್​ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ: ಸಿಎಂ ಬೊಮ್ಮಾಯಿ

    ಬೆಂಗಳೂರು: ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ಕಾನೂನಿನ ಪ್ರಕಾರವೇ ಎಲ್ಲವೂ ನಡೆಯಲಿದೆ ಎಂದು ಸಂಸತ್​ ಸದಸ್ಯತ್ವದಿಂದ ರಾಹುಲ್​ ಗಾಂಧಿ ಅನರ್ಹ ಮಾಡಿರುವ ಕುರಿತು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

    ಕಬ್ಬನ್​ ಪಾರ್ಕಿನಲ್ಲಿ ಶನಿವಾರ ನವೀಕೃತಗೊಂಡ ಬಾಲಭವನ ಉದ್ಘಾಟಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಏನು ಮಾತನಾಡಿದರೂ ನಡೆಯುತ್ತದೆ ಎನ್ನುವ ಭಾವನೆ ಇದೆ ಇದನ್ನು ಸರಿಪಡಿಸಿಕೊಳ್ಳಲು ಅವಕಾಶವಿತ್ತು. ಆದರೆ, ಅವರು ಸರಿಪಡಿಸಿಕೊಳ್ಳಲಿಲ್ಲ. ವಿರೋಧ ಪಕ್ಷದದವರನ್ನ ಚುನಾವಣೆಯಲ್ಲಿ ಸೋಲಿಸಬೇಕು ಅಥವಾ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು. ಅದು ಬಿಟ್ಟು ಹಾದಿಬೀದಿಯಲ್ಲಿ ವೈಯಕ್ತಿಕ ನಿಂದನೆ ಮಾಡಬಾರದು ಎಂದು ಹೇಳಿದ್ದಾರೆ.

    ರಾಹುಲ್ ಗಾಂಧಿ ಕೇವಲ ವ್ಯಕ್ತಿಯ ವಿರುದ್ಧ ಅಲ್ಲ ಒಂದು ವರ್ಗದ ವಿರುದ್ಧ ಮಾತನಾಡಿದ್ದಾರೆ. ಬಹಳ ಜನರಿಗೆ ಇದರಿಂದ ನೋವಾಗಿದೆ. ಅವರೆಲ್ಲರೂ ನ್ಯಾಯಾಲಯದಲ್ಲಿ ಪ್ರಕರಣವನ್ನ ದಾಖಲಿಸಿದ್ದರು ಅದರ ತೀರ್ಪು ಬಂದಿದೆ. ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ ದೇಶದಲ್ಲಿ ಕಾನೂನು ವ್ಯವಸ್ಥೆಯಿದ್ದು ಕಾನೂನಿನ ಪ್ರಕಾರವೇ ಎಲ್ಲವೂ ನಡೆಯಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

    ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ… ರಾಹುಲ್​ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ: ಸಿಎಂ ಬೊಮ್ಮಾಯಿ

    ಇನ್ನು ಕಾಂಗ್ರೆಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕುರಿತು ಪ್ರತಿಕ್ರಿಯಿಸಿ ಇದರಲ್ಲಿ ಯಾವುದೇ ಆಶ್ಚರ್ಯ ಮತ್ತು ಹೊಸತೇನಿಲ್ಲ. ಬಿಜೆಪಿ ಪಟ್ಟಿ ಬಿಡುಗಡೆ ಕುರಿತು ಕಾಯ್ದು ನೋಡಿ ಎಂದು ಹೇಳಿದ್ದಾರೆ.

    ಮತ್ತೊಮ್ಮೆ ಬಿಜೆಪಿ ಸರ್ಕಾರ ನಿಶ್ಚಿತ

    ಇಂದು ದಾವಣಗೆರೆಯಲ್ಲಿ ಬಿಜೆಪಿ ವತಿಯಿಂದ ಬೃಹತ್​ ಸಮಾವೇಶ ನಡೆಸಲಾಗುತ್ತಿದ್ದು ಸುಮಾರು 10 ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ವಿಜಯದ ಕಹಳೆಯನ್ನ ಉದಲಿದ್ದಾರೆ.

    ದಾವಣಗೆರೆಯಿಂದ ವಿಜಯ ಯಾತ್ರೆ ಆರಂಭವಾಗಲಿದ್ದು ಪ್ರಧಾನಿ ಮೋದಿಯವರ ದೊಡ್ಡಬಲ ನಮಗಿದೆ. ಡಬಲ್​ ಇಂಜಿನ್​ ಸರ್ಕಾರದ ಸಾಧನೆಗಳನ್ನ ಜನರ ಮುಂದಿಟ್ಟು ಅವರ ಆಶೀರ್ವಾದವನ್ನ ಪಡೆದು ಬಿಜೆಪಿ ಸರ್ಕಾರ ರಚನೆಯಾಗಲಿದೆ. ಮೇ ತಿಂಗಳಲ್ಲಿ ಪ್ರಧಾನಿ ಮೋದಿಯವರನ್ನು ಮತ್ತೊಮ್ಮೆ ವಿಜಯೋತ್ಸವಕ್ಕೆ ಆಹ್ವಾನಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ; ಸಿಎಂ ಬೊಮ್ಮಾಯಿ

    ಇದನ್ನೂ ಓದಿ: ಮೈಸೂರಿನಲ್ಲಿ ಕೇರಳ ಯುವತಿ ಸಾವು: ಪಾಲಕರ ಆರೋಪ ಬೆನ್ನಲ್ಲೇ ಸ್ನೇಹಿತ ಪೊಲೀಸ್​ ವಶಕ್ಕೆ


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts