

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಶುಕ್ರವಾರ ರಾತ್ರಿ 7:30ರ ಸುಮಾರಿಗೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದುಬಂದಿದೆ. ಅವರನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣವೇನೆಂದ ತಿಳಿದುಬಂದಿಲ್ಲ. ವೈದ್ಯಕೀಯ ತೀವ್ರ ನಿಗಾ ಘಟಕದಲ್ಲಿ ಸಂತೋಷ್ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಸಿಎಂ ಬಿಎಸ್ವೈ ಭೇಟಿ
ಸುದ್ದಿ ತಿಳಿದು ಸಿಎಂ ಬಿಎಸ್ವೈ ಪುತ್ರ ರಾಘವೇಂದ್ರ ಜತೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಯಾಕೆ ಈ ರೀತಿ ಮಾಡ್ಕೊಂಡ ಅನ್ನೊದನ್ನ ಪತ್ತೆ ಹಚ್ಚಬೇಕು. ಘಟನೆಗೆ ಕಾರಣ ಏನು ಅಂತ ನಾಳೆ ಗೊತ್ತಾಗುತ್ತದೆ. ಸಂತೋಷ್ ಪತ್ನಿ ಹಾಗೂ ವೈದ್ಯರ ಜತೆ ಮಾತಾಡಿದ್ದೇನೆಂದು ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್)