More

    ಸಿಎಂ ಬೊಮ್ಮಾಯಿ ಜಿಲ್ಲಾ ಪ್ರವಾಸ ನಾಳೆ

    ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆ.27ರಂದು ಜಿಲ್ಲೆಯ ಶಿಗ್ಗಾಂವಿ- ಸವಣೂರು ತಾಲೂಕಿನ ಪ್ರವಾಸ ಕೈಗೊಂಡು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
    ಸಂಜೆ 6.45ಕ್ಕೆ ಶಿಗ್ಗಾಂವಿ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿರುವ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8 ಗಂಟೆಗೆ ದೊಡ್ಡಹುಣಸೆ ಕಲ್ಮಠದ ಶರಣ ಸಂಸ್ಕೃತಿ ಸಮಾರಂಭದಲ್ಲಿ ಪಾಲ್ಗೊಳ್ಳುವರು. ರಾತ್ರಿ 9 ಗಂಟೆಗೆ ತೆಗ್ಗಿಹಳ್ಳಿ ಗ್ರಾಮದೇವತಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ನಂತರ ಹುಬ್ಬಳ್ಳಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts