More

    ಗ್ಯಾರಂಟಿ ಭವಿಷ್ಯದ ಬಗ್ಗೆ ಸಿಎಂ, ಡಿಸಿಎಂ ಸ್ಪಷ್ಟನೆ

    ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆ ನಿಲ್ಲಿಸಲಾಗುವುದು ಎಂಬ ಮಾಗಡಿ ಶಾಸಕ ಬಾಲಕೃಷ್ಣ ಹೇಳಿಕೆ ರಾಜಕೀಯ ಪಡಸಾಲೆಯಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಪ್ರತಿಪಕ್ಷ ನಾಯಕರು ಈ ಅಭಿಪ್ರಾಯವನ್ನು ಮುಂದಿಟ್ಟು ಸರ್ಕಾರದ ಕಾಲೆಳೆದರೆ, ಕಾಂಗ್ರೆಸ್‌ಗೆ ಮುಜುಗರ ಉಂಟಾಗಿದೆ.
    ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಗ್ಯಾರಂಟಿ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
    ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
    ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗನ್ನು ಖಂಡಿತವಾಗಿ ಮುಂದುವರೆಸಲಾಗುವುದು ಎಂದರು.
    ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿ, ಬಾಲಕೃಷ್ಣ ಅವರು ಈ ರೀತಿ ಹೇಳಿಕೆ ಕೊಟ್ಟಿಲ್ಲ. ಲೋಕಸಭೆ ನಂತರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದನ್ನು ಮಾತ್ರ ಹೇಳಿದ್ದಾರೆ ಎಂದು ಹೇಳಿದರು.
    ಶಾಸಕ ಬಾಲಕೃಷ್ಣ ಹೇಳಿಕೆ ರಾಜ್ಯದ ಜನರಿಗೆ ಅವಮಾನ ಮಾಡಿದಂತೆ ಎನ್ನುವ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ ಬಿಜೆಪಿಯವರಿಗೆ ಉತ್ತರ ನೀಡಲು ನಾನು ತಯಾರಿಲ್ಲ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts