More

    ಡಿ.19ರಂದು ಸಿಂಧನೂರಿಗೆ ಸಿಎಂ, ಡಿಸಿಎಂ

    ಸಿಂಧನೂರು: ತಾಲೂಕಿನ ತಿಮ್ಮಾಪುರ ಏತ ನೀರಾವರಿ ಹಾಗೂ ಇತರ ವಿವಿಧ ಯೋಜನೆಗಳಿಗೆ ಚಾಲನೆ, ನಗರದ ಸರ್ಕಾರಿ ಮಹಾವಿದ್ಯಾಲಯ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕಾಗಿ ಡಿ.19 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ ನಗರಕ್ಕೆ ಆಗಮಿಸಲಿದ್ದಾರೆ ಎಂದು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು.

    ನಗರದ ತಹಸಿಲ್ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಂಗಳವಾರ ಮಾತನಾಡಿದರು. ಜಲಧಾರೆ ಯೋಜನೆಗೆ ಚಾಲನೆ, ಟ್ರಾಫಿಕ್ ಪೊಲೀಸ್ ಠಾಣೆ ಕಟ್ಟಡ ಉದ್ಘಾಟನೆ, ಇತರ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಸಿಎಂ ನೆರವೇರಿಸಲಿದ್ದಾರೆ. ಸಚಿವರಾದ ಸತೀಶ ಜಾರಕಿಹೊಳಿ, ಜಿ.ಪರಮೇಶ್ವರ, ಜಮೀರ್ ಅಹ್ಮದ್, ಸುಧಾಕರ್ ಅವರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು ಎಂದರು.

    ಮೊದಲು ಸಿಂಧನೂರು ನಗರ ನಂತರ ಒಳಬಳ್ಳಾರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಇದರಿಂದಾಗಿ ಎಲ್ಲಿ ಹೆಲಿಪ್ಯಾಡ್ ನಿರ್ಮಿಸಿದರೆ ಸೂಕ್ತ ಎಂಬುದರ ಬಗ್ಗೆ ಶಾಸಕ ಬಾದರ್ಲಿ, ಪಿಡಬ್ಲ್ಯುಡಿ ಎಇಇ ಚಂದ್ರಶೇಖರ ಪಾಟೀಲ್ ಜತೆ ಚರ್ಚಿಸಿದರು. ನಗರದ ಕಾರ್ಯಕ್ರಮಕ್ಕೂ ಮುನ್ನ ಮೆರವಣಿಗೆ ನಡೆಸಲಾಗುವುದು. ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಒಳಬಳ್ಳಾರಿ ಕಾರ್ಯಕ್ರಮಕ್ಕೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರನ್ನು ಆಹ್ವಾನಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಬಾದರ್ಲಿ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts