More

    ಲಾಕ್​ಡೌನ್​ ಹಿನ್ನೆಲೆ 2ನೇ ವಿಶೇಷ ಪ್ಯಾಕೇಜ್​ ಘೋಷಿಸಿದ ಸಿಎಂ ಬಿಎಸ್​ವೈ! ಯಾರಿಗೆಲ್ಲ ಸಹಾಯಧನ? ಇಲ್ಲಿದೆ ಡಿಟೇಲ್ಸ್​

    ಬೆಂಗಳೂರು: ಕರೊನಾ ಲಾಕ್​ಡೌನ್​ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಜನರ ಜೀವನಮಟ್ಟ ಸುಧಾರಣೆಯ ಅನುಕೂಲಕ್ಕಾಗಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮೇ 19ರಂದು 1,250 ಕೋಟಿಗೂ ಹೆಚ್ಚು ಮೊತ್ತದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದೀಗ ಕೆಲವು ವಿಶೇಷ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಎರಡನೇ ಪ್ಯಾಕೇಜ್​ ಘೋಷಣೆ ಮಾಡಿದ್ದಾರೆ. ಈ ಪ್ಯಾಕೇಜ್​ನಲ್ಲಿ ಯಾರಿಗೆ ಎಷ್ಟು ಸಹಾಯಧನ ಸಿಗಲಿದೆ ಎಂಬುದರ ಡಿಟೇಲ್ಸ್​ ಇಲ್ಲಿದೆ.

    1. ಪವರ್​ ಲೂಮ್ ನೇಕಾರರು
    ಪ್ರತಿ ಪವರ್ ಲೂಮ್‍ಗೆ ಇಬ್ಬರು ಕೆಲಸಗಾರರಿಗೆ ಮೀರದಂತೆ ತಲಾ 3,000 ರೂ.ನಂತೆ ಪರಿಹಾರ ನೀಡಲು ಸರ್ಕಾರ ನಿರ್ಧರಿಸದ್ದು, ಇದರಿಂದ ಸುಮಾರು 59 ಸಾವಿರ ಪವರ್ ಲೂಮ್‍ಗಳಿಗೆ 35 ಕೋಟಿ ವೆಚ್ಚವಾಗಲಿದೆ.

    2. ಚಲನಚಿತ್ರ ಮತ್ತು ದೂರದರ್ಶನ ಮಾಧ್ಯಮದಲ್ಲಿನ ಅಸಂಘಟಿತ ಕಾರ್ಮಿಕರು
    ಚಲನಚಿತ್ರೋದ್ಯಮ ಹಾಗೂ ದೂರದರ್ಶನ ಮಾಧ್ಯಮದಲ್ಲಿ ತೊಡಗಿಸಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ (ಕಲಾವಿದರು, ತಂತ್ರಜ್ಞರು) ತಲಾ 3,000 ರೂ.ನಂತೆ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದ್ದು, ಇದರಿಂದ ಸುಮಾರು 22 ಸಾವಿರ ನೋಂದಾಯಿತ ಕಾರ್ಮಿಕರಿಗೆ ಅನುಕೂಲವಾಗಲಿದ್ದು ರೂ 6.6 ಕೋಟಿ ವೆಚ್ಚವಾಗಲಿದೆ.

    3. ಮೀನುಗಾರರಿಗೆ ಪರಿಹಾರ
    ಭಾರತ ಸರ್ಕಾರದ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೋಂದಾಯಿಸಿದ 18,746 ಮೀನುಗಾರರಿಗೆ ತಲಾ 3000 ರೂ.ಗಳ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದ್ದು, ಇದರಿಂದ 5.6 ಕೋಟಿ ರೂ. ವೆಚ್ಚವಾಗಲಿದೆ. ಇದಲ್ಲದೆ ಒಟ್ಟು 7,668 ಇನ್‍ಲ್ಯಾಂಡ್ ದೋಣಿ ಮಾಲಿಕರಿಗೆ ತಲಾ 3,000 ರೂ. ಪರಿಹಾರ ನೀಡಲು ನಿರ್ಧರಿಸಲಾಗಿದೆ. ಇದರಿಂದ ರೂ 2.3 ಕೋಟಿ ವೆಚ್ಚವಾಗಲಿದೆ. ಇದಲ್ಲದೆ ಮೀನುಗಾರರ ಸಂಘಗಳಿಂದ ಒಳನಾಡು ಮೀನುಗಾರಿಕೆ ಸರ್ಕಾರಕ್ಕೆ ನೀಡಬೇಕಾಗಿರುವ ಕಾಂಟ್ರಾಕ್ಟ್ ಫೀಸ್‍ನಲ್ಲಿ ಶೇ.25 ರೀಯಾಯಿತಿಯನ್ನು ಸಹ ನೀಡಲು ನಿರ್ಧರಿಸಲಾಗಿದೆ.

    4. ಮುಜರಾಯಿ ದೇವಸ್ಥಾನದ ಅರ್ಚಕರು ಮತ್ತು ಸಿಬ್ಬಂದಿಗಳು
    ಮುಜರಾಯಿ ಇಲಾಖೆಯ “ಸಿ” ವರ್ಗದ ದೇವಸ್ಥಾನಗಳಲ್ಲಿ ಕೆಲಸ ಮಾಡುವ ಅರ್ಚಕರು, ಅಡಿಗೆ ಕೆಲಸಗಾರರು ಮತ್ತು ಸಿಬ್ಬಂದಿಗಳಿಗೆ ತಲಾ ರೂ 3,000 ಗಳನ್ನು ನೀಡಲು ಸರ್ಕಾರ ನಿರ್ಧರಿಸಿದ್ದು, ಈ ವರ್ಗದಲ್ಲಿ ಸುಮಾರು 36,047 ಜನರಿದು ಇದರಿಂದ 10.8 ಕೋಟಿ ರೂ.ವೆಚ್ಚವಾಗಲಿದೆ.

    5. ಆಶಾ ಕಾರ್ಯಕರ್ತೆಯರು
    ಕೋವಿಡ್-19ನ ಸೋಂಕನ್ನು ತಡೆಯಲು ಹಗಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಲಾ 3,000 ರೂ.ಗಳ ಪರಿಹಾರ ನೀಡಲು ನಿರ್ಧರಿಸಿದ್ದು, ಇದರಿಂದ ಒಟ್ಟು 42,574 ಆಶಾ ಕಾರ್ಯಕರ್ತರಿಗೆ ಸಹಾಯವಾಗಲಿದ್ದು, ಅಂದಾಜು 12.75 ಕೋಟಿ ರೂ. ವೆಚ್ಚವಾಗಲಿದೆ.

    6. ಅಂಗನವಾಡಿ ಕಾರ್ಯಕರ್ತೆಯರು
    64,423 ಅಂಗನವಾಡಿಯ ಕಾರ್ಯಕರ್ತರು ಹಾಗೂ 59,169 ಅಂಗನವಾಡಿ ಸಹಾಯಕರಿಗೆ ತಲಾ ರೂ 2,000 ರೂ. ನಂತೆ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಇದರಿಂದ ಸರ್ಕಾರಕ್ಕೆ ಅಂದಾಜು 24.7 ಕೋಟಿ ರೂ. ವೆಚ್ಚವಾಗಲಿದೆ.

    ಉಳಿದಂತೆ ಶಾಲಾ ಮಕ್ಕಳಿಗೆ ಹಾಲು ಪುಡಿ ತಯಾರಿಕೆಗೆ ಸಿಎಂ ಸೂಚನೆ ನೀಡಿದ್ದು, ಇದರಿಂದ ಸರ್ಕಾರಕ್ಕೆ ನೂರು ಕೋಟಿ ರೂಪಾಯಿ ವೆಚ್ಚವಾಗಲಿದೆ. ನ್ಯಾಯಾವಾದಿಗಳ ಕಲ್ಯಾಣ ನಿಧಿಗೆ 5 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ. ಎಂಎಸ್​ಎಂಇ ಕೈಗಾರಿಕೆಗಳಿಗೆ ಮೇ ಮತ್ತು ಜೂನ್ 2021ರ ಮಾಹೆಗಳ ಮಾಸಿಕ ವಿದ್ಯುತ್ ನಿಗಧಿತ ಶುಲ್ಕಗಳನ್ನು (Fixed charges) ಪಾವತಿಸುವುದರಿಂದ ವಿನಾಯಿತಿಯನ್ನು ನೀಡಲಾಗುವುದು. ಇದರಿಂದ ಸರ್ಕಾರದ ಬೊಕ್ಕಸಕ್ಕೆ 114.70 ಕೋಟಿ ರೂ. ಹೊರೆಯಾಗಲಿದೆ.

    ಒಟ್ಟು ಎರಡನೇ ಪ್ಯಾಕೇಜ್​ನಲ್ಲಿ 300 ಕೋಟಿ ರೂ. ಅಧಿಕ ವೆಚ್ಚವಾಗಲಿದೆ ಎಂದು ಸರ್ಕಾರ ತಿಳಿಸಿದೆ.

    ಕರೊನಾ ಹಿನ್ನೆಲೆ ವಿಶೇಷ ಪ್ಯಾಕೇಜ್​ ಘೋಷಿಸಿದ ಸಿಎಂ ಯಡಿಯೂರಪ್ಪ! ಯಾರಿಗೆಲ್ಲ ಸಹಾಯಧನ? ಇಲ್ಲಿದೆ ಡಿಟೇಲ್ಸ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts