More

    ಸುವರ್ಣಸೌಧಕ್ಕೆ ಸರ್ಕಾರಿ ಕಚೇರಿ ಸ್ಥಳಾಂತರಿಸಲು ಸಿಎಂ ಗಡುವು

    ಬೆಂಗಳೂರು: ಇನ್ನೊಂದು ತಿಂಗಳಲ್ಲಿ ರಾಜ್ಯಮಟ್ಟದ ಹಲವು ಸರ್ಕಾರಿ ಕಚೇರಿಗಳು ಬೆಳಗಾವಿಯ ಸುವರ್ಣಸೌಧದಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಖುದ್ದು ನಾನೇ ಅದನ್ನು ಪರಿಶೀಲಿಸುವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಎಚ್ಚರಿಸಿದರು.

    ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಭೆಯಲ್ಲಿ ಬುಧವಾರ ಮಾತನಾಡಿದ ಸಿಎಂ, ಒಂದು ತಿಂಗಳಲ್ಲಿ ಬೆಂಗಳೂರಿನಿಂದ ಬೆಳಗಾವಿಗೆ ಸ್ಥಳಾಂತರಿಸಬೇಕಾದ ಕಚೇರಿಗಳನ್ನು ಗುರುತಿಸಿ, ತುರ್ತಾಗಿ ಕಾರ್ಯಗತ ಆಗಬೇಕು. ಮುಂದಿನ ಸಭೆಯೊಳಗೆ ಹಲವಾರು ಕಚೇರಿಗಳು ಅಲ್ಲಿ ಕೆಲಸ ನಿರ್ವಹಿಸುತ್ತಿರಬೇಕು ಎಂದು ಸೂಚಿಸಿದರು.

    ಇದನ್ನೂ ಓದಿರಿ ಗ್ರಾಪಂ ಚುನಾವಣೆ ಮುಂದೂಡಿಕೆಗೆ ಕಾಂಗ್ರೆಸ್ ವಿರೋಧ.. ಹೋರಾಟದ ಎಚ್ಚರಿಕೆ ಕೊಟ್ಟ ಸಿದ್ದು!

    ಪ್ರವಾಹದಿಂದ ಹಾಳಾದ ರಸ್ತೆ/ಸೇತುವೆಗಳ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಇಂಜಿನಿಯರ್​ಗಳ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿದೆ. ಹಾಗಾಗಿ ನಿರುದ್ಯೋಗಿ ಇಂಜಿನಿಯರ್​ಗಳನ್ನು ಟ್ರೈನಿಗಳೆಂದು ನೇಮಕ ಮಾಡಿಕೊಳ್ಳಬೇಕು ಎಂದು ಸಿಎಂ ಆದೇಶಿಸಿದರು.

    ರಾಜ್ಯದ 1650 ಕಿಮೀ ಉದ್ದದ ಗ್ರಾಮೀಣ ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಹಾಗೂ 10,110 ಕಿಮೀ ಜಿಲ್ಲಾ ಮುಖ್ಯರಸ್ತೆಯನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ತೀರ್ಮಾನಿಸಲಾಯಿತು.

    ಇದನ್ನೂ ಓದಿರಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್‌ನಲ್ಲಿ ಗೊಂದಲ!

    ರಾಜ್ಯದಲ್ಲಿ ಪ್ರವಾಹ ಕಾಮಗಾರಿಗಳನ್ನು 500 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿದ್ದು, 1800 ರಸ್ತೆ ಕಾಮಗಾರಿಗಳ ಪೈಕಿ 1700 ಪೂರ್ಣಗೊಂಡಿವೆ. ಸೇತುವೆ ನಿರ್ಮಾಣ/ ದುರಸ್ತಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

    ಶಿವಮೊಗ್ಗ ನಗರದ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಒಂದು ವರ್ಷದೊಳಗೆ ಪೂರ್ಣಗೊಳ್ಳಬೇಕು, ಜತೆಗೆ ಗುಣಮಟ್ಟ ಕಾಯ್ದುಕೊಳ್ಳಬೇಕು. ವಿಜಯಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಮೀನು ಗುರುತಿಸಲಾಗಿದ್ದು, ಈ ಸಂಬಂಧ ಪುನರ್ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.

    ಇದನ್ನೂ ಓದಿರಿ ಮೃತ ಸ್ನೇಹಿತನ ಮನೆ ಕಟ್ಟಿ.. ಅಲ್ಲೇ 11ನೇ ದಿನದ ಕಾರ್ಯ ನೆರವೇರಿಸಿದ ಯುವಕರ ಸಾಹಸಗಾಥೆ ಇದು!

    ವಿವಿಧ ಇಂಜಿನಿಯರಿಂಗ್ ಇಲಾಖೆಗಳ ದರಪಟ್ಟಿ ಪರಿಶೀಲಿಸಿ ರಾಜ್ಯಾದ್ಯಾಂತ ಏಕರೂಪ ದರಪಟ್ಟಿ ಪ್ರಕಟಿಸಲು ಇಲಾಖೆಯ ನಿವೃತ್ತ ಅಧಿಕಾರಿಗಳ ತಾಂತ್ರಿಕ ಸಮಿತಿ ಅಧ್ಯಯನ ನಡೆಸುತ್ತಿದ್ದು, ಶೀಘ್ರದಲ್ಲೇ ವರದಿ ಸಲ್ಲಿಸಲಿದ್ದಾರೆ. ಏಕರೂಪ ದರಪಟ್ಟಿ ಹೊರಬಂದಲ್ಲಿ ನೂರಾರು ಕೋಟಿ ರೂ. ಸರ್ಕಾರಕ್ಕೆ ಉಳಿಯಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

    ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಇದನ್ನೂ ನೋಡಿ

    ಟ್ರ್ಯಾಕ್ಟರ್​ ಸ್ಟೇರಿಂಗ್​ ಹಿಡಿದ ಎಚ್​ಡಿಕೆ..!

    ಟ್ರ್ಯಾಕ್ಟರ್​ ಸ್ಟೇರಿಂಗ್​ ಹಿಡಿದ ಎಚ್​ಡಿಕೆ..!ಚನ್ನಪಟ್ಟಣ ತಾಲೂಕಿನ ಸುಣ್ಣಘಟ್ಟ ಗ್ರಾಮದಲ್ಲಿ ಮಂಗಳವಾರ (ಇಂದು) ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಕೃಷಿ ಯಂತ್ರೋಪಕರಣ ಬಾಡಿಗೆ ನೀಡುವ ಸೇವಾ ಕೇಂದ್ರ ಉದ್ಘಾಟಿಸಿದರು. 'ನಾನೂ ರೈತ ಬ್ರದರ್, ಈ ಹಿಂದೆ ಹೊಲ ಉಳುಮೆ ಮಾಡುತ್ತಿದೆ. ಇತ್ತೀಚೆಗೆ ಮರೆತಿದ್ದೇನೆ ಅಷ್ಟೆ' ಎನ್ನುತ್ತಲೇ ಅವರು ಟ್ರ್ಯಾಕ್ಟರ್ ಮೂವ್ ಮಾಡಿದ್ರು.#Tractor #HDKumaraswamy #Channapatna #Agricultural #Machinery #Rental #Service

    Vijayavani ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಮಂಗಳವಾರ, ಜೂನ್ 2, 2020

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts