More

    ಪುತ್ರನನ್ನು ಕಳೆದುಕೊಂಡ ತಂದೆಗೆ 1 ಕೋಟಿ ರೂ. ಪರಿಹಾರ ಕೊಟ್ಟ ಕೇಜ್ರಿವಾಲ್​!

    ನವದೆಹಲಿ: ಕರೊನಾ ವಾರಿಯರ್​ ಆಗಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ ವರ್ಗದವರು ಬಹಳಷ್ಟಿದ್ದಾರೆ. ಆ ಪೈಕಿ ಪ್ರಮುಖವಾಗಿ ಇರುವಂಥವರು ಎಂದರೆ ವೈದ್ಯರು. ವೈದ್ಯರು ಮಾತ್ರವಲ್ಲದೆ, ಅರೆ ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಮುಂತಾದವರನ್ನೆಲ್ಲ ಕರೊನಾ ವಾರಿಯರ್ ಎಂದು ಪರಿಗಣಿಸಲಾಗಿದ್ದು, ಅವರು ಕೋವಿಡ್​ನಿಂದಾಗಿ ಮೃತಪಟ್ಟರೆ ಸರ್ಕಾರದಿಂದ ಲಕ್ಷಾಂತರ ರೂಪಾಯಿ ಪರಿಹಾರವಾಗಿ ಲಭಿಸಲಿದೆ.

    ರಾಷ್ಟ್ರ ರಾಜಧಾನಿಯಲ್ಲಿ ಹೀಗೆ ವೈದ್ಯರೊಬ್ಬರು ಕರೊನಾಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಕೊಟ್ಟಿರುವ ಪರಿಹಾರ ಮೊತ್ತ ಬರೋಬ್ಬರಿ 1 ಕೋಟಿ ರೂಪಾಯಿ. ದೆಹಲಿಯ ಡಾ.ಅನಾಸ್ ಎಂಬ 26 ವರ್ಷದ ವ್ಯಕ್ತಿ ಕರೊನಾ ಸೋಂಕಿತರಾಗಿ ಇತ್ತೀಚೆಗಷ್ಟೇ ಮೃತಪಟ್ಟಿದ್ದರು.

    ಇದನ್ನೂ ಓದಿ: ಸೋಂಕಿತ ತಾಯಿ ತೀರಿಹೋದ ಮೂರೇ ದಿನಕ್ಕೆ ಅಣ್ಣ-ತಮ್ಮನೂ ಕರೊನಾಗೆ ಬಲಿ; ಅಮ್ಮಂದಿರ ದಿನವೇ ಇಬ್ಬರೂ ಏಕಕಾಲಕ್ಕೇ ನಿಧನ!

    ಡಾ. ಅನಾಸ್ ಅವರ ಮನೆಗೆ ಭೇಟಿ ನೀಡಿ ಅವರ ತಂದೆಗೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಒಂದು ಕೋಟಿ ರೂಪಾಯಿ ಮೌಲ್ಯದ ಚೆಕ್​ ಹಸ್ತಾಂತರಿಸಿದ್ದಾರೆ. ‘ನನ್ನ ಪುತ್ರ ಕರ್ತವ್ಯದ ಮೇಲಿದ್ದ, ಜನರ ಸೇವೆ ಮಾಡಿ ಜೀವ ಕಳೆದುಕೊಂಡಿದ್ದಾನೆ. ನನ್ನ ಇತರ ಮಕ್ಕಳೂ ಅವನಂತೆಯೇ ದೇಶಕ್ಕಾಗಿ ಸೇವೆ ಮಾಡಲಿ ಎಂದು ಬಯಸುತ್ತೇನೆ’ ಎಂಬುದಾಗಿ ಅನಾಸ್ ಅವರ ತಂದೆ ಈ ವೇಳೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

    ಎಸ್‌ಆರ್‌ಎಸ್ ಟ್ರಾವೆಲ್ಸ್ ಮಾಲೀಕ ರಾಜಶೇಖರ್ ವಿಧಿವಶ: ಕೋವಿಡ್-19 ಸೋಂಕಿಗೆ ಬಲಿ

    ಕೋವಿಡ್​ನಿಂದ ಗುಣವಾದ ಮೇಲೆ ಕಾಡುತ್ತದೆಯಂತೆ ನಿತ್ರಾಣ!; ಆರು ತಿಂಗಳಾದರೂ ಸುಸ್ತೋ ಸುಸ್ತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts