ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್​ಡೌನ್​ ವಿಸ್ತರಣೆ: ಸಿಎಂ ಬಿಎಸ್​ವೈ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್​ಡೌನ್​ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಗುರುವಾರ ಸಂಜೆ ಆದೇಶ ಹೊರಡಿಸಿದ್ದಾರೆ. ಈ ಮೊದಲು ಜೂನ್​ 7ರವರೆಗೆ ಇದ್ದ ಲಾಕ್​ಡೌನ್​ ಇದೀಗ ಜೂನ್​ 14ರವರೆಗೂ ಮುಂದುವರಿದಿದೆ. ಲಾಕ್​ಡೌನ್​ ವಿಸ್ತರಣೆ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಿಎಸ್​ವೈ, ತಜ್ಞರ ಸಲಹೆ ಆಧಾರದ ಮೇಲೆ ಮುಂದುವರಿಸಲಾಗಿದೆ ಎಂದು ತಿಳಿಸಿದರು. ನಗರ ಪ್ರದೇಶಗಳಲ್ಲಿ ಕರೊನಾ ವೈರಸ್​ ನಿಯಂತ್ರಣಕ್ಕೆ ಬಂದಿದೆ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿ ಕರೊನಾ ವೈರಸ್​ ಹೆಚ್ಚಾಗಿರುವುದರಿಂದ ಲಾಕ್​ಡೌನ್​ ವಿಸ್ತರಣೆ ಮಾಡಲಾಗಿದೆ. … Continue reading ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್​ಡೌನ್​ ವಿಸ್ತರಣೆ: ಸಿಎಂ ಬಿಎಸ್​ವೈ ಘೋಷಣೆ