More

    ನಗರ ಸಂಚಾರಕ್ಕೆ ಬರುವೆ.. ಲೋಪ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ; ಬಿಎಸ್​ವೈ

    ಬೆಂಗಳೂರು: ಮಳೆ ಹಿನ್ನೆಲೆಯಲ್ಲಿ ಬಿಬಿಎಂಪಿ ನಿಯಂತ್ರಣಾ ಕೊಠಡಿ/ಸಹಾಯವಾಣಿಗೆ ಬರುವ ಕರೆಗಳಿಗೆ ತಕ್ಷಣ ಸ್ಪಂದಿಸಬೇಕು. ಒಂದು ವೇಳೆ ಸಾರ್ವಜನಿಕರ ಕರೆ ಸ್ವೀಕರಿಸದೆ ನಿರ್ಲಕ್ಷ್ಯ ವಹಿಸುವ ಬಗ್ಗೆ ದೂರು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಸಿದರು.

    ಮುಂಗಾರು ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದರು.

    ಇದನ್ನೂ ಓದಿರಿ ನಾಳೆ ಲಾಕ್​ಡೌನ್​ ಇರಲ್ಲ!

    ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಸಾವೀಗೀಡಾದ ಹೆಣ್ಣು ಮಕ್ಕಳಿಬ್ಬರ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ನಗರದಲ್ಲಿ ಯಾವುದೇ ಸಾವು-ನೋವು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಿ. ಅಪಾಯಕಾರಿ ಮರದ ರೆಂಬೆ-ಕೊಂಬೆ ಗುರುತಿಸಿ ಕತ್ತರಿಸುವ ಕೆಲಸ ನಿರಂತರವಾಗಿ ಆಗಬೇಕು. ಮಳೆಗೆ ಬಿದ್ದ ಮರಗಳನ್ನು ಶೀಘ್ರ ತೆರವು ಮಾಡಬೇಕು. ನಗರ ಸಂಚಾರಕ್ಕೆ ಬಂದ ವೇಳೆ ಲೋಪ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವೆ ಎಂದು ಅಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದರು.

    ಬಿಬಿಎಂಪಿ, ಪೊಲೀಸ್, ಅರಣ್ಯ, ಸಾರಿಗೆ ಹಾಗೂ ಅಗ್ನಿಶಾಮಕ ಇಲಾಖೆಗಳು ಸಮನ್ವಯ ಸಾಧಿಸಿಕೊಂಡು ಕೆಲಸ ಮಾಡಬೇಕು ಎಂದು ಆದೇಶಿಸಿದರು. ಮರಗಳ ಕೆಳಗೆ ವಾಹನ ನಿಲ್ಲಿಸದಂತೆ ಮುನ್ನೆಚ್ಚರಿಕೆ ವಹಿಸಿ. ನಗರದ 8 ವಲಯಗಳಲ್ಲಿ ಮ್ಯಾನ್ ಹೋಲ್‍ಗಳನ್ನು ಮುಚ್ಚಬೇಕು. ಜೆಟ್ಟಿಂಗ್ ಮಷಿನ್ ಲಭ್ಯವಿರಬೇಕು ಎಂದು ಹೇಳಿದರು.

    ಇದನ್ನೂ ಓದಿರಿ ಕ್ವಾರಂಟೈನ್​ ಕೇಂದ್ರದಲ್ಲಿ ಕಾಂಡೋಮ್ ರಾಶಿ!

    ಸಚಿವ ಆರ್. ಅಶೋಕ್ ಮಾತನಾಡಿ, ಬೆಂಗಳೂರು ನಗರದ ಎಲ್ಲ 8 ವಲಯದಲ್ಲೂ ಬಿಬಿಎಂಪಿ, ಬೆಸ್ಕಾಂ, ಒಳಚರಂಡಿ ಮಂಡಳಿ, ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆಗಳ ಅಧಿಕಾರಿ/ಸಿಬ್ಬಂದಿ ಒಳಗೊಂಡ ತಂಡ ರಚಿಸಿ ಮಳೆ ಸಂಬಂಧ ದೂರು ಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಅನಾಹುತಗಳು ಸಂಭವಿಸಿದಲ್ಲಿ ಸಹಾಯಕ ಅಭಿಯಂತರರನ್ನು ಹೊಣೆ ಮಾಡಲಾಗುವುದು ಎಂದು ತಿಳಿಸಿದರು.

    ಸಚಿವ ಬಿ.ಎಂ. ಬಸವರಾಜ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್, ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್, ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ನಗರಾಭಿವೃದ್ಧಿ ಇಲಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಉಪಸ್ಥಿತರಿದ್ದರು.

    ಇದನ್ನೂ ಓದಿರಿ ಕೊನೆಗೂ ಸೆರೆಯಾಯ್ತು ರೌಡಿ ಕೋತಿ !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts