More

    ಸಿಡಿ ಸುಳಿಯಲ್ಲಿ ಸಾಹುಕಾರ: ರಮೇಶ್​ ಜಾರಕಿಹೊಳಿ ಮಾತಿನಿಂದ ಅಡಕತ್ತರಿಯಲ್ಲಿ ಸಿಲುಕಿದ ಸಿಎಂ

    ಬೆಂಗಳೂರು: ಜಲಸಂಪನ್ಮೂಲ ಸಚಿವ ಹಾಗೂ ಉತ್ತರ ಕರ್ನಾಟಕದ ಪ್ರಭಾವಿ ರಾಜಕಾರಣಿ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗಗೊಂಡ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿದ್ದು, ಸಚಿವರ ರಾಜೀನಾಮೆಗೆ ಒತ್ತಾಯಗಳು ಕೇಳಿಬರುತ್ತಿವೆ.

    ಆದರೆ, ರಮೇಶ್ ಜಾರಕಿಹೊಳಿ‌ ರಾಜೀನಾಮೆಗೆ ಹಿಂದೇಟು ಹಾಕಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ. ಆದರೆ, ಬಿಜೆಪಿ ಮತ್ತು ಆರ್​ಎಸ್​ಎಸ್​ ರಾಜೀನಾಮೆ ಪಡೆಯುವುದು ಸೂಕ್ತ ಎಂಬ ಸಂದೇಶ ರವಾನಿಸಿದ. ಹೀಗಾಗಿ ಸಿಎಂ ಬಿಎಸ್​ವೈ ಇದೀಗ ಅಡಕತ್ತರಿಯಲ್ಲಿ ಸಿಲುಕಿದ್ದಾರೆ.

    ಇದನ್ನೂ ಓದಿರಿ: ರಾಸಲೀಲೆ ವಿಡಿಯೋ ಬಹಿರಂಗ: ಸಚಿವ ರಮೇಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ

    ಪಕ್ಷಕ್ಕೆ ಮುಜುಗರ ಹಿನ್ನೆಲೆಯಲ್ಲಿ ರಾಜೀನಾಮೆ ಪಡೆಯುವುದು ಸೂಕ್ತ ಎಂದು ಬಿಜೆಪಿ ಮತ್ತು ಆರ್​ಎಸ್​ಎಸ್​ ಸಂದೇಶ ರವಾನಿಸಿದೆ. ರಾಜೀನಾಮೆ ಪಡೆಯುವ ನಿರ್ಧಾರ ಮಾಡಬೇಕಿರುವುದು ಸಿಎಂ. ಆದರೆ, ರಾಜೀನಾಮೆ ನೀಡುವುದಿಲ್ಲ ಎಂದು ಸಿಎಂಗೆ ರಮೇಶ್​ ಜಾರಕಿಹೊಳಿ ತಿಳಿಸಿದ್ದಾರೆ.

    ಆದ್ದರಿಂದ ಮುಂದೆ ಏನು ಮಾಡಬೇಕೆಂದು ಸಿಎಂ ಚಿಂತಿಸುತ್ತಿದ್ದಾರೆ. ಸದನ ಆರಂಭಕ್ಕೂ ಮುನ್ನಾ ರಾಜೀನಾಮೆ ಪಡೆಯದಿದ್ದರೆ ಕಾಂಗ್ರೆಸ್ ಹೋರಾಟದ ಭಯ ಸಿಎಂಗೆ ಇದೆ. ಇತ್ತ ಸಚಿವ ಸಂಪುಟದ ಬಹುತೇಕ ಸಹೋದ್ಯೋಗಿಗಳು ರಮೇಶ್ ರಾಜೀನಾಮೆಗೆ ಒಲವು ತೋರಿದ್ದಾರೆ. ಇಂದು ಸಂಪುಟ ಸಭೆಯಲ್ಲಿ ಸಚಿವರ ಅಭಿಪ್ರಾಯ ಪಡೆದು ತೀರ್ಮಾನ ಮಾಡಲಿದ್ದಾರೆ. (ದಿಗ್ವಿಜಯ ನ್ಯೂಸ್​)

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ‘ಯಾರೂ ಏನೂ ಹೇಳಿಕೆ ಕೊಡಬೇಡಿ’ ಸಚಿವರಿಗೆ ಸಿಎಂ ತಾಕೀತು!

    ಸೆಕ್ಸ್ ಸಿಡಿ ಬಹಿರಂಗವಾಗುತ್ತಿದ್ದಂತೆ ಇಕ್ಕಟ್ಟಿನಲ್ಲಿ ‘ಕಮಲ’, ಮೇಲಾಟಕ್ಕೆ ಮುಂದಾದ ‘ಕೈ’; ಉಭಯಪಕ್ಷಗಳಲ್ಲಿ ಭಾರಿ ರಾಜಕೀಯ ಸಂಚಲನ

    ‘ಕರ್ನಾಟಕ ಭವನವೇನು ನಿಮ್ಮ​ ಬೆಡ್​ ರೂಮಾ?’ ಬಿಜೆಪಿ ನಾಯಕರಿಗೆ ಕಾಂಗ್ರೆಸ್​ ಪ್ರಶ್ನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts