More

    ಸಿದ್ದರಾಮಯ್ಯ ಸಿಎಂ ಆಗಲೇಬೇಕು

    ಹಿಂದುಳಿದ ಜಾತಿಗಳ ಒಕ್ಕೂಟದಿಂದ ಒಕ್ಕೊರಲ ಒತ್ತಾಯ

    ವಿಜಯವಾಣಿ ಸುದ್ದಿಜಾಲ ದೇವನಹಳ್ಳಿ
    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕಷ್ಟಪಟ್ಟು ಪಕ್ಷ ಸಂಘಟನೆ ಮಾಡಿ, ಮತ್ತೆ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು ಶ್ರಮಿಸಿದ್ದು, ಇಬ್ಬರೂ ಸಿಎಂ ಸ್ಥಾನಕ್ಕೆ ಅರ್ಹರಿದ್ದರೂ ಇವರಿಬ್ಬರಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡ ಕೆ.ಎಂ. ಕೃಷ್ಣಮೂರ್ತಿ ತಿಳಿಸಿದರು.
    ಪಟ್ಟಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಂಘಟನೆ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
    ಸಿದ್ದರಾಮಯ್ಯ ಅವರು ಅಹಿಂದ, ಅಲ್ಪಸಂಖ್ಯಾತ, ಹಿಂದುಳಿದ, ದಲಿತ ನಾಯಕರಾಗಿ ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದು, ಹೆಸರು ಮಾಡಿದ್ದಾರೆ. ಭಾಗ್ಯಗಳ ಸರದಾರರೆಂದೆ ಖ್ಯಾತಿ ಪಡೆದಿದ್ದ ಅವರು, ಮುಖ್ಯಮಂತ್ರಿಯಾದರೆ ರಾಜ್ಯ ಉನ್ನತ ಮಟ್ಟಕ್ಕೆ ಹೋಗಲಿದೆ. ಗ್ಯಾರಂಟಿ ಕಾರ್ಡ್‌ನ ಭರವಸೆ ಪರಿಪೂರ್ಣವಾಗಿ ಈಡೇರಿಸಬಲ್ಲ ಶಕ್ತಿ ಸಿದ್ದರಾಮಯ್ಯ ಅವರಿಗಿದೆ ಎಂದರು.
    ಹಿಂದುಳಿದ ವರ್ಗಗಳ ತಾಲೂಕು ಅಧ್ಯಕ್ಷ ಸಿ.ಮುನಿರಾಜು ಮಾತನಾಡಿ, ರಾಜ್ಯದ ಜನರಿಗೆ ಅನ್ನಭಾಗ್ಯ, ಶಾದಿ ಭಾಗ್ಯ, ಮಕ್ಕಳಿಗೆ ಮೊಟ್ಟೆ ಭಾಗ್ಯ, ಸೈಕಲ್ ಭಾಗ್ಯ, ಪುಸ್ತಕ, ಸಮವಸ್ತ್ರ , ಇಂದಿರಾ ಕ್ಯಾಂಟಿನ್ ಸೇರಿ ಅನೇಕ ಸವಲತ್ತುಗಳನ್ನು ನೀಡಿದ್ದಾರೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ಇರುವುದರಿಂದ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸುವಲ್ಲಿ ಸಿದ್ದರಾಮಯ್ಯ ಅಗ್ರಗಣ್ಯರು. ಹಿಂದುಳಿದ ಜಾತಿಗಳಲ್ಲಿ ಹೆಚ್ಚು ಜನಸಂಖ್ಯೆಯುಳ್ಳ ಕುರುಬ ಸಮುದಾಯದ ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಹೈಕಮಾಂಡ್ ಮಾಡಿದರೆ, ರಾಜ್ಯ ಅಭಿವೃದ್ಧಿ ಪಥದತ್ತ ಸಾಗಿ, ದೇಶದಲ್ಲಿಯೇ ಬಡವರ ಪರ ಮಾದರಿ ರಾಜ್ಯವಾಗಲಿದೆ ಎಂದರು.
    ಹಿಂದುಳಿದ ವರ್ಗಗಳ ಒಕ್ಕೂಟದ ಪದಾಧಿಕಾರಿಗಳಾದ ಕೆ.ಎಂ.ಮುನಿರಾಜು, ಆಂಜಿನಪ್ಪ, ದಾಸಪ್ಪ, ಹರೀಶ್, ಗೋಪಾಲಪ್ಪ, ಟಿ.ಹೊಸಹಳ್ಳಿ ಮುನಿರಾಜು, ಗುಲಾಬಿ ಮುನಿರಾಜು, ಮುನಿರಾಜು, ಎಚ್.ಕೆ.ವೆಂಕಟೇಶಪ್ಪ ಇದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts