More

    ಮೀಸಲಾತಿ ವಿರೋಧಿಸಿ ಬಿಎಸ್​ವೈ ನಿವಾಸದ ಮೇಲೆ ಕಲ್ಲು ತೂರಾಟ | ಕಾಂಗ್ರೆಸ್​‌ನವರ ಪ್ರಚೋದನೆಯನ್ನು ಖಂಡಿಸುತ್ತೇನೆ; ಸಿಎಂ ಬೊಮ್ಮಾಯಿ

    ದೇವನಹಳ್ಳಿ: ರಾಜ್ಯ ಸರ್ಕಾರ ಮೀಸಲಾತಿ ಪ್ರಕಟ ಮಾಡಿದ ಕ್ರಮವನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ನಗರದ ಮಾಳರಕೇರಿ ಬಡಾವಣೆಯಲ್ಲಿನ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.

    ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ತಾಂಡಾ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, ಆ ಭಾಗದ ತಾಂಡಾಗಳಿಗೆ ಮೂಲಭೂತ ಸೌಲಭ್ಯ ಕೊಟ್ಟವರು ಯಡಿಯೂರಪ್ಪನವರು. ಪ್ರತಿಭಟನೆಯ ಹೆಸರಿನಲ್ಲಿ ಹಿಂಸೆಗೆ ಅವಕಾಶ ಇಲ್ಲ. ಏನೇ ವಿಷಯ ಇದ್ದರೂ ಕೂತು ಬಗೆಹರಿಸೋಣ. ಇದರಲ್ಲಿ ಸ್ಥಳೀಯ ಕಾಂಗ್ರೆಸ್ ಪ್ರಚೋದನೆ ಇದೆ. ಸಾಮಾಜಿಕ ನ್ಯಾಯ ನೀಡಿದ ಮೇಲೆ ತಡೆದುಕೊಳ್ಳುಲು ಆಗದೆ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಈ ಮರದ ಭದ್ರತೆಗೆ ಇದುವರೆಗೂ ಖರ್ಚಾಗಿದ್ದು 64 ಲಕ್ಷ ರೂ.!

    ಬಂಜಾರ ಸಮುದಾಯದ ಮುಖಂಡರಲ್ಲಿ ನಾನು ವಿನಂತಿ ಮಾಡುತ್ತೇನೆ. ಸದಾಶಿವ ಆಯೋಗ ಶಿಫಾರಸ್ಸು ವರದಿ ನಾವು ಜಾರಿ ಮಾಡಿಲ್ಲ. ಬೋವಿ, ಲಂಬಾಣಿ, ಕೊರಮ, ಕೊರಚ ಸಮುದಾಯ ಕೂಡ ಎಸ್​ಇ ಪಟ್ಟಿಯಲ್ಲಿ ಇರುತ್ತವೆ. ನಾನೇ ಸ್ವಂತ ಆದೇಶ ಮಾಡಿ ಕೇಂದ್ರ ಸರ್ಕಾರಕ್ಕೆ ಕಳಿಸಲಾಗಿದೆ. ಮೂರು ಪರ್ಸೆಂಟ್ ಬದಲು ನಾಲ್ಕೂವರೆ ಪರ್ಸೆಂಟ್ ಕೊಟ್ಟಿದ್ದೇವೆ. ಯಾವುದೇ ಗೊಂದಲವಿಲ್ಲದೆ ಸಮುದಾಯದ ಹಿತರಕ್ಷಣೆ ಮಾಡಿದ್ದೇವೆ. 2 ಲಕ್ಷ ಹಕ್ಕು ಪತ್ರಗಳನ್ನು ಲಂಬಾಣಿ ತಾಂಡಾದ ಜನರಿಗೆ ಈಗಾಗಲೇ ನೀಡಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

    ಬಂಜಾರ ಸಮುದಾಯ ಯಾವುದೇ ಪ್ರಚೋದನೆಗೆ ಒಳಗಾಗಬಾರದು. ಈ ಹಿಂದಿನಿಂದಲೂ ಬಂಜಾರ ಸಮುದಾಯದ ರಕ್ಷಣೆ ಮೊದಲಿಂದಲೂ ಬಿಜೆಪಿ ಮಾಡುತ್ತಿದ್ದು, ಮುಂದೆಯೋ‌ ಮಾಡುತ್ತದೆ. ತಪ್ಪು ದಾರಿ ಪ್ರಯತ್ನಗಳಿಗೆ ಅವಕಾಶ ಮಾಡಿಕೊಡಬಾರದು. ಕಾಂಗ್ರೆಸ್​‌ನವರ ಕೃತ್ಯಕ್ಕೆ ಖಂಡನೆ ಮಾಡುತ್ತೇನೆ. ಸಮಾಜದಲ್ಲಿ ರಾಜಕೀಯ ಲಾಭಕ್ಕಾಗಿ ಹಿಂಸೆಗೆ ಇಳಿಸುವುದು ಶೋಭೆ ತರುವುದಿಲ್ಲ. ಈಗ ಸುರ್ಜೇವಾಲಾ ಏನ್ ಹೇಳ್ತಾರೆ? ಹೇಳಬೇಕು. ಜನರ ಮಧ್ಯೆ ಜಗಳ ಹಚ್ಚುವ ಶಕುನಿ ಯಾರಾದರ ಇದ್ದರೆ, ಅದು ಕಾಂಗ್ರೆಸ್ ಪಕ್ಷ ಎಂದು ಸಿಎಂ ಬೊಮ್ಮಾಯಿ ಕಿಡಿಕಾರಿದರು. ಇದನ್ನೂ ಓದಿ: ಹೊಸ ಕಾರಿನಿಂದ ಬಯಲಾಯ್ತು ಹೆಂಡತಿಯ ಅಕ್ರಮ ಸಂಬಂಧ; ಪ್ರಶ್ನಿಸಿದ ಗಂಡನಿಗೆ ಜೀವ ಬೆದರಿಕೆ!

    ಮೀಸಲಾತಿ ಮತ್ತು ಒಳಮೀಸಲಾತಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಿಕಾರಿಪುರದಲ್ಲಿ ಸೋಮವಾರ ಬಂಜಾರ ಸಮುದಾಯದ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಲು ಯತ್ನಿಸಿದಲ್ಲದೆ, ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ಬೆನ್ನಲ್ಲೇ ಶಿಕಾರಿಪುರ ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. 

    ಇದನ್ನೂ ಓದಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ‘ಫುಟ್​ಬಾಲ್’ ಚಿಹ್ನೆ ನೀಡಿದ ಚುನಾವಣಾ ಆಯೋಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts