More

    ಭಾನುವಾರದ ಜತೆ ಶನಿವಾರವೂ ಲಾಕ್‌ಡೌನ್‌ಗೆ ಸಿಎಂ ಒಲವು

    ಬೆಂಗಳೂರು: ನಾಳೆಯ ಭಾನುವಾರ ಬಿಟ್ಟು ಮುಂದಿನ ಭಾನುವಾರದಿಂದ ರಾಜ್ಯದಾದ್ಯಂತ ಪ್ರತಿ ಸಂಡೇ ಲಾಕ್‌ಡೌನ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದರ ಜತೆಗೆ ಪ್ರತಿ ಶನಿವಾರವೂ ಲಾಕ್‌ಡೌನ್ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಲವು ವ್ಯಕ್ತಪಡಿಸಿದ್ದಾರೆ.

    ಶನಿವಾರ ಹಿರಿಯ ಸಚಿವರು, ಅಧಿಕಾರಿಗಳ ಜತೆಗಿನ ಸಭೆಯಲ್ಲಿ ಸಿಎಂ ಈ ರೀತಿ ಹೇಳಿದಾಗ, ‘‘ಭಾನುವಾರದ ಲಾಕ್‌ಡೌನ್ ಪ್ರಯೋಜನಕ್ಕೆ ಬರದಿದ್ದರೆ ನಂತರ ಶನಿವಾರವೂ ಲಾಕ್‌ಡೌನ್ ಮಾಡೋಣ’’ ಎಂಬ ಅಭಿಪ್ರಾಯವನ್ನು ಎಲ್ಲರೂ ವ್ಯಕ್ತಪಡಿಸಿದರು. ಇದಕ್ಕೆ ಸಿಎಂ ಸಮ್ಮತಿಸಿದರು ಎನ್ನಲಾಗಿದೆ.

    ಇದನ್ನೂ ಓದಿರಿ ಜನರೇ ಎಚ್ಚರ! ಕರೊನಾ ಟೆಸ್ಟ್ ಮಾಡದಂತೆ ಮೇಲಿಂದ ಆರ್ಡರ್​ ಆಗಿದೆ

    ಸಿಎಂ ಅಧ್ಯಕ್ಷತೆಯ ಸಭೆಯಲ್ಲಿ ತೆಗೆದುಕೊಂಡ ಇತರ ನಿರ್ಣಯಗಳು ಇಂತಿವೆ. ಜುಲೈ 5ರಿಂದ ಪ್ರತಿ ಭಾನುವಾರದ ಲಾಕ್‌ಡೌನ್ ರಾಜ್ಯಾದ್ಯಂತ ಜಾರಿಯಾಗಲಿದ್ದು, ವಸ್ತುಗಳ ಸಾಗಾಣಿಕೆಗೆ ನಿರ್ಬಂಧವಿಲ್ಲ. ಜುಲೈ 10ರಿಂದ ಒಂದು ತಿಂಗಳ ಕಾಲ ಈಗಾಗಲೇ ರಜೆಯಿರುವ 2ನೇ ಹಾಗೂ 4ನೇ ಶನಿವಾರದ ಜತೆಗೆ ಉಳಿದ ಶನಿವಾರದಂದು ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯಕ್ಕೊಳಪಡುವ ಎಲ್ಲಾ ಕಛೇರಿಗಳಿಗೆ ರಜೆ ಇರುತ್ತದೆ.

    ಈಗ ಪ್ರತಿ ದಿನ ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಇದೆ. ಈ ಅವಧಿಯನ್ನು ಸ್ವಲ್ಪ ಬದಲಿಸಲಾಗಿದ್ದು, ರಾತ್ರಿ 8ರಿಂದ ಬೆಳಿಗ್ಗೆ 5ರವರೆಗೆ ನಿಗದಿಪಡಿಸಲಾಗಿದೆ. ಬೆಂಗಳೂರಿನಲ್ಲಿರುವ ಬೃಹತ್ ಹೋಲ್ಸೇಲ್ ತರಕಾರಿ ಮಾರುಕಟ್ಟೆಗಳಲ್ಲಿ ಆಗುವ ಜನದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ ಹೆಚ್ಚಿನ ಹೋಲ್ಸೇಲ್ ತರಕಾರಿ ಮಾರುಕಟ್ಟೆಗಳನ್ನು ತೆರೆಯಲು ಬಿಬಿಎಂಪಿ ಆಯುಕ್ತರಿಗೆ ಸೂಚಿಸಲಾಗಿದೆ.

    ಇದನ್ನೂ ಓದಿ ಕರೊನಾಗೆ ಚುಚ್ಚುಮದ್ದಿಗಿಂತ ಮೂಗಿನ ಔಷಧವೇ ಉತ್ತಮ; ಆಕ್ಸ್​ಫರ್ಡ್​ ವಿವಿ ಸಂಶೋಧಕರ ಅಭಿಮತ

    ಕರೊನಾ ರೋಗಿಗಳನ್ನು ಶೀಘ್ರ ಕೋವಿಡ್ ಆಸ್ಪತ್ರೆಗಳಿಗೆ ಸೇರಿಸಲು ಅನುವಾಗುವಂತೆ ಸೆಂಟ್ರಲೈಜ್ ಬೆಡ್ ಅಲೋಕೇಷನ್ ಸಿಸ್ಟಮ್ ತಂತ್ರಾಂಶ ಜಾರಿಗೊಳಿಸಲಾಗುವುದು. ಬೆಂಗಳೂರಿನಲ್ಲಿ ಸೋಂಕಿತ ವ್ಯಕ್ತಿಗಳನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ಗಳ ಸಂಖ್ಯೆಯನ್ನು 250ಕ್ಕೆ ಹೆಚ್ಚಿಸಲು ಮತ್ತು ಕೋವಿಡ್‌ನಿಂದ ಮೃತರಾದವರ ದೇಹಗಳನ್ನು ಸಾಗಿಸಲು ಪ್ರತ್ಯೇಕ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗುವುದು. ಆಂಬ್ಯುಲೆನ್ಸ್ ಇರುವ ಸ್ಥಳವನ್ನು ಗುರುತಿಸಲು ಮತ್ತು ಅವುಗಳ ಸರಳ ಚಲನವಲನಗಳ ಸಲುವಾಗಿ ಪೊಲೀಸ್ ಕಂಟ್ರೋಲ್ ರೂಂ ವೈರ್‌ಲೆಸ್ ಸೇವೆ ಬಳಸಲು ಸೂಚಿಸಲಾಗಿದೆ.

    ದೆಹಲಿಯಲ್ಲಿ ಕೋವಿಡ್​ ರೋಗಿಗಳಿಗಾಗಿ ಸಜ್ಜಾಗಿದೆ ಜಗತ್ತಿನಲ್ಲಿಯೇ ಅತಿದೊಡ್ಡ ಚಿಕಿತ್ಸಾ ಕೇಂದ್ರ…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts