ಮತ್ತೆ ದೆಹಲಿ ಕಡೆಗೆ ಸಿಎಂ ಬಸವರಾಜ ಬೊಮ್ಮಾಯಿ!

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೆ ರಾಜಧಾನಿ ದೆಹಲಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ(ಸೆ.7) ಬೆಳಗ್ಗೆ 11-30 ಕ್ಕೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿರುವ ಸಿಎಂ, ಎರಡು ದಿನಗಳ ದೆಹಲಿ ಪ್ರವಾಸ ನಡೆಸಲಿದ್ದಾರೆ. ಮಂಗಳವಾರ ಸಂಜೆ ದೆಹಲಿಯಲ್ಲಿ ಆಯೋಜಿಸಲ್ಪಟ್ಟಿರುವ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರ ಮಗಳ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ. ಬುಧವಾರ, 8ನೇ ತಾರೀಖಿನಂದು ಕೇಂದ್ರ ಸಚಿವರನ್ನು ಮತ್ತು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿದ್ದು, ಬಳಿಕ ರಾತ್ರಿ ಬೆಂಗಳೂರಿಗೆ ಮರುಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ. … Continue reading ಮತ್ತೆ ದೆಹಲಿ ಕಡೆಗೆ ಸಿಎಂ ಬಸವರಾಜ ಬೊಮ್ಮಾಯಿ!