ಸಿಎಂ ಬದಲಾವಣೆ ಚರ್ಚೆ ಅಪ್ರಸ್ತುತ: ಡಾ.ಜಿ.ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬದಲಾಗುತ್ತಾರೆ ಎಂಬ ಚರ್ಚೆಗಳು ಅಪ್ರಸ್ತುತ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿಎಂ ಬದಲಾಗುತ್ತಾರೆ ಎಂದು ಕಾಂಗ್ರೆಸ್‌ನ ಯಾವ ನಾಯಕರೂ ಹೇಳಿಲ್ಲ. ಬಿಜೆಪಿ-ಜೆಡಿಎಸ್‌ನ ನಾಯಕರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆ ರೀತಿಯ ಚರ್ಚೆಗಳೇ ಅನಗತ್ಯ ಎಂದು ಹೇಳಿದರು.

ಮುಂದಿನ ಮೂರು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ. ಅವರು ಬದಲಾಗುವುದಿಲ್ಲ ಎಂದು ಪ್ರತಿಕ್ರಿಯಿಸಿದರು.
ಮುಖ್ಯಮಂತ್ರಿಯವರ ವಿರುದ್ಧ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಬಾರದು. ಈ ಕುರಿತು ದಾಖಲಾಗಿರುವ ದೂರನ್ನು ತಿರಸ್ಕರಿಸಬೇಕು ಮತ್ತು ಶೋಕಾಸ್ ನೋಟೀಸ್ ಅನ್ನು ವಾಪಸ್ ಪಡೆಯಬೇಕು ಎಂದು ಸಚಿವ ಸಂಪುಟ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಸಲಹೆ ನೀಡಿದೆ.

ಅದರ ಹೊರತಾಗಿಯೂ ಅವರು ಮುಂದುವರೆದರೆ ನಮಗೆ ಕಾನೂನು ಹೋರಾಟ ಅನಿವಾರ್ಯವಾಗಲಿದೆ. ಆದರೆ ರಾಜ್ಯಪಾಲರು ಕಾನೂನು ಬಿಟ್ಟು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅನಿಸುವುದಿಲ್ಲ. ಕಾನೂನಿನ ಪ್ರಕಾರ ನಡೆದುಕೊಳ್ಳುವ ನಿರೀಕ್ಷೆಯಿದೆ ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಫೋಕ್ಸೊ ಪ್ರಕರಣಕ್ಕೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವು ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಮೇಲ್ಮನವಿ ಸಲ್ಲಿಸಲಾಗಿದೆ. ಮುಂದಿನ ವಿಚಾರಣೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಸಮರ್ಥ ವಾದ ಮಂಡಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿರು.

ಫೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳಿಗೆ ಸಾಮಾನ್ಯವಾಗಿ ಜಾಮೀನು ದೊರೆಯುವುದಿಲ್ಲ. ಆದರೆ ನ್ಯಾಯಾಧೀಶರು ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ ಪರವಕೀಲರು ನ್ಯಾಯಾಲಯದ ಮುಂದೆ ಸತ್ಯಾಸತ್ಯತೆಗಳನ್ನು ವಿವರಿಸಲಿದ್ದಾರೆ. ತಡೆಯಾಜ್ಞೆ ತೆರವುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಕೆನೆಪದರ ಮೀರಿದವರನ್ನು ಮೀಸಲಾತಿಯಿಂದ ಹೊರಗಿಡುವಂತಹ ನಿರ್ಣಯ ಮಾಡುವಂತೆ ಬಿಜೆಪಿ ಸಂಸದರ ನಿಯೋಗ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನ್ನ ಅಭಿಪ್ರಾಯಗಳು ಏನೇ ಇದ್ದರೂ ಅದು ವೈಯಕ್ತಿಕ. ಎಐಸಿಸಿ ಚರ್ಚೆ ಮಾಡಿ ತೆಗೆದುಕೊಳ್ಳುವ ನಿರ್ಧಾರದಂತೆ ನಾವು ನಡೆಯುತ್ತೇವೆ ಎಂದು ಡಾ.ಪರಮೇಶ್ವರ ತಿಳಿಸಿದರು.

Share This Article

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…

ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ

ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ