ನಡೆದಾಡುತ್ತಿದ್ದ ದೇವರು ಶಿವೈಕ್ಯ: ನಾಳೆ ಶಾಲಾ-ಕಾಲೇಜಿಗೆ ರಜೆ, ಮೂರು ದಿನ ಶೋಕಾಚಾರಣೆ

ತುಮಕೂರು: ಕಾಯಕ ಯೋಗಿ, ನಡೆದಾಡುತ್ತಿದ್ದ ದೇವರು ಶ್ರೀ ಶಿವಕುಮಾರ ಸ್ವಾಮಿ ಅವರು ಶಿವೈಕ್ಯರಾದ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಹಾಗೂ ಮೂರು ದಿನಗಳ ಶೋಕಾಚಾರಣೆಗೆ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಆದೇಶಿಸಿದ್ದಾರೆ.

ತುಮಕೂರಿನಲ್ಲಿ ಇಂದು ಮತ್ತು ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶ್ರೀಗಳ ಅಗಲಿಕೆಯಿಂದ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ದುಃಖ ಮಡುಗಟ್ಟಿದ್ದು, ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳು ಕಣ್ಣೀರಿಡುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *