More

    ಸಿಎಂಗೆ ಕುಂದು ಕೊರತೆ ಅರ್ಜಿ ಸಲ್ಲಿಸಬೇಕೆ?; ಆನ್‌ಲೈನ್‌ ವ್ಯವಸ್ಥೆ ಬಳಸಿ

    ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ‌ ಜನ‌ಸ್ಪಂದನಾ ಕಾರ್ಯ ಜನ ಸ್ಪಂದನಾ ಕಾರ್ಯಕ್ರಮ ನಡೆಯುತ್ತಿದೆ. ಸಾವಿರಾರು ಮಂದಿ‌ ಪಾಲ್ಗೊಂಡಿದ್ದಾರೆ. 

    ರಾಜ್ಯದ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರು ಸ್ಥಳದಲ್ಲೇ ಹಾಜರಿದ್ದು ಕುಂದುಕೊರತೆ ಮೇಲೆ ಕ್ರಮವಹಿಸಲು ಸೌಲಭ್ಯ ಕಲ್ಪಿಸಲಾಗಿದೆ. 

    ಅನೇಕರಿಗೆ ದೂರು ಸಲ್ಲಿಸುವ ಅಪೇಕ್ಷೆ ಇದ್ದರೂ ಸಿಎಂ ಗೃಹ ಕಚೇರಿಗೆ ಬರುವುದು ಕಷ್ಟವಾಗಬಹುದು. ಅಂತಹವರ ಅನುಕೂಲಕ್ಕಾಗಿ ಆನ್ ಲೈನ್ ಅರ್ಜಿ ಸ್ವೀಕಾರ ವ್ಯವಸ್ಥೆಯನ್ನೂ ಮಾಡಲಾಗಿದೆ.

    ಸಾರ್ವಜನಿಕರು ಮನೆಯಲ್ಲೇ ಕುಳಿತು ಕುಂದುಕೊರತೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಹವಾಲು ದಾಖಲಿಸಲು ಅನುವಾಗುವಂತೆ ಪ್ರತ್ಯೇಕ ಕ್ಯೂಆರ್‌ ಕೋಡ್‌ ಸೃಜಿಸಲಾಗಿದೆ. ಇದನ್ನು ಸ್ಕಾನ್‌ ಮಾಡಿ ಅರ್ಜಿ ಸಲ್ಲಿಸಬಹುದು. ಇದನ್ನು ಮಾನ್ಯ ಮುಖ್ಯಮಂತ್ರಿಯವರ ಜನತಾ ದರ್ಶನದಲ್ಲಿಯೇ ಸ್ವೀಕೃತವಾದ ಅಹವಾಲೆಂದೇ ಪರಿಗಣಿಸಲಾಗುತ್ತದೆ.

    ಸಾರ್ವಜನಿಕರಿಂದ ಸ್ವೀಕೃತವಾಗುವ ಅರ್ಜಿಯನ್ನು ಏಕೀಕೃತ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ದಾಖಲಿಸಿ, ಸ್ವೀಕೃತಿಯನ್ನು ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಸ್ವೀಕೃತಿ ಸಂಖ್ಯೆ ಬಳಸಿ ತಮ್ಮ ಅಹವಾಲಿನ ಸ್ಥಿತಿಗತಿಯನ್ನು ತಿಳಿಯಬಹುದು ಅಥವಾ 1902 ಸಂಖ್ಯೆಗೆ ಕರೆಮಾಡಿ ಅರಿಯಬಹುದು.

    ಸ್ವೀಕರಿಸಲಾದ ಅರ್ಜಿಯ ವಿಷಯದ ಆಧಾರದಲ್ಲಿ ಸಂಬಂಧಿಸಿದ ಇಲಾಖೆಗಳ ಅಧೀನ ಸಂಸ್ಥೆಗಳ ಅಧಿಕಾರಿಗಳ ಲಾಗಿನ್‌ಗಳಿಗೆ ತಕ್ಷಣ ರವಾನಿಸಲಾಗುತ್ತದೆ. 

    ಸ್ವೀಕೃತವಾದ ಅಹವಾಲುಗಳ ಪ್ರಗತಿ ಪರಿಶೀಲಿಸಲು ಪ್ರತ್ಯೇಕ ಡಾಶ್‌ಬೋರ್ಡ್‌ ಅಭಿವೃದ್ದಿಪಡಿಸಲಾಗಿದೆ. ಈ ಡ್ಯಾಶ್‌ಬೋರ್ಡ್‌ನಲ್ಲಿ ಇಲಾಖಾವಾರು, ಜಿಲ್ಲಾವಾರು ಸ್ವೀಕೃತವಾದ ಕುಂದುಕೊರತೆ ಮತ್ತು ಅಹವಾಲುಗಳ ಸಂಖ್ಯೆ, ವಿಲೇ ಮಾಡಲಾದ ಮತ್ತು ಬಾಕಿ ಉಳಿದಿರುವ ಕುಂದುಕೊರತೆ ಮತ್ತು ಅಹವಾಲುಗಳ ವಿವರ ಲಭ್ಯವಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts