More

    ಅಂಗನವಾಡಿ ಕಾರ್ಯಕರ್ತೆಯರಿಂದ ನಾಡಿದ್ದು ಮುಖ್ಯಮಂತ್ರಿಗಳ ನಿವಾಸ ಚಲೋ

    ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಒಂಬತ್ತನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದಿಂದ ಸೂಕ್ತ ಪ್ರತಿಕ್ರಿಯೆ ದೊರೆಯದ ಕಾರಣ ಫೆ.1 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸ ಚಲೋ ನಡೆಸಲು ನಿರ್ಧರಿಸಿದ್ದಾರೆ.

    ಈ ಕುರಿತು ಪ್ರತಿಭಟನಾ ಸ್ಥಳದಲ್ಲೇ ಸೋಮವಾರ ಸುದ್ದಿಗೋಷ್ಠಿ ನಡೆಸಿದಿ ಸಿಐಟಿಯು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ, ಬೇಡಿಕೆಗಳ ಈಡೇರಿಕೆಗಾಗಿ ನೀಡಲಾಗಿದ್ದ ಹತ್ತು ದಿನಗಳ ಗಡುವು ಮುಗಿದ್ದರೂ, ಸರ್ಕಾರಕ್ಕೆ ಕಾರ್ಯಕರ್ತೆಯರ ಸಮಸ್ಯೆ ಪರಿಹರಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಬುಧವಾರ ಮುಖ್ಯಮಂತ್ರಿ ನಿವಾಸ ಚಲೋ ನಡೆಸಲಾಗುವುದು ಎಂದು ಹೇಳಿದರು.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಇಲಾಖೆ ಮಟ್ಟದಲ್ಲಿ ಸಾಧ್ಯವಿರುವ ಕಾರ್ಯ ಮಾಡಲಾಗುವುದು. ಉಳಿದ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು. ಆದರೆ ಇಲ್ಲಿಯವರೆಗೂ ಯಾವುದೇ ಸರ್ಕಾರಿ ಆದೇಶ ಹೊರಬೀಳದ ಹಿನ್ನೆಲೆಯಲ್ಲಿ ಹೋರಾಟ ಮುಂದುವರಿಸಲಾಗಿದೆ ಎಂದು ವಿವರಿಸಿದರು.

    ಕಳೆದ ಒಂಬತ್ತು ದಿನಗಳಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದು, ಶೌಚಾಲಯ, ಕುಡಿಯುವ ನೀರು, ಮಲಗಲು ಸೂಕ್ತ ವ್ಯವಸ್ಥೆ ಇಲ್ಲದೆ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಆದರೂ ಸರ್ಕಾರಕ್ಕೆ ಕರುಣೆಯೇ ಇಲ್ಲವಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಅಂಗನವಾಡಿ ನೌಕರರಿಗೂ ಗ್ರಾಚ್ಯುಟಿ ನೀಡಬೇಕು. ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿ, ಅಂಗನವಾಡಿಗಳ ವೇಳಾಪಟ್ಟಿ ಬದಲಿಸಿ, ಕಾರ್ಯಕರ್ತೆಯರನ್ನು ಶಿಕ್ಷಕಿಯರು ಎಂದು ಪರಿಗಣಿಸುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಮುಖ್ಯಮಂತ್ರಿಗಳು ಕೂಡಲೇ ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು.

    ತಲೆ ಮೇಲೇ ಆಕ್ಸಿಜನ್ ಸಿಲಿಂಡರ್ ಬಿದ್ದು ಸಾವಿಗೀಡಾದ 9 ವರ್ಷದ ಬಾಲಕ!

    ಜ. 30ರಿಂದ ಮೂರು ವಾರ ಕಾಲ ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಕ್ಲೋಸ್; ಎಲ್ಲಿ, ಯಾಕೆ?

    14 ವರ್ಷದ ಹುಡುಗಿಗೆ ಹೃದಯಾಘಾತ; ಸಾವಿಗೂ ಕಾರಣವಾಗಬಹುದು ಡಿಯೊಡರೆಂಟ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts