ಸಿಎಂ ಜಾತಿ ಗುರಾಣಿ ಬಳಸಿಕೊಳ್ಳುತ್ತಿದ್ದಾರೆ

ಚಿಕ್ಕಮಗಳೂರು: ಮೂಡ ಹಗರಣ ಅಂಗೈ ಹುಣ್ಣಿನಷ್ಟೇ ಸ್ಪಷ್ಟ. ಪಿಎಂ ಸಿದ್ದರಾಮಯ್ಯ ಅವರು ಸಮಾಜವಾದದ ಹೆಸರಿನಲ್ಲಿ ಮಾಡಬಾರದನ್ನೆಲ್ಲ ಮಾಡಬಾರದು. ಇದೀಗ ಸಿಎಂ ಜಾತಿ ಗುರಾಣಿ ಬಳಸಿಕೊಳ್ಳಲು ಮುಂದಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳನ್ನು ಸಾವಿರ ಬಾರಿ ಸಮರ್ಥನೆ ಮಾಡಿಕೊಂಡರು ಅದನ್ನು ಸತ್ಯ ಮಾಡಲು ಸಾಧ್ಯವಿಲ್ಲ. ಅಕ್ರಮವನ್ನು ಸಮರ್ಥಿಸಿಕೊಂಡಷ್ಟು ಕಡು ಬೆತ್ತಲೆಗೆ ಒಳಗಾಗುತ್ತೀರಿ. ತಪ್ಪಾಗಿದ್ದರೆ ಅದನ್ನು ಒಪ್ಪಿಕೊಂಡು ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂದು ಹೇಳಿದರು.
ಅತ್ಯಾಚಾರಿ ಹಾಗೂ ಭ್ರಷ್ಟಾಚಾರಿಗೆ ಜಾತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿದ್ದರು. ಈಗ ಅವರೇ ಜಾತಿಯನ್ನು ಗುರಾಣಿ ಮಾಡಿಕೊಳ್ಳಲು ಹೊರಟಿದ್ದಾರೆ. ಇದು ಸಮಾಜವಾದಕ್ಕೆ ಮಾಡುವ ಮಹಾ ದ್ರೋಹವಾಗಿದೆ. ಇದರಿಂದ ಶಾಂತವೇರಿ ಗೋಪಾಲಗೌಡ, ರಾಮ್ ಮನೋಹರ್ ಲೋಹಿಯಾ ಅವರ ಆತ್ಮಗಳು ನರಳಾಡುವಂತಾಗಿದೆ ಎಂದರು.
ಶಾಂತವೇರಿ ಗೋಪಾಲಗೌಡ ಅವರಿಗೆ ನಿವೇಶನ ನೀಡುತ್ತೇವೆ ಎಂದಿದ್ದಾಗ ಅವರು ಬೇಡ ಎಂದಿದ್ದರಂತೆ. ನಮ್ಮ ಸಮಾಜದ ಕಟ್ಟ ಕಡೆಯ ಬಡವನಿಗೆ ಎಲ್ಲಿಯವರೆಗೆ ನಿವೇಶನ ಸಿಗುವುದಿಲ್ಲವೋ ಅಲ್ಲಿಯವರೆಗೂ ನನಗೂ ಬೇಡ ಎಂದಿದ್ದರಂತೆ. ಅಂತವರ ಹೆಸರನ್ನು ಹೇಳುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿಯ ಹೆಸರಲ್ಲಾಗಿರುವ ಅಕ್ರಮವನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಜೊತೆಗೆ ಜಾತಿಯ ತಳುಕನ್ನು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಹಿಂದ ರಾಜಕಾರಣ ಮಾಡಿ ರಾಜಕಾರಣ ದಕ್ಕಿಸಿಕೊಂಡಿರುವ ಸಿದ್ದರಾಮಯ್ಯ ಅವರ ಕಣ್ಣೆದುರೇ ಅನ್ಯಾಯ ಮೋಸ ಆಗುತ್ತಿದ್ದರು ಅವರನ್ನು ರಕ್ಷಣೆ ಮಾಡುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ಎರಡೇ ದಿನದಲ್ಲಿ ನೆಕ್ಕುಂಟಿ ನಾಗರಾಜ್ ಹಾಗು ನಾಗೇಂದ್ರ ಅವರ ಸಂಬಂಧವನ್ನು ಬಹಿರಂಗಪಡಿಸಿದ್ದೆ. ನಾಗೇಂದ್ರ ಶಾಂಗ್ರಿಲಾ ಹೋಟೆಲ್ ನಲ್ಲಿ ಅಧಿಕಾರಿಗಳ ಸಭೆ ಕರೆದು ಡೈರೆಕ್ಷನ್ ಕೊಟ್ಟಿದ್ದನ್ನು ಹೇಳಿದ್ದೆ. ನೆಕ್ಕುಂಟಿ ನಾಗರಾಜ್ ಈ ಅಕ್ರಮದ ಸೂತ್ರಧಾರ ಎಂದು ಹೇಳಿದ್ದೆ. ಜೊತೆಗೆ ಸಿಎಂ ಹಾಗೂ ಡಿಸಿಎಂಗೂ ನಾಗರಾಜ್ ಪರಮಾತ್ಮ ಎಂಬುದನ್ನು ಫೋಟೋ ಬಿಡುಗಡೆ ಮಾಡಿಯೇ ತೋರಿಸಿದ್ದೆ. ಇದಾದ ಬಳಿಕವೇ ನಾಗರಾಜ್ ನನ್ನು ಎಸ್ಐಟಿ ವಶಕ್ಕೆ ಪಡೆದಿತ್ತು ಎಂದರು.
ಸರ್ಕಾರ ಈ ಪ್ರಕರಣದ ತನಿಖೆಯ ಪೂರ್ಣ ದಾಖಲೆಗಳನ್ನು ಸಿಬಿಐ ವಶಕ್ಕೆ ಒಪ್ಪಿಸಬೇಕು. ಪ್ರಕರಣದ ಪಾತ್ರಧಾರಿಗಳಲ್ಲಿ ಕೆಲವರು ಸಿಕ್ಕಿಬಿದ್ದಿದ್ದಾರೆ ಆದರೆ ಸೂತ್ರಧಾರಿಗಳು ಮಾತ್ರ ಇನ್ನೂ ಸಿಕ್ಕಿ ಬಿದ್ದಿಲ್ಲ. ಸೂತ್ರಧಾರಿಗಳ ಮೇಲು ಅಷ್ಟೇ ಕಠಿಣ ಕ್ರಮವಾಗಬೇಕು ಎಂದು ಒತ್ತಾಯಿಸಿದರು.

Share This Article

ಹದ್ದಿನ ಕಣ್ಣಿನಂಥ ದೃಷ್ಟಿ ನಿಮ್ಮದಾಗಬೇಕಾ? ಇವು ನಿಮ್ಮ ಆಹಾರದಲ್ಲಿ ಇವೆಯೇ? ಚೆಕ್​ ಮಾಡಿಕೊಳ್ಳಿ

ಬೆಂಗಳೂರು: ಮಾನವನ ಅಂಗಾಂಗಗಳಲ್ಲಿ ಎಲ್ಲವೂ ಮುಖ್ಯವೇ ಆದರೂ ಕಣ್ಣುಗಳು ಪ್ರಮುಖ ಸ್ಥಾನ ಪಡೆದುಕೊಂಡಿವೆ. ಹೀಗಾಗಿಯೇ ಕಣ್ಣುಗಳು…

ಇವುಗಳನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದ್ರೆ ಸಾಕು! ಚೆನ್ನಾಗಿ ನಿದ್ದೆ ಜತೆ, ಶ್ರೀಮಂತರಾಗೋದು ಪಕ್ಕಾ!

ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ಹಣ ಅಥವಾ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.  ಈಗ ಹೇಳಿರುವ ಸರಳ ಪರಿಹಾರಗಳನ್ನು…

ಮನೆಯಲ್ಲಿ ಗುಲಾಬಿ ಗಿಡ ಬೆಳೆಸುತ್ತಿದ್ದೀರಾ? ಈ ವಾಸ್ತು ನಿಯಮಗಳು ಕಡ್ಡಾಯ!

ಬೆಂಗಳೂರು: ಸಾಮಾನ್ಯವಾಗಿ ನಮ್ಮ ಹಿತ್ತಲಿನಲ್ಲಿ ಹಲವು ಬಗೆಯ ಗಿಡಗಳನ್ನು ಬೆಳೆಸುತ್ತೇವೆ. ಗುಲಾಬಿ ಗಿಡಗಳನ್ನು ಇಷ್ಟಪಡದವರೇ ಇಲ್ಲ.…