More

    ನುಡಿದಂತೆ ನಡೆದ ಸಿಎಂ

    ಬಸವನಬಾಗೇವಾಡಿ: ನಾಡಿನ ಬಸವಭಕ್ತರ ಹಲವು ವರ್ಷಗಳ ಬೇಡಿಕೆಗೆ ಸರ್ಕಾರ ಇಂದಿನ ಬಜೆಟ್‌ನಲ್ಲಿ ಬಸವನಬಾಗೇವಾಡಿ ಪ್ರತ್ಯೇಕ ಪ್ರಾಧಿಕಾರ ಘೋಷಣೆ ಮಾಡಿರುವುದರಿಂದ ಬಸವಾಭಿಮಾನಿಗಳ ಹರ್ಷ ಮುಗಿಲು ಮುಟ್ಟಿದೆ.

    12ನೇ ಶತಮಾನದಲ್ಲಿ ವಚನ ಸಾಹಿತ್ಯದ ಮೂಲಕ ಸಮಾಜಕ್ಕೆ ಸಮಾನತೆ ಸಾರಿದ ಅಣ್ಣಬಸವಣ್ಣನವರ ಜನ್ಮಸ್ಥಳವಾದ ಬಸವನಬಾಗೇವಾಡಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಿ ಅವರ ತತ್ವ ಸಿದ್ಧಾಂತಗಳನ್ನು ದೇಶದಾದ್ಯಂತ ಇನ್ನಷ್ಟು ಪಸರಿಸಬೇಕೆಂಬ ಮಹಾದಾಸೆಯೊಂದಿಗೆ ಹಲವು ದಶಕಗಳಿಂದ ಬಸವನಬಾಗೇವಾಡಿ ಪ್ರತ್ಯೇಕ ಪ್ರಾಧಿಕಾರ ರಚಿಸಬೇಕು ಎಂದು ಹಲವು ಸಂಘಟನೆಗಳು, ರಾಜಕೀಯ ಮುಖಂಡರು, ಮಠಾಧೀಶರು ಹೋರಾಟ ಮಾಡಿದ್ದರು. ಸರ್ಕಾರದ ಮೇಲೆ ಒತ್ತಡ ಹಾಕುತ್ತಾ ಬಂದಿದ್ದರು. 2023ರ ವಿಧಾನಸಭಾ ಚುನಾವಣೆ ಪ್ರಚಾರ ಮತ್ತು ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡ ಸಂದರ್ಭದಲ್ಲಿ ಬಸವನಬಾಗೇವಾಡಿಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತ್ಯೇಕ ಪ್ರಾಧಿಕಾರ ರಚಿಸುವದಾಗಿ ಘೋಷಿಸಿದ್ದರು. ಈಗ ಅವರು ನುಡಿದಂತೆ ನಡೆದಿದ್ದಾರೆ ಎಂದು ಬಸವಾಭಿಮಾನಿಗಳು ಹರ್ಷ ವ್ಯಕ್ತಪಡಿಸಿದರು.

    ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಘೋಷಣೆಯಾಗುತ್ತಿದ್ದಂತೆಯೇ ಪಟ್ಟಣದಲ್ಲಿ ರಾಷ್ಟ್ರೀಯ ಬಸವಸೈನ್ಯ ಹಾಗೂ ವಿವಿಧ ಸಂಘ ಸಂಸ್ಥೆಯ ಮುಖಂಡರು ರಾಜಕೀಯ ಧುರೀಣರು ಬಸವೇಶ್ವರ ವೃತ್ತದಲ್ಲಿ ಜಮಾಯಿಸಿ ಬಸವವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಪಟಾ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು. ಸಿಎಂ ಸಿದ್ದರಾಮ್ಯನವರು ಹಾಗೂ ಸಚಿವ ಶಿವಾನಂದ ಪಾಟೀಲರಿಗೆ ಅಭಿನಂದನೆ ಸಲ್ಲಿಸಿದರು.

    ಲೋಕನಾಥ ಅಗರವಾಲ, ಶಂಕರಗೌಡ ಬಿರಾದಾರ, ಶ್ರೀಕಾಂತ ಕೊಟ್ರಶೆಟ್ಟಿ, ಸುನೀಲಗೌಡ ಚಿಕ್ಕೊಂಡ, ಅಶೋಕ ಹಾರಿವಾಳ, ನಿಂಗಪ್ಪ ಅವಟಿ, ಸಂಜು ಬಿರಾದಾರ, ಶೇಖರ ಗೊಳಸಂಗಿ, ಬಸವರಾಜ ಹಾರಿವಾಳ, ಸಂಗಮೇಶ ಓಲೇಕಾರ, ಶೇಖನಗೌಡ ಪಾಟೀಲ, ಬಸಣ್ಣ ದೇಸಾಯಿ, ಅರವಿಂದ ಸಾಲವಾಡಗಿ, ಮಹಾಂತೇಶ ಸಾಸಾಬಳ, ಪ್ರವೀಣ ಪೂಜಾರಿ, ಶಂತು ಡಂಬಳ, ಬಸವರಾಜ ಗೊಳಸಂಗಿ, ಶಿವಾನಂದ ಮಂಗಾನವರ, ಪರಶುರಾಮ ದಿಂಡವಾರ, ಅಶೋಕ ಚಲವಾದಿ, ಶ್ರೀಧರ ಕುಂಬಾರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts