ಕೋವಿಡ್ ನಿರ್ವಹಣೆ ಜವಾಬ್ದಾರಿ ಹೊತ್ತ ಐವರು ಸಚಿವರಿಗೆ ಸಿಎಂ ಸೂಚನೆ

yediyurappa
yediyurappa
Published on

ಬೆಂಗಳೂರು: ಕರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಐವರು ಸಚಿವರಿಗೆ ಜವಾಬ್ದಾರಿ ನೀಡಲಾಗಿದ್ದು, ಅವರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಆಕ್ಸಿಜನ್, ರೆಮಿಡಿಸಿವಿಯರ್ ಹಾಗೂ ಬೆಡ್ ಸೇರಿದಂತೆ ಕೋವಿಡ್ ನಿರ್ವಹಣೆ ವಿಷಯಗಳಲ್ಲಿ ಅಕ್ರಮ ಉಂಟಾದರೆ ಕೂಡಲೇ ಕ್ರಮ ಕೊಗೊಳ್ಳಿ ಎಂದು ತಿಳಿಸಲಾಗಿದೆ.

ಕೋವಿಡ್ ನಿರ್ವಹಣೆ ಉಸ್ತುವಾರಿ ಹೊತ್ತ ಐವರು ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಅದರಲ್ಲಿ ಈ ಆದೇಶ ಹೊರಡಿಸಲಾಗಿದೆ. ಕೋವಿಡ್ -19 ನಿಯಂತ್ರಿಸಲು ಸಚಿವರುಗಳಿಗೆ ನೀಡಿರುವ ಜವಾಬ್ದಾರಿಯ ಅನುಸಾರ ಎಲ್ಲಿಯೂ ಯಾವುದೇ ರೀತಿಯ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.

ಪ್ರಮುಖವಾಗಿ ಆಕ್ಸಿಜನ್ ಕೊರತೆ ನೀಗಿಸುವತ್ತ ಹೆಚ್ಚಿನ ಗಮನ ಹರಿಸಬೇಕು. ತುರ್ತು ಅಗತ್ಯವಿರುವ ರೋಗಿಗಳಿಗೆ ಬೆಡ್ ಹಂಚಿಕೆಗೆ ಕ್ರಮ ವಹಿಸುವುದು ಮತ್ತು ರೆಮಿಡಿಸಿವಿಯರ್ ಡ್ರಗ್ ಪೂರೈಕೆಯನ್ನು ಅಗತ್ಯತೆಗನುಸಾರವಾಗಿ ಸರಬರಾಜು ಮಾಡಲು ಕ್ರಮ ತೆಗೆದುಕೊಳ್ಳಬೇಕು. ಇದರ ಜತೆ ಪ್ರತಿದಿನ ಎಲ್ಲದರ ಬಗ್ಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

ಆಕ್ಸಿಜನ್, ರೆಮ್ಡಿಸ್ವಿರ್, ಹಾಸಿಗೆ ಲಭ್ಯತೆ, ವಾರ್ ರೂಂ ಕಾರ್ಯ ನಿರ್ವಹಣೆ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಿ ಮಾಹಿತಿ ನೀಡಿ. ಯಾವುದಕ್ಕೂ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಳ್ಳಿ ಎಂದು ಸಚಿವರಿಗೆ ಸಿಎಂ ತಿಳಿಸಿದ್ದಾರೆ.

ಇದೇ ವೇಳೆ ಈವರೆಗೆ ಹಂಚಿಕೆಯಾಗಿರುವ ಆಕ್ಸಿಜನ್, ರೆಮ್ಡಿಸ್ವಿರ್, ಹಾಸಿಗೆ, ವಾರ್ ರೂಂ, ಬಗ್ಗೆ ಸಚಿವರಿಂದ ಮಾಹಿತಿ ಪಡೆಯಲಾಗಿದೆ. ಅವುಗಳ ಲಭ್ಯತೆ, ಕೊರತೆ, ಅವಶ್ಯಕತೆಯ ಬಗ್ಗೆಯೂ ಸಿಎಂ ಮಾಹಿತಿ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net