ಹಕ್ಕಿಪಿಕ್ಕಿ, ಅಲೆಮಾರಿಗಳಿಗಾಗಿ 700 ಮನೆಗಳು; ಕಾಮಗಾರಿ ವೀಕ್ಷಿಸಿದ ಸಿಎಂ ಬೊಮ್ಮಾಯಿ..

cm bcpatil
Published on

ಚಿತ್ರದುರ್ಗ: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿನ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಹೊಸದುರ್ಗದಲ್ಲಿ ಹಕ್ಕಿಪಿಕ್ಕಿ ಹಾಗೂ ಅಲೆಮಾರಿ ಜನಾಂಗದವರಿಗಾಗಿ ಮನೆಗಳನ್ನು ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲನೆ ಮಾಡಿದರು.

ಹಕ್ಕಿಪಿಕ್ಕಿ ಹಾಗೂ ಅಲೆಮಾರಿ ಜನಾಂಗದವರಿಗಾಗಿ ಒಟ್ಟು 700 ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಿ.ಸಿ.ಪಾಟೀಲ್​, ಶಾಸಕರಾದ ಗೂಳಿಹಟ್ಟಿ ಶೇಖರ್ ಮತ್ತಿತರರು ಹಾಜರಿದ್ದರು.

ಇಂದು ಜಿಲ್ಲೆಯಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಬೊಮ್ಮಾಯಿ ಅವರು ಅಂಗವಿಕಲರಿಗೆ ದ್ವಿಚಕ್ರ ವಾಹನವನ್ನು ವಿತರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net