

ಬೆಂಗಳೂರು: ಕಾಯಕ ಯೋಗಿಗಳಾದ ಪತ್ರಿಕಾ ವಿತರಕರ ದಿನಾಚರಣೆ ನಿಮಿತ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.
ದಿನನಿತ್ಯದ ಕಾಯಕವಾಗಿ, ಚಳಿ, ಮಳೆ, ಗಾಳಿ ಎನ್ನದೆ ಮುಂಜಾನೆಯೇ ಮನೆಮನೆಗೆ ಪತ್ರಿಕೆ ತಲುಪಿಸುವ ಶ್ರಮಜೀವಿಗಳಾದ ದಿನಪತ್ರಿಕೆ ವಿತರಕರಿಗೆ ವಿಶ್ವ ಪತ್ರಿಕಾ ವಿತರಕರ ದಿನದ ಶುಭಾಶಯಗಳು. ವಿಶೇಷವಾಗಿ, ಈ ಕೊರೋನಾ ಸಂಕಷ್ಟದ ಸಮಯದಲ್ಲಿ ಕೂಡ, ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಪತ್ರಿಕಾ ವಿತರಕರಿಗೆ ಕೃತಜ್ಞತಾಪೂರ್ವಕ ಅಭಿನಂದನೆಗಳು ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.