ಸಚಿವ ಸಂಪುಟ ವಿಸ್ತರಣೆ ಯಾವಾಗ? ಸುಳಿವು ನೀಡಿದ ಸಿಎಂ ಬಿಎಸ್​ವೈ!

BSY vvani
Published on

ಬೆಂಗಳೂರು: ವಿವಿಧ ಕಾರಣಗಳಿಗಾಗಿ‌ ವಿಳಂಬವಾಗಿರುವ ಸಚಿವ ಸಂಪುಟ ವಿಸ್ತರಣೆ ದಿನಗಳು ಹತ್ರಿರವಾಗಿವೆ. ಆರ್ ಆರ್ ನಗರ, ಶಿರಾ ವಿಧಾನಸಭೆ‌ ಕ್ಷೇತ್ರಗಳ ಉಪ ಚುನಾವಣೆ ಬಳಿಕ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ದೆಹಲಿಗೆ ತೆರಳಲು ನಿರ್ಧರಿಸಿದ್ದಾರೆ.

ಪಕ್ಷದ ನಗರ ಕಚೇರಿಯಲ್ಲಿ ವರ್ಚುವಲ್ ರ್ಯಾಲಿ ಬಳಿಕ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ,‌ ಚುನಾವಣೆ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಯೋಚಿಸಿರುವೆ. ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಿದ ಬಳಿಕ‌ ವಿಸ್ತರಣೆಯೋ ಅಥವಾ ಪುನಾರಚನೆಯೋ ಎನ್ನುವುದು ಖಚಿತವಾಗಲಿದೆ ಎಂದರು.

ಭರವಸೆ ನೀಡಿದ ಎಲ್ಲರಿಗೂ ಮಂತ್ರಿ ಸ್ಥಾನ ನೀಡಲಾಗುವುದು. ಉಪ ಚುನಾವಣೆಯಲ್ಲಿ ಮುನಿರತ್ನ ಗೆದ್ದು ಸಚಿವರಾಗುವುದು ನಿಶ್ಚಿತ. ಶಿರಾ ಕ್ಷೇತ್ರದಲ್ಲಿ ಈ ಬಾರಿ ಅಚ್ಚರಿಯ ಫಲಿತಾಂಶ ಹೊರ ಬೀಳಲಿದ್ಸು, ಪಕ್ಷದ ಅಭ್ಯರ್ಥಿ 25,000 ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ಬಿಎಸ್​ವೈ ಭವಿಷ್ಯ ನುಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net