ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಸಿಎಂ ಸೂಚನೆ

ಬೆಂಗಳೂರು: ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯ ಕಟ್ಟಡ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಇದನ್ನೂ ಓದಿ: ತುಮಕೂರು | ಠಾಣೆಗೆ ದೇವರನ್ನು ಹೊತ್ತು ತಂದು ಪೊಲೀಸರಿಂದ ವಿಶೇಷ ಪೂಜೆ! ಲೋಕೋಪಯೋಗಿ ಇಲಾಖೆಯಲ್ಲಿ ಇನ್ನೂ ಪ್ರಾರಂಭವಾಗದಿರುವ ಕಾಮಗಾರಿಗಳನ್ನು ಮರುಪರಿಶೀಲನೆಗಾಗಿ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು. ಅದರಲ್ಲಿ 9.90 ಕೋಟಿ ರೂ. ವೆಚ್ಚದ ಸಿದ್ದಗಂಗಾ ಮಠದ ವಸತಿ ನಿಲಯದ ಕಾಮಗಾರಿಯೂ ಸೇರಿತ್ತು. ಈ ಕಾಮಗಾರಿಯ ತಾಂತ್ರಿಕ ಬಿಡ್ ತೆರೆಯಲಾಗಿತ್ತು. … Continue reading ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಸಿಎಂ ಸೂಚನೆ