More

    ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್​ಗಳ ವಿರುದ್ಧ ಕಠಿಣ ಕ್ರಮ; ಸಿಎಂ ಖಡಕ್ ಸೂಚನೆ!

    ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹಲವು ಬದಲಾವಣೆಗಳನ್ನು ತರುವಲ್ಲಿ ನಿರತರಾಗಿದ್ದಾರೆ. ಈ ನಿಟ್ಟಿನಲ್ಲಿ ಬದಲಾವಣೆಯತ್ತ ಹೆಚ್ಚು ಗಮನ ಹರಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಇತ್ತೀಚೆಗೆ ನಡೆದ ನಾಡಿನ ಸಾಹಿತಿ ಮತ್ತು ಬರಹಗಾರರ ಸಭೆಯಲ್ಲಿ ರಾಜ್ಯದ ಜನತೆಗೆ ಕೆಲವು ಭರವಸೆಗಳನ್ನು ನೀಡಿದ್ದಾರೆ. ನೀಡಿದ ಭರವಸೆಗಳು ಈ ಕೆಳಕಂಡಂತಿವೆ:

    ಇದನ್ನೂ ಓದಿ: ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಬಿ ದಯಾನಂದ ನೇಮಕ

    ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯ ಅಕ್ಷಮ್ಯ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಕನ್ನಡ ಹೋರಾಟಗಾರರು, ರೈತ-ಕಾರ್ಮಿಕ-ದಲಿತ ಚಳವಳಿಗಳ ಹೋರಾಟಗಾರರು ಮತ್ತು ಸಾಹಿತಿ, ಬರಹಗಾರರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್

    ಹೊಸ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡವಲು ಅವಕಾಶ ಕೊಡುವುದಿಲ್ಲ. ಈ ಬಗ್ಗೆ ಮತ್ತೊಂದು ಪ್ರತ್ಯೇಕವಾದ ಸಭೆ ಕರೆದು ಸಮಗ್ರವಾಗಿ ಚರ್ಚಿಸಿ ನಿಷ್ಠುರ ಮತ್ತು ಖಚಿತವಾದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು. ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್​ಗಳು ಮತ್ತು ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಈಗಾಗಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts