More

  ತಿಹಾರ್​ ಜೈಲಿಗೆ ಶರಣಾಗುವ ಮುನ್ನ ರಾಜ್​ಘಾಟ್​​, ಹನುಮಾನ್​ ದೇವಸ್ಥಾನಕ್ಕೆ ಸಿಎಂ ಕೇಜ್ರಿವಾಲ್​ ಭೇಟಿ

  ನವದೆಹಲಿ : ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ (ಜೂನ್​​​ 2) ತಿಹಾರ್ ಜೈಲಿಗೆ ಮರಳಲಿದ್ದಾರೆ. ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನಿನ ಮೇಲೆ ಕೇಜ್ರಿವಾಲ್ ಮೇ 10ರಂದು ಜೈಲಿನಿಂದ ಬಿಡುಗಡೆಯಾಗಿದ್ದರು. ನ್ಯಾಯಾಲಯ ಅವರಿಗೆ 21 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಜೂನ್ 2ರಂದು ತಿಹಾರ್ ಜೈಲು ಅಧೀಕ್ಷಕರ ಮುಂದೆ ಶರಣಾಗುವಂತೆ ಸೂಚಿಸಿತ್ತು.

  ಇದನ್ನು ಓದಿhttps://www.vijayavani.net/is-pm-modi-not-governed-by-law-digvijaya-singh-on-pm-meditation-hall-photos

  ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ನಾನು 21 ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ. ಗೌರವಾನ್ವಿತ ಸುಪ್ರೀಂ ಕೋರ್ಟ್‌ಗೆ ಕೃತಜ್ಞನಾಗಿದ್ದೇನೆ. ಇಂದು ತಿಹಾರ್​ ಜೈಲಿಗೆ ಶರಣಾಗುತ್ತೇನೆ. ಮಧ್ಯಾಹ್ನ 3 ಗಂಟೆಗೆ ಮನೆಯಿಂದ ಹೊರಡುತ್ತೇನೆ. ತಿಹಾರ್​ಗೆ ಹೋಗುವ ಮೊದಲು ರಾಜ್‌ಘಾಟ್‌ಗೆ ತೆರಳಿ ಮಹಾತ್ಮಗಾಂಧಿ ಅವರಿಗೆ ನಮನ ಸಲ್ಲಿಸುತ್ತೇನೆ. ಅಲ್ಲಿಂದ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ಹೋಗಿ ಹನುಮಾನ್ ಜಿಯವರ ಆಶೀರ್ವಾದ ಪಡೆಯುತ್ತೇನೆ. ಅಲ್ಲಿಂದ ಪಕ್ಷದ ಕಚೇರಿಗೆ ತೆರಳಿ ಎಲ್ಲ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರನ್ನು ಭೇಟಿ ಮಾಡುತ್ತೇನೆ ಎಂದು ಸಿಎಂ ಅರವಿಂದ್​ ಕೇಜ್ರಿವಾಲ್​ ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

  ತಮ್ಮ ಆರೋಗ್ಯ ಸ್ಥಿತಿ ಹದಗೆಟ್ಟಿರುವ ಕಾರಣದಿಂದ ಮಧ್ಯಂತರ ಜಾಮೀನಿನ ಅವಧಿಯನ್ನು 7 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್​ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್​​ ಕಚೇರಿಯು ಅವರ ಮನವಿಯನ್ನು ಸ್ವೀಕರಿಸಲು ನಿರಾಕರಿಸಿ, ನಿಯಮಿತ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯ್ಕಕೆ ತೆರಳಲು ಅವರಿಗೆ ಸ್ವಾತಂತ್ರ್ಯವಿದೆ ಎಂದು ಹೇಳಿತ್ತು. ನಂತರ ಸಿಎಂ ಕೇಜ್ರಿವಾಲ್​ ಅವರು ದೆಹಲಿ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

  See also  ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಲೀಗ್ ಆಗಬಹುದು; ಶ್ರೀರಾಮ ಮಾತ್ರ ಆಗಲ್ಲ !

  ಆರೋಗ್ಯ ಸ್ಥಿತಿ ಹದಗೆಟ್ಟಿರುವ ಕಾರಣದಿಂದ ಮಧ್ಯಂತರ ಜಾಮೀನಿನ ಅವಧಿಯನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಅವರು ಈ ಹಿಂದೆ . ನಂತರ ಸಿಎಂ ಕೇಜ್ರಿವಾಲ್​ ಅವರು ದೆಹಲಿಯ ರೂಸ್ ಹೌಸ್ ನ್ಯಾಯಾಲಯದಲ್ಲಿ ಸಾಮಾನ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವೈದ್ಯಕೀಯ ಕಾರಣಗಳಿಂದಾಗಿ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆಯೇ ಹೊರತು ಎಸ್‌ಸಿ ನೀಡಿದ ಮಧ್ಯಂತರ ಜಾಮೀನಿನ ವಿಸ್ತರಣೆಗಾಗಿ ಅಲ್ಲ ಎಂದು ಗಮನಿಸಿದ ನ್ಯಾಯಾಲಯವು ಅರ್ಜಿಯ ಆದೇಶವನ್ನು ಜೂನ್ 5ಕ್ಕೆ ಮುಂದೂಡಿದೆ.

  ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಭಾರತ ಬ್ಲಾಕ್ ಸಭೆಯಲ್ಲಿ ಪಾಲ್ಗೊಳ್ಳುವ ಮೊದಲು ಕೇಜ್ರಿವಾಲ್​ ತಮ್ಮ ನಿವಾಸದಲ್ಲಿ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಸಚಿವೆ ಅತಿಶಿ, ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಸಂಜಯ್ ಸಿಂಗ್, ಶಾಸಕ ದುರ್ಗೇಶ್ ಪಾಠಕ್ ಸೇರಿದಂತೆ ಪ್ರಮುಖ ಎಎಪಿ ನಾಯಕರು ಭಾಗವಹಿಸಿದ್ದರು ಎನ್ನಲಾಗಿದೆ. (ಏಜೆನ್ಸೀಸ್​​)

  ಸ್ವಾತಿ ಮಲಿವಾಲ್ ಪ್ರಕರಣ: ಆರೋಪಿ ಬಿಭವ್ ಕುಮಾರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts