More

    ಮೊದಲ ಹಂತದ ಚುನಾವಣೆ ಮುಗಿದಿದೆ, ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ! ವರದಿ ಬಂದಿದೆ ಎಂದ ಸಿಎಂ

    ಬೆಂಗಳೂರು: ಮೊದಲ ಹಂತದ ಚುನಾವಣೆ ಮುಗಿದಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವರದಿ ಬಂದಿದೆ. ಎಲ್ಲಾ ಅಭ್ಯರ್ಥಿಗಳು ಹಾಗೂ ಜಿಲ್ಲಾ ಸಚಿವರೊಂದಿಗೆ ಮಾತನಾಡಿದ್ದೇನೆ. ಎಲ್ಲರೂ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಜನರು ಆಶೀರ್ವಾದ ಮಾಡಿದ್ದಾರೆಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ಇದನ್ನೂ ಓದಿ: ಮಣಿಪುರದಲ್ಲಿ ಕುಕಿ ಉಗ್ರರ ಬಾಂಬ್​​ ದಾಳಿ; ಇಬ್ಬರು ಯೋಧರು ಹುತಾತ್ಮ

    “ಚುನಾವಣೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರದ 10 ವರ್ಷಗಳ ವೈಫಲ್ಯ ಹಾಗೂ ನಮ್ಮ ಸರ್ಕಾರದ ಸಾಧನೆಗಳನ್ನು ಪ್ರಮುಖವಾಗಿ ಪ್ರಸ್ತಾಪ ಮಾಡುತ್ತಿದ್ದೇವೆ. ಜನರು ಆಸಕ್ತಿಯಿಂದ ನಮ್ಮ ಮಾತುಗಳನ್ನು ಆಲಿಸಿ, ಉತ್ಸಾಹ ತೋರುತ್ತಿದ್ದಾರೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ, ಅವಕಾಶ ವಂಚಿತರಾದವರಿಗೆ ಮೀಸಲಾತಿ ಕೊಡಬೇಕೆಂದು ಸಂವಿಧಾನ ಹೇಳಿದೆ” ಎಂದರು.

    “ನರೇಂದ್ರ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸಂವಿಧಾನ ತಿದ್ದುಪಡಿ ಮಾಡಿ 10% ಮೀಸಲಾತಿ ನೀಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚನೆ ಮಾಡಿರುವ ಮೂಲ ಸಂವಿಧಾನದಲ್ಲಿ ಅದು ಇಲ್ಲ. ಆದರೂ ಸಂವಿಧಾನ ತಿದ್ದುಪಡಿ ಮಾಡಿ ಮೀಸಲಾತಿ ನೀಡಿದೆ. 1992ನೇ ಇಸವಿಯಲ್ಲಿ ಸುಪ್ರೀಂ ಕೋರ್ಟ್​ನ ಸಂವಿಧಾನ ಪೀಠವು ಮಂಡಲ್ ಆಯೋಗದ ವರದಿಯ ಶಿಫಾರಸುಗಳನ್ನು ಒಪ್ಪಿಕೊಂಡಿದ್ದು, ಮೀಸಲಾತಿಯ ಸೀಲಿಂಗ್ ಎಷ್ಟಿರಬೇಕೆಂದು ಕೂಡ ಹೇಳಿದೆ. ಮೀಸಲಾತಿ 50% ಗಿಂತ ಹೆಚ್ಚಿರಬಾರದು ಎಂದು ಹೇಳಿದ್ದಾರೆ” ಎಂದರು.

    ಇದನ್ನೂ ಓದಿ: ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮತದಾನ

    “ಮಂಡಲ್ ಆಯೋಗದ ವರದಿ ಜಾರಿಯಾದಾಗ ಮೀಸಲಾತಿ ವಿರೋಧಿಸಿದವರು ಬಿಜೆಪಿ ಪಕ್ಷದವರು. ಶಾಲಾ-ಕಾಲೇಜುಗಳ ಮಕ್ಕಳನ್ನು ಎತ್ತಿಕಟ್ಟಿ, ಮೀಸಲಾತಿ ವಿರೋಧಿಸಲು ಹೇಳಿ ಆತ್ಮಹತ್ಯೆಗೆ ಪ್ರೇರೇಪಿಸಿದರು. ಮಹಿಳೆಯರು ಮತ್ತು ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವುದನ್ನು ವಿರೋಧಿಸಿ ರಥಯಾತ್ರೆಯನ್ನು ಹಮ್ಮಿಕೊಂಡಿದ್ದರು. ಮೊದಲಿನಿಂದಲೂ ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ” ಎಂದು ಸರಣಿ ಟ್ವೀಟ್ ಮೂಲಕ ಆರೋಪಿಸಿದ್ದಾರೆ.

    ನಿಮಗೆ ಏನೂ ಗೊತ್ತಿಲ್ಲ… RCB ಪ್ಲೇಆಫ್ ಕನಸು ಇನ್ನೂ ಜೀವಂತ: ವಿಲ್​ ಜ್ಯಾಕ್ಸ್​ ಬಿಚ್ಚಿಟ್ರು ಶಾಕಿಂಗ್ ಸಂಗತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts