More

  ಹೈಕಮಾಂಡ್ ಮೆಚ್ಚಿಸುವುದೇ ಸಿಎಂ ಉದ್ದೇಶ; ಆರ್.ಅಶೋಕ್ ಟೀಕೆ

  ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಮೆಚ್ಚಿಸುವ ಮೊದಲು ಮುಖ್ಯಮಂತ್ರಿಯಾಗಿ ರಾಜ್ಯದ ಹಿತರಕ್ಷಣೆ ಮುಖ್ಯವೆಂದು ತಿಳಿದುಕೊಳ್ಳಲಿ ಎಂದು ಸಿದ್ದರಾಮಯ್ಯ ಅವರಿಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯಭರಿತ ಸಲಹೆ ನೀಡಿದ್ದಾರೆ.

  ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಸಮಯ ಸಿಕ್ಕಿದೆ. ಈ ಸಂದರ್ಭದಲ್ಲಿ ಕ್ಷುಲ್ಲಕ ರಾಜಕೀಯ ಬದಿಗಿಟ್ಟು, ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ತಮ್ಮ ಮುತ್ಸದ್ದಿತನ ಪ್ರದರ್ಶಿಸುತ್ತಾರೆ ಎಂಬ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ.

  ಸಾಮಾಜಿಕ ಜಾಲತಾಣದಲ್ಲಿ ಆರ್.ಅಶೋಕ್ ಸರಣಿ ಸಂದೇಶ ಹಂಚಿಕೊಂಡು, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಜತೆ ಉತ್ತಮ ಬಾಂಧವ್ಯ ಕಾಯ್ದುಕೊಳ್ಳುವುದು ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿಗೆ ಇರಬೇಕಾದ ಪ್ರಮುಖ ಲಕ್ಷಣ ಮಾತ್ರವಲ್ಲ, ಕರ್ತವ್ಯ ಕೂಡ ಹೌದು.

  ಆದರೆ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯದ ಹಿತರಕ್ಷಣೆಗಿಂತ ಪ್ರಧಾನಮಂತ್ರಿ, ಕೇಂದ್ರ ಸರ್ಕಾರದ ಮೇಲೆ ಇಲ್ಲಸಲ್ಲದ ರಾಜಕೀಯ ಪ್ರೇರಿತ ಆರೋಪ ಮಾಡುವುದೇ ದೊಡ್ಡ ಕೆಲಸವಾದಂತಿದೆ.

  ಮೊನ್ನೆ ನಡೆದ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮೋದಿಯವರ ಮೇಲೆ ಸಿದ್ದರಾಮಯ್ಯನವರು ತೋರಿದ ರೋಷಾವೇಶ ಗಮನಿಸಿದರೆ ರಾಜ್ಯದ ಜನತೆ ಹಿತಕ್ಕಿಂತ ತಮ್ಮ ಹೈಕಮಾಂಡ್ ಮೆಚ್ಚಿಸುವುದೇ ಅವರ ಉದ್ದೇಶವಾದಂತಿದೆ ಎಂದು ಆರ್.ಅಶೋಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts