20.4 C
Bangalore
Monday, December 9, 2019

ಬಿಜೆಪಿ ಶಾಸಕರಿಗೆ ಬಂಪರ್ ಕೊಡುಗೆ: ಕ್ಷೇತ್ರಕ್ಕೆ 25 ಕೋಟಿ ರೂ. ಅನುದಾನ, ನೆರೆ ಪರಿಹಾರ, ಕ್ಷೇತ್ರಾಭಿವೃದ್ಧಿ ಕುರಿತು ಚರ್ಚೆ

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೆಂಗಳೂರು: ಪಕ್ಷದಲ್ಲಿ ಅಸಮಾಧಾನ ಹೊರ ಹಾಕುತ್ತಿರುವ ಶಾಸಕರ ಸಮಾಧಾನಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನೆರೆ- ಬರ ಪರಿಹಾರ, ಅಭಿವೃದ್ಧಿ ಕಾರ್ಯಗಳಿಗಾಗಿ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ 10 ಜಿಲ್ಲೆಗಳ ಬಿಜೆಪಿ ಶಾಸಕರ ಜತೆ ನೆರೆ-ಬರ, ಅಭಿವೃದ್ಧಿ ಕಾರ್ಯಗಳ ಕುರಿತು ಇಡೀ ದಿನ ಸಮಾಲೋಚನೆ ನಡೆಸಿ ಈ ಆಶ್ವಾಸನೆ ನೀಡಿದ್ದಾರೆ. ಲೋಕೋ ಪಯೋಗಿ, ಜಲಸಂಪನ್ಮೂಲ, ಗ್ರಾಮೀಣಾಭಿವದ್ಧಿ ಇಲಾಖೆಗಳ ಮೂಲಕ ಕಾಮಗಾರಿಗಳನ್ನು ಕೈಗೆತ್ತಿಕೊಂಡು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿ ಗಳಿಗೆ ಸಿಎಂ ಸೂಚಿಸಿದ್ದಾರೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ,

ಶಾಸಕರ ಜತೆ ಔಪಚಾರಿಕವಾಗಿ ಅಭಿವೃದ್ಧಿ ಮತ್ತು ಪ್ರವಾಹ ಕಾರ್ಯಗಳ ಬಗ್ಗೆ ಚರ್ಚೆಯಾಗಿದೆ. ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ಮರುನಿರ್ವಣ ನಮ್ಮ ಮಹತ್ವದ ಹೆಜ್ಜೆ. ಜತೆಗೆ ಹಾನಿಗೊಳಗಾದ ಶಾಲಾ ಕಟ್ಟಡಗಳ ದುರಸ್ಥಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ನೀರಾವರಿ ಯೋಜನೆಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಾಗುವುದು. ಮುಂದಿನವಾರ ಉಳಿದ ಜಿಲ್ಲೆಗಳ ಶಾಸಕರ ಜತೆ ಸಭೆ ನಡೆಸುತ್ತೇನೆ. ಶಾಸಕರ ಜತೆ ಸಭೆ ನಡೆಸುವುದರಿಂದ ಉತ್ತಮ ಅಭಿಪ್ರಾಯ ಸಂಗ್ರಹವಾಗುತ್ತದೆ ಎಂದು ಹೇಳಿದರು.

ನಾಳೆಯಿಂದಲೇ ಅಡಿಪಾಯ ಶುರು: ಸಂತ್ರಸ್ತರಿಗೆ ಮನೆ ಕಟ್ಟಿಕೊಳ್ಳಲು ನಾಳೆಯಿಂದಲೇ ಅಡಿಪಾಯ ಹಾಕುವ ಕೆಲಸವಾಗಬೇಕು. ಅದಕ್ಕಾಗಿ ಪ್ರತಿ ಮನೆಗೆ 1 ಲಕ್ಷ ರೂ. ಕೊಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಆದೇಶ ಕೂಡ ಕೊಟ್ಟಿದ್ದೇನೆ. ಸರ್ಕಾರದ ಇಮೇಜ್​ಗೆ ಧಕ್ಕೆಯಾಗದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸಚಿವರುಗಳಿಗೆ, ಶಾಸಕರಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.

ಯಾವ ಜಿಲ್ಲೆ ಶಾಕಸರು ಭಾಗಿ?: ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ, ಗದಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ ಜಿಲ್ಲೆಗಳ ಬಿಜೆಪಿ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.

ಇಂದಿನ ಸಭೆಗೆ ಬೇರೆ ಪಕ್ಷದ ಶಾಸಕರನ್ನು ಆಹ್ವಾನಿಸಿಲ್ಲ. ಮುಂದೆ ಕರೆದು ಚರ್ಚೆ ನಡೆಸುತ್ತೇನೆ. ಉಮೇಶ್ ಕತ್ತಿ ಬೆಳಗ್ಗೆ ಮನೆಗೆ ಬಂದು ಭೇಟಿಯಾಗಿ, ಅವರ ಕಾರ್ಖಾನೆ ಕಾರ್ಯಕ್ರಮಕ್ಕೆ ಆಹ್ವಾನ ಕೊಟ್ಟು ಹೋಗಿದ್ದಾರೆ. ರಾಮದಾಸ್ ದಸರಾದಲ್ಲಿ ಬ್ಯುಸಿಯಾಗಿದ್ದಾರೆ.

| ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ

ಉಮೇಶ್ ಕತ್ತಿ ಗೈರು

ಬೆಳಗಾವಿ ಶಾಸಕರ ಸಭೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕರಾದ ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ, ಆನಂದ ಮಾಮನಿ ಗೈರಾಗಿದ್ದರು. ಸವದಿ ಮತ್ತು ಬಾಲಚಂದ್ರ ದೆಹಲಿ ಪ್ರವಾಸದಲ್ಲಿದ್ದರೆ, ಆನಂದ ಮಾಮನಿ ಕೇಂದ್ರ ಸಚಿವರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕ್ಷೇತ್ರದಲ್ಲಿಯೇ ಉಳಿದುಕೊಂಡಿದ್ದರು. ಆದರೆ ಉಮೇಶ್ ಕತ್ತಿ ಬೆಂಗಳೂರಿನಲ್ಲಿದ್ದರೂ ಕೃಷ್ಣಾದತ್ತ ಬರಲಿಲ್ಲ. ಬೆಳಗ್ಗೆ ಡಾಲರ್ಸ್ ಕಾಲನಿಯ ಧವಳಗಿರಿಯಲ್ಲಿ ಸಿಎಂ ಭೇಟಿಯಾಗಿ ಹೋಗಿದ್ದರು.

ಆರಂಭದಲ್ಲೇ ಅತೃಪ್ತಿ ಶಮನ

ಒಂದೆಡೆ ನೆರೆ, ಇನ್ನೊಂದೆಡೆ ಬರ, ಮತ್ತೊಂದೆಡೆ ಪರಿಹಾರಕ್ಕೆ ಸಂತ್ರಸ್ಥರ ಮೊರೆ.. ಈ ಕಾರಣಕ್ಕಾಗಿ ಒತ್ತಡಕ್ಕೆ ಸಿಲುಕಿರುವ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ 10 ಜಿಲ್ಲೆಗಳ ಬಿಜೆಪಿ ಶಾಸಕರ ಜತೆ ಸಮಾಲೋಚನೆ ಸಭೆ ನಡೆಸಿದರು. ಕ್ಷೇತ್ರದ ಕುಂದುಕೊರತೆ ತಿಳಿಸಲು ಸಿಎಂ ಕೈಗೆ ಸಿಗುತ್ತಿಲ್ಲ ಎಂಬ ಅಸಮಾಧಾನ ಬಿಜೆಪಿ ವಲಯದಲ್ಲೇ ಕೇಳಿಬಂದಿತ್ತು. ಈ ವಿಷಯವನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್, ಬಿಎಸ್​ವೈ ಗಮನಕ್ಕೆ ತಂದ್ದಿದ್ದರ ಪರಿಣಾಮ ಸಭೆ ಆಯೋಜನೆಗೊಂಡಿತ್ತು ಎಂದು ಮೂಲಗಳು ತಿಳಿಸಿವೆ. ಶಾಸಕರ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಇರುವುದೇ ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಕಾರಣ ಎಂಬುದನ್ನು ಮನಗಂಡಿರುವ ಸಿಎಂ, ಶಾಸಕರಲ್ಲಿ ಯಾವುದೇ ಕಾರಣಕ್ಕೂ ಅಸಮಾಧಾನದ ಮೊಳಕೆ ಒಡೆಯ ಬಾರದೆಂದು ಆರಂಭದಲ್ಲೇ ಅತೃಪ್ತಿ ಶಮನಗೊಳಿಸುವ ಪ್ರಯತ್ನ ನಡೆಸಿದರು.

ಬೆಳಗಾವಿ ಅಧಿವೇಶನಕ್ಕೆ ನೆರೆ ಅಡ್ಡಿ?

ಬೆಂಗಳೂರು: ಪ್ರತಿ ವರ್ಷ ಬೆಳಗಾವಿಯಲ್ಲಿ ನಡೆಯುವ ಅಧಿವೇಶನಕ್ಕೆ ಈ ಬಾರಿ ನೆರೆಯ ಬಿಸಿ ತಟ್ಟಿದೆ. ಇತ್ತೀಚೆಗೆ ಸಂಭವಿಸಿದ ಪ್ರವಾಹದಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಹಾನಿಯಾಗಿರುವುದರಿಂದ ಜಿಲ್ಲಾಡಳಿತ ಸಮರೋಪಾದಿಯ ಪರಿಹಾರ ಕಾರ್ಯದಲ್ಲಿ ಮಗ್ನವಾಗಿದ್ದು, ಅಧಿವೇಶನ ನಡೆಸಿದರೆ ಅಡ್ಡಿಯಾಗಬಹುದು ಎಂಬ ಚಿಂತೆ ಕಾಡಿದೆ. ಜಿಲ್ಲಾಡಳಿ ತದೊಂದಿಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಸಚಿವೆ ಶಶಿಕಲಾ ಜೊಲ್ಲೆ, ಅಧಿವೇಶನಕ್ಕೆ ಇನ್ನೂ ಸಿದ್ಧತೆ ನಡೆಸಿಲ್ಲ ಎಂದರು. ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದರಿಂದ ಆಗುವ ಅನನುಕೂಲದ ಬಗ್ಗೆ ಸಿಎಂ ಜತೆ ರ್ಚಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಈ ಬಾರಿ ಅಧಿವೇಶನ ಸಾಧ್ಯವಾಗದಿದ್ದರೆ, ಮುಂದಿನ ಅಧಿವೇಶನ ಆದರೂ ನಡೆಸಬೇಕಾಗುತ್ತದೆ ಎಂದರು.

ಅಹವಾಲಿಗೆ ಸ್ಪಂದಿಸಿದ ಮುಖ್ಯಮಂತ್ರಿ

ರಾಜ್ಯದಲ್ಲಿ ಪ್ರವಾಹದಿಂದಾಗಿ ಪರಿಹಾರ ಕಾರ್ಯದಲ್ಲಿಯೇ ಮಗ್ನವಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ, ಸ್ವಪಕ್ಷೀಯ ಶಾಸಕರಿಂದಲೇ ದೂರವಾಗಿದ್ದಾರೆಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶನಿವಾರ ವಿವಿಧ ಜಿಲ್ಲೆಗಳ ಶಾಸಕರೊಂದಿಗೆ ಸಭೆ ನಡೆಸಿದರು. ವಿಶೇಷವಾಗಿ ಕ್ಷೇತ್ರಾಭಿವೃದ್ಧಿ ಮತ್ತು ನೆರೆ ಪರಿಹಾರ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ ಸಿಎಂ, ಶಾಸಕರ ಎಲ್ಲ ಅಹವಾಲುಗಳನ್ನು ಆಲಿಸಿ ಈಡೇರಿಕೆಯ ಭರವಸೆ ನೀಡಿದರು.

ನೆರೆ ಸಂತ್ರಸ್ತರಿಗಿಲ್ಲ ಪರಿಹಾರ: ಮೊದಲಿಗೆ ನಡೆದ ಬೆಳಗಾವಿ ಜಿಲ್ಲೆ ಜನಪ್ರತಿನಿಧಿಗಳ ಸಭೆಯಲ್ಲಿ, ಪರಿಹಾರ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿರುವುದಕ್ಕೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಡುವುದಾಗಿ ಸರ್ಕಾರ ಹೇಳಿದೆ. ಈವರೆಗೂ ಮನೆ ನಿರ್ಮಾಣ ಭರದಿಂದ ಸಾಗುತ್ತಿಲ್ಲ. ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ವಿಳಂಬವಾಗುತ್ತಿದ್ದು, ಕನಿಷ್ಟ ಪಕ್ಷ 1 ಲಕ್ಷ ರೂ. ಆದರೂ ಬಿಡುಗಡೆಗೆ ಸೂಚನೆ ನೀಡಬೇಕೆಂದು ಆಗ್ರಹಿಸಿದರು. ತಾತ್ಕಾಲಿಕವಾಗಿ ಶೆಡ್​ಗಳ ನಿರ್ವಣಕ್ಕೆ ಕ್ರಮ ಕೈಗೊಂಡು ಹಣ ಬಿಡುಗಡೆಗೊಳಿಸಬೇಕು ಎಂದೂ ಶಾಸಕರು ಮನವಿ ಮಾಡಿದರು. ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಡಿ.ಎಂ.ಐಹೊಳೆ, ಪಿ.ರಾಜೀವ್, ಅಭಯ್ ಪಾಟೀಲ, ಅನಿಲ್ ಬೆನಕೆ, ಮಹದೇವಪ್ಪ ಯಾದವಾಡ, ಮಹಾಂತೇಶ ದೊಡಗೌಡರ ಪಾಲ್ಗೊಂಡಿದ್ದರು.

ಅನರ್ಹ ಶಾಸಕ ಭಾಗಿ: ಕಾಗವಾಡ ಕ್ಷೇತ್ರದ ಅನರ್ಹ ಶಾಸಕ ಶ್ರೀಮಂತ ಪಾಟೀಲ್, ಬಿಜೆಪಿ ಶಾಸಕರ ಜತೆ ಚರ್ಚೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಕ್ಷೇತ್ರದ ಸಮಸ್ಯೆಗಳ ಕುರಿತು ಸಿಎಂ ಗಮನಕ್ಕೆ ತಂದರು.

ಶಾಸಕರ ಹಸನ್ಮುಖ: ಮುಖ್ಯಮಂತ್ರಿಗಳು ಅಹವಾಲು ಆಲಿಸಿದರು ಎಂಬ ಸಮಾಧಾನ ಕೂಡ ಅನೇಕ ಶಾಸಕರಲ್ಲಿ ಕಂಡುಬಂತು. ನಮ್ಮ ಸಮಸ್ಯೆಗಳನ್ನು ನೇರವಾಗಿ ತಿಳಿಸಲು ಇದರಿಂದ ಅನುಕೂಲವಾಯಿತು. ಸಮಾಧಾನ ಚಿತ್ತರಾಗಿ ಸಿಎಂ ನಮ್ಮ ಬೇಡಿಕೆಗಳನ್ನು ಕೇಳಿದ್ದಾರೆ. ಸ್ಥಳದಲ್ಲೇ ಹಲವು ಸಮಸ್ಯೆಗಳಿಗೆ ಪರಿಹಾರ ನೀಡಿದ್ದಾರೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆಗೂ ದೂರವಾಣಿಯಲ್ಲಿ ಮಾತನಾಡಿ ತ್ವರಿತವಾಗಿ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಿದ್ದಾರೆ ಎಂದು ಶಾಸಕರು ಸಂತಸ ವ್ಯಕ್ತಪಡಿಸಿದ್ದಾರೆ.

ಬೆಣ್ಣೆಹಳ್ಳ ಸಮಸ್ಯೆಗೆ ಶಾಶ್ವತ ಪರಿಹಾರ

ಧಾರವಾಡ ಜಿಲ್ಲೆಯ ಬೆಣ್ಣೆಹಳ್ಳಕ್ಕೆ ಪ್ರತಿ ವರ್ಷ ಮಳೆಗಾಲದಲ್ಲಿ ನೀರು ಉಕ್ಕಿ ಆಗುವ ಅನಾಹುತಗಳನ್ನು ತಪ್ಪಿಸಲು ಕ್ರಮಕೈಗೊಳ್ಳುವಂತೆ ಆ ಭಾಗದ ಶಾಸಕರು ಸಿಎಂಗೆ ಮನವಿ ಮಾಡಿಕೊಂಡರು. ಜಿಲ್ಲೆಯಲ್ಲಿ ಒಂದೇ ಒಂದು ನೀರಾವರಿ ಯೋಜನೆ ಇಲ್ಲದಿರುವುದನ್ನು ಗಮನಕ್ಕೆ ತಂದ ಶಾಸಕರು, ಬೆಣ್ಣೆ ಹಳ್ಳದ ಗುಂಟ ಕೆರೆ-ಕಟ್ಟುಗಳಿಗೆ ನೀರು ತುಂಬಿಸುವುದರಿಂದ ನೀರಿನ ಸದ್ಬಳಕೆಯೊಂದಿಗೆ, ಪ್ರವಾಹ ಭೀತಿಯನ್ನೂ ತಗ್ಗಿಸಬಹುದು ಎಂದು ಸಲಹೆ ನೀಡಿದರು. ಇದಕ್ಕೆ ಸ್ಪಂದಿಸಿದ ಸಿಎಂ, ಶೀಘ್ರ ನೀರಾವರಿ ಯೋಜನೆ ಅನುಷ್ಠಾನಕ್ಕೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಿಗೆ ಕುಡಿಯುವ ನೀರಿನ ಯೋಜನೆ, ಮೂಲಭೂತ ಸೌಕರ್ಯಗಳ ಅನುಷ್ಠಾನ ಕುರಿತಂತೆಯೂ ಜನಪ್ರತಿನಿಧಿಗಳು ಮನವಿ ಮಾಡಿಕೊಂಡರು. ಇದೇ ಸಂದರ್ಭ ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಜನಪ್ರತಿನಿಧಿಗಳೂ ಹಾಜರಿದ್ದು, ನೆರೆ ಪರಿಹಾರ ಶೀಘ್ರ ಕಾರ್ಯಗತಗೊಳಿಸಲು ಮನವಿ ಮಾಡಿದರು. ಮೂರು ಗಂಟೆಗಳ ಕಾಲ ನಡೆದ ಸುದೀರ್ಘ ಚರ್ಚೆಯಲ್ಲಿ ಸಚಿವ ಜಗದೀಶ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ, ಬಸನಗೌಡ ಪಾಟೀಲ ಯತ್ನಾಳ, ಚರಂತಿಮಠ, ಸಿದ್ದು ಸವದಿ ಇತರರು ಹಾಜರಿದ್ದರು.

ಹಿರೇಕೆರೂರು ಕ್ಷೇತ್ರಕ್ಕೂ 26.50 ಕೋಟಿ ರೂಪಾಯಿ

ಅನರ್ಹ ಶಾಸಕ ಬಿ.ಸಿ.ಪಾಟೀಲ್ ಮನವಿಗೆ ಸ್ಪಂದಿಸಿರುವ ಸಿಎಂ ಯಡಿಯೂರಪ್ಪ, ಒಟ್ಟು 26.50 ಕೋಟಿ ರೂ. ಬಿಡುಗಡೆಗೆ ಸಹಮತ ವ್ಯಕ್ತಪಡಿಸಿದ್ದಾರೆ. ಪಾಟೀಲ್ ಕೋರಿರುವಂತೆ ಲೋಕೋಪಯೋಗಿ ಇಲಾಖೆಗೆ 16.25 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 8.25 ಕೋಟಿ ರೂ. ಮತ್ತು ಎಸ್​ಎಫ್​ಸಿ ಅನುದಾನದಡಿ ನಗರಾಭಿವೃದ್ಧಿ ಇಲಾಖೆಗೆ 2 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇತ್ತೀಚೆಗಷ್ಟೆ ಕ್ಷೇತ್ರದ ಕೆರೆಗೆ ನೀರು ತುಂಬಿಸಲು 8 ಕೋಟಿ ರೂ. ಮಂಜೂರು ಮಾಡಲಾಗಿತ್ತು.

ಹಾಡಿನ ಮೂಲಕ ಅಶೋಕ

ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಗದಿರುವುದು ಹಾಗೂ ಬೆಂಗಳೂರು ಉಸ್ತುವಾರಿ ಕೈತಪ್ಪಿರುವ ಅಸಮಾಧಾನವನ್ನು ಸಿನಿಮಾ ಹಾಡೊಂದರ ಮೂಲಕ ಸಚಿವ ಆರ್.ಅಶೋಕ್ ವ್ಯಕ್ತಪಡಿಸಿದ ಪ್ರಸಂಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಿತು. ಕೃಷ್ಣಾದಲ್ಲಿ ಗುಂಡ್ಲುಪೇಟೆ ಶಾಸಕ ನಿರಂಜನ್ ಅವರನ್ನು ನೋಡಿ, ಮಾಧ್ಯಮದವರ ಜತೆ ಏನೋ ಮಾತನಾಡುತ್ತಿದ್ದೀರಾ ಎಂದು ಅಶೋಕ್ ಪ್ರಶ್ನಿಸಿದರು. ಆಗ ಮಾತನಾಡಿದ ನಿರಂಜನ್, ನಾವೇನು ಮಾತ್ನಾಡೋದು ಸರ್, ನೀವು ದೊಡ್ಡವರು ನೀವೇ ಮಾತನಾಡಬೇಕು ಎಂದರು. ಆಗ ಅಶೋಕ್, ‘ದೊಡ್ಡವರೆಲ್ಲ ಜಾಣರಲ್ಲ, ಚಿಕ್ಕವರೆಲ್ಲ ಕೋಣರಲ್ಲ’ ಎಂದಿದ್ದಲ್ಲದೆ, ‘ನಾವೇನು ದೊಡ್ಡವರಲ್ಲಪಾ, ದಡ್ಡರು’ ಎಂದು ಹೇಳಿದರು.

ಗೋವಾ ಪ್ರವಾಸ ರದ್ದು

ಪೂರ್ವ ನಿಗದಿಯಂತೆ ಶನಿವಾರ ಸಿಎಂ ಯಡಿಯೂರಪ್ಪ ಮಹದಾಯಿ ವಿಚಾರವಾಗಿ ಗೋವಾಕ್ಕೆ ತೆರಳಬೇಕಿತ್ತು. ಕೋರ್ಟ್ ಹೊರಗಡೆ ಮಾತುಕತೆ ಅಸಾಧ್ಯ ಎಂದು ಗೋವಾ ಸಿಎಂ ದೀಪಕ್ ಸಾವಂತ್ ಬಹಿರಂಗ ಹೇಳಿಕೆ ನೀಡಿದ್ದರಿಂದ ದಿಢೀರ್ ರದ್ದುಗೊಳಿಸಿ, ಶಾಸಕರ ಸಭೆ ಆಯೋಜಿಸಲಾಯಿತು. ಮೊದಲಿಗೆ 10 ಜಿಲ್ಲೆಗಳಿಗೆ ಆದ್ಯತೆ ನೀಡಲಾಗಿದ್ದು, ಮುಂದಿನ ಹಂತದಲ್ಲಿ ಉಳಿದ ಜಿಲ್ಲೆಗಳ ಶಾಸಕರೊಂದಿಗೆ ಚರ್ಚೆ ನಡೆಸಲು ನಿರ್ಧರಿಸಿದ್ದಾರೆ.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...