ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಭೇಟಿಯಾದ ಸಿಎಂ ಎಚ್​.ಡಿ. ಕುಮಾರಸ್ವಾಮಿ

ಬೆಂಗಳೂರು: ಸಿಎಂ ಎಚ್​.ಡಿ . ಕುಮಾರಸ್ವಾಮಿ ಶುಕ್ರವಾರ ಸಂಜೆ ಹಠಾತ್ತನೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ತೆರಳಿ ಕೆಲಕಾಲ ಮಾತುಕತೆ ನಡೆಸಿದರು. ಉಭಯ ನಾಯಕರ ಭೇಟಿ ಅತ್ಯಂತ ಸೌಹಾರ್ದಯುತವಾಗಿತ್ತು ಎನ್ನಲಾಗಿದೆ.

ಜೆಡಿಎಸ್​ ಮತ್ತು ಕಾಂಗ್ರೆಸ್​ ಪಕ್ಷದ ಜಂಟಿ ಶಾಸಕಾಂಗ ಪಕ್ಷದ ಸಭೆ ನಡೆದ ಬೆನ್ನಲ್ಲೇ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರ ಭೇಟಿ ನಡೆದಿರುವುದು ವಿಶೇಷವಾಗಿದೆ.

ಇದಕ್ಕೂ ಮುನ್ನ ನಡೆದಿದ್ದ ಜೆಡಿಎಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೈತ್ರಿಕೂಟ ಸರ್ಕಾರವನ್ನು ಮುಂದುವರಿಸಿಕೊಂಡು ಹೋಗಬೇಕು. ಏನೇ ಭಿನ್ನಾಭಿಪ್ರಾಯ, ಸಮಸ್ಯೆಗಳಿದ್ದರೂ ಅವನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಸೂಚನೆ ನೀಡಿದ್ದರು.