ಚಾಮರಾಜನಗರದ ಘಟನೆ ಬೇರೆಲ್ಲೂ ಮರುಕಳಿಸದಂತೆ ಆಕ್ಸಿಜನ್ ಪೂರೈಕೆಗೆ ಕ್ರಮ

cm
Published on

ಬೆಂಗಳೂರು : ಚಾಮರಾಜನಗರ ಜಿಲ್ಲೆಯಲ್ಲಿ 24 ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವಪ್ಪಿರುವ ದುರ್ಘಟನೆ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಆಕ್ಸಿಜನ್ ಉತ್ಪಾದನಾ ಸಂಸ್ಥೆಗಳು ಕೂಡ ಭಾಗಿಯಾಗಿರುವ ಈ ಸಭೆಯಲ್ಲಿ ಆಕ್ಸಿಜನ್ ತಯಾರಿಕೆ ಮತ್ತು ಆಸ್ಪತ್ರೆಗಳಿಗೆ ಪೂರೈಕೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಇಲ್ಲದಂತೆ ಮಾಡಲು ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿರುವ ಸಿಎಂ, ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಘಟನೆ ಯಾವುದೇ ಜಿಲ್ಲೆಯಲ್ಲಿ ಮರುಕಳಿಸದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದ್ದಾರೆ ಎನ್ನಲಾಗಿದೆ.

ಜಿಲ್ಲಾ ಆಸ್ಪತ್ರೆಗಳ ಸ್ಥಿತಿ ಗತಿ ಬಗ್ಗೆ ವರದಿ ಸಂಗ್ರಹ ಮಾಡುವಂತೆ, ಔಷಧಿ ಕೊರತೆಯೂ ಎದುರಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಗೃಹಸಚಿವ ಬಸವರಾಜ್ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net