

ವಿಜಯಪುರ: ಜಿಲ್ಲೆಯ ಆಲಮಟ್ಟಿ ಅಣೆಕಟ್ಟೆಯಲ್ಲಿ ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರನೇ ಬಾರಿಗೆ ಇಂದು (ಸೆ.06) ಬಾಗಿನ ಅರ್ಪಿಸಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್, ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್, ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ, ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸೇರಿದಂತೆ ಶಾಸಕರಾದ ಎಚ್.ವೈ. ಮೇಟಿ, ಯಶವಂತರಾಯಗೌಡ ಪಾಟೀಲ, ಜೆ.ಟಿ.ಪಾಟೀಲ, ವಿಜಯಾನಂದ ಕಾಶಪ್ಪನವರ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.