More

    ನಿಮ್ಮ ಹೇಳಿಕೆ ಸವಾಲಾಗಿ ಸ್ವೀಕರಿಸಿದ್ದೇವೆ; ಡಿಕೆಶಿಗೆ ಸಿಎಂ ಬೊಮ್ಮಾಯಿ ತಿರುಗೇಟು

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನದ ದಿನ ಸಮೀಪಿಸಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.

    ಇನ್ನು ಲಿಂಗಾಯತ ನಾಯಕರು ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಮನೆಯಲ್ಲಿ ಸಭೆ ನಡೆಸಿದ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​ ಅಣೆಕಟ್ಟು ಒಡೆದ ಮೇಲೆ ನೀರು ಸಮುದ್ರ ಸೇರಬೇಕು ಎಂಬ ಹೇಳಿಕೆಗೆ ಸಿಎಂ ಬಸವರಾಜ್​ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

    ಲಿಂಗಾಯತ ಡ್ಯಾಂ ಒಡೆದಿದೆ

    ಆಣೆಕಟ್ಟು ಒಡೆದ ನಂತರ ನೀರನ್ನು ನಿಲ್ಲಿಸಲು ಸಾಧ್ಯವಿಲ್ಲ. ಈ ನೀರು ಸಮುದ್ರ ಸೇರಬೇಕು. ಕಾಂಗ್ರೆಸ್ ಸಮುದ್ರ ಇದ್ದಂತೆ ಬಿಜೆಪಿಯಿಂದ ಹೊರ ಬಂದವರು ಕಾಂಗ್ರೆಸ್ ಸಮುದ್ರಕ್ಕೆ ಎಲ್ಲರೂ ಬಂದು ಸೇರಬೇಕು. ಬಿಜೆಪಿ ಹೊಸದಾಗಿ ಅಣೆಕಟ್ಟು ಕಟ್ಟುವ ಕೆಲಸ ಮಾಡಲಿ ಎಂದಿದ್ದರು.

    ಬಿಜೆಪಿಯ ಲಿಂಗಾಯತ ಡ್ಯಾಂ ಒಡೆದಿದೆ. ಡ್ಯಾಂ ಒಡೆದು ದೊಡ್ಡ ದೊಡ್ಡ ಕಲ್ಲುಗಳು ಹೊರ ಬಂದಿವೆ. ಹರಿಯೋ ನೀರು ಸಮುದ್ರ ಸೇರಲೆಬೇಕಲ್ಲ. ಕಾಂಗ್ರೆಸ್ ಎಂಬ ಸಮುದ್ರವನ್ನು ಸೇರುತ್ತಿವೆ ಎಂದು ಮಾಜಿ ಸಿಎಂ ಬಿಎಸ್​ವೈ ಮನೆಯಲ್ಲಿ ನಡೆದ ಸಭೆ ಕುರಿತು ಪ್ರತಿಕ್ರಿಯಿಸಿದ್ದರು.

    ಇದನ್ನೂ ಓದಿ: ಗ್ಯಾಸ್​ ಸ್ಟೇಷನ್​ನಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ; ಆರೋಪಿ ಫೋಟೋ ಬಿಡುಗಡೆ

    ಸವಾಲಾಗಿ ಸ್ವೀಕರಿಸಿದ್ದೇವೆ

    ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್​ ಬೊಮ್ಮಾಯಿ ಡಿ.ಕೆ. ಶಿವಕುಮಾರ್​ ಅವರೇ ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂದು ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ.

    2018 ರಲ್ಲಿ ನಿಮ್ಮ ಸರ್ಕಾರ ಇದ್ದು ಇದನ್ನು ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ. ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ, ನಿಮ್ಮ ಹೇಳಿಕೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಮೇ 13 ಕ್ಕೆ ಯಾರ್ ಯಾರ ಡ್ಯಾಮ್ ನಲ್ಲಿ ಎಷ್ಟು ನೀರಿದೆ ಅಂತ ಗೊತ್ತಾಗುತ್ತದೆ.

    ನಿಮ್ಮ ಹೇಳಿಕೆಯಿಂದ ಲಿಂಗಾಯತ ಧರ್ಮವನ್ನು ಒಡೆಯುವ ಮತ್ತೊಂದು ಹುನ್ನಾರ ಬಯಲಾಗಿದೆ ಎಂದು ಟ್ವೀಟ್​ ಮಾಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಹೇಳಿಕೆಗೆ ತಿರುಗೇಟು ನೀಡಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts