More

    ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ವಿಭಿನ್ನ ಹೇಳಿಕೆ ನೀಡಿದ ಸಿಎಂ, ಡಿಸಿಎಂ

    ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಬಾಂಬ್​ ಸ್ಫೋಟಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಭಿನ್ನ ಹೇಳಿಕೆಗಳನ್ನು ನೀಡಿದ್ದು, ಹಲವು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ.

    ನಗರದಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ಯಾರನ್ನೂ ರಕ್ಷಿಸಲ್ಲ. ಮಂಗಳೂರು ಕುಕ್ಕರ್​ ಬಾಂಬ್​​ ಸ್ಫೋಟಕ್ಕೂ ರಾಮೇಶ್ವರಂ ಕೆಫೆ ಘಟನೆಗೂ ಸಾಮ್ಯತೆ ಇದೆ. ಈ ಬಗ್ಗೆ ನಮ್ಮ ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ಬಸ್​ನಲ್ಲಿ ಬಂದು ಹೋಗಿರುವ ದೃಶ್ಯಗಳು ಪತ್ತೆಯಾಗಿವೆ. ಆರೋಪಿ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಎಲ್ಲ ಆಯಾಮಗಳಲ್ಲೂ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಪ್ರಕರಣದ ತನಿಖೆಗೆ ಪೊಲೀಸರು 7-8 ತಂಡ ರಚನೆ ಮಾಡಿದ್ದಾರೆ.

    ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ವಿಭಿನ್ನ ಹೇಳಿಕೆ ನೀಡಿದ ಸಿಎಂ, ಡಿಸಿಎಂ

    ಇದನ್ನೂ ಓದಿ: ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಗೌತಮ್ ಗಂಭೀರ್

    ಇದು ಏಕವ್ಯಕ್ತಿ ಮಾಡಿರುವುದಾ ಅಥವಾ ಸಂಘಟನೆ ಮಾಡಿರುವುದಾ ನೋಡಬೇಕಿದೆ. ಮಂಗಳೂರು ಬ್ಲಾಸ್ಟ್​ಗೂ ಇದಕ್ಕೂ ಸಾಮ್ಯತೆ ಕಾಣಿಸುತ್ತಿದೆ. ನಮ್ಮ ಪೊಲೀಸ್ ಅಧಿಕಾರಿಗಳು ಹೇಳುವ ಪ್ರಕಾರ ಬ್ಲಾಸ್ಟ್​ಗೆ ಬಳಸಿರುವ ವಸ್ತುಗಳನ್ನು ನೋಡಿದಾಗ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಆದ ಸ್ಫೋಟದಲ್ಲಿ ಸಾಮ್ಯತೆ ಇದೆ. ಮಂಗಳೂರು, ಶಿವಮೊಗ್ಗ ಪೊಲೀಸ್​ ಅಧಿಕಾರಿಗಳು ಕೂಡ ಬೆಂಗಳೂರಿಗೆ ಬಂದು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಇನ್ನು ರಾಮೇಶ್ವರಂ ಕೆಫೆ ಘಟನೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಂಗಳೂರು ಕುಕ್ಕರ್​ ಬಾಂಬ್​ ಬ್ಲಾಸ್ಟ್​​ಗೂ, ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​​ಗೂ ಸಾಮ್ಯತೆ ಇಲ್ಲ ಎಂದು ಹೇಳಿದರು. ಸಿಎಂ ಹಾಗೂ ಡಿಸಿಎಂ ಇಬ್ಬರೂ ಭಿನ್ನ ಹೇಳಿಕೆಗಳನ್ನು ನೀಡಿದ್ದು, ಸಮನ್ವಯ ಹಾಗೂ ಮಾಹಿತಿಯ ಕೊರತೆ ಎದ್ದು ಕಾಣುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts