ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಯಡಿಯೂರಪ್ಪಗೆ ಶುಭಕೋರಿದ ಸಿಎಂ

basavaraja bommai
Published on

ಶಿವಮೊಗ್ಗ: ನೂತನ ವಿಮಾನ ನಿಲ್ದಾಣದ ಉದ್ಘಾಟನೆಗೆಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ 11.40ಕ್ಕೆ ವಿಶೇಷ ವಿಮಾನದ ಮೂಲಕ ಶಿವಮೊಗ್ಗದ ವಿಮಾನ ನಿಲ್ದಾಣದಕ್ಕೆ ಪ್ರಧಾನಿ ಮೋದಿ ಬಂದಿಳಿದರು.

ವಿಮಾನ ನಿಲ್ದಾಣ ಉದ್ಘಾಟನೆ ಮಾಡಿ ಪ್ರಧಾನಿ ಮೋದಿ, ವಿಮಾನ ನಿಲ್ದಾಣವನ್ನು ವೀಕ್ಷಣೆ ಮಾಡಲಿದ್ದಾರೆ. ನಂತರ ವಿಮಾನ ನಿಲ್ದಾಣ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಬಗ್ಗೆ ಮಾತನಾಡಿದ್ದಾರೆ. 'ಯಡಿಯೂರಪ್ಪ ಅವರು ಹೋರಾಟದಿಂದಲೇ ಬೆಳೆದುಬಂದವರು. ಪುರಸಭೆ ಅಧ್ಯಕ್ಷರಾಗಿದ್ದಾಗ ಅವರ ಮೇಲೆ ಹಲ್ಲೆಯಾಗಿತ್ತು. ಆದರೆ ಎದೆಗುಂದದೆ ಪುಟಿದು ಎದ್ದು ಬಂದಿದ್ದಾರೆ. ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಯಡಿಯೂರಪ್ಪ ಅವರಿಗೆ ಜನ್ಮ ದಿನದ ಶುಭಾಶಯಗಳು' ಎಂದು ಮುಖ್ಯಮಂತ್ರಿ ಶುಭಾಶಯ ಕೋರಿದ್ದಾರೆ.

ಈ ಸಂದರ್ಭ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೂರು ಕಾಲ ಚನ್ನಾಗಿ ಬಾಳಲಿ ಎಂದು ಸಿಎಂ ಬೊಮ್ಮಾಯಿ ಶುಭ ಹಾರೈಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net