More

    ಸಿಎಂ ರಾಜೀನಾಮೆ, ಡಾ.ಯತೀಂದ್ರ ಬಂಧನಕ್ಕೆ ಬಿಜೆಪಿ ಆಗ್ರಹ

    ಬೆಂಗಳೂರು:
    ವರ್ಗಾವಣೆ ದಂಧೆ ಮಾಡುತ್ತಿರುವ ಡಾ.ಯತೀಂದ್ರ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.
    ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಜನರಲ್ ಪವರ್ ಆ್ ಅಟಾರ್ನಿ (ಜಿಪಿಎ) ಸರಕಾರ ಇದೆ. ಇಲ್ಲಿ ಸಿದ್ದರಾಮಯ್ಯ ಅಧಿಕಾರ ಮಾಡುತ್ತಿಲ್ಲ. ಬದಲಿಗೆ ಜಿಪಿಎ ಹೊಂದಿದ ಡಾ. ಯತೀಂದ್ರ ಅಧಿಕಾರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
    ಸಂವಿಧಾನಾತ್ಮಕವಾಗಿ ಸಿಎಂ ತೆಗೆದುಕೊಂಡಿರುವ ಪ್ರಮಾಣವಚನಕ್ಕೆ ವಿರುದ್ಧವಾಗಿ ಡಾ.ಯತೀಂದ್ರರಿಂದ ಅಧಿಕಾರ ನಡೆದಿದೆ. ಸಿದ್ದರಾಮಯ್ಯ ಅವರು 25 ವರ್ಷಗಳ ಹಿಂದಿನ ವ್ಯಕ್ತಿ ಆಗಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತಿದ್ದರು. ಪರಿವರ್ತಿತ ಸಿದ್ದರಾಮಯ್ಯ ಆಗಿರುವುದರಿಂದ ಭಂಡತನದಿಂದ ಹೀಗೇ ನಡೆದುಕೊಳ್ಳುತ್ತಿದ್ದಾರೆ ಎಂದರು.
    ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿ ಇದ್ದಾಗ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಸೇರಿ ಎಲ್ಲ ಮುಖ್ಯಮಂತ್ರಿಗಳ ಕುಟುಂಬಗಳು ಭ್ರಷ್ಟಾಚಾರದಲ್ಲಿ ತೊಡಗಿದೆ. ಅವರ ಮಕ್ಕಳಿಂದ ಅಧಿಕಾರ ದುರುಪಯೋಗ ಆಗುತ್ತಿದೆ ಎಂದು ಅನೇಕ ಬಾರಿ ಹೇಳಿದ್ದರು. ಈಗ ಅವರ ಪುತ್ರ ಡಾ.ಯತೀಂದ್ರ ಅಧಿಕಾರ ದುರುಪಯೋಗ ಮಾಡುತ್ತಿರುವುದನ್ನು ಇಡೀ ರಾಜ್ಯವೇ ನೋಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
    ವಿಡಿಯೋ ಸತ್ಯ ಹೇಳುತ್ತಿದ್ದರೂ, ಸಿಎಸ್‌ಆರ್ ಫಂಡ್ ಕೇಳಿದ್ದೆಂದು ಸಿಎಂ ಸುಳ್ಳು ಹೇಳುತ್ತಿದ್ದಾರೆ. 25 ವರ್ಷಗಳ ಹಿಂದೆ ಅವರು ಇಷ್ಟು ಸುಳ್ಳುಗಾರ ಆಗಿರಲಿಲ್ಲ ಎಂದು ತಿಳಿಸಿದರು.
    ವರ್ಗಾವಣೆ ದಂಧೆ ಮಾಡಿಲ್ಲ. ಅದೇನಾದರೂ ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ ಆಗುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಯತೀಂದ್ರ ಅವರು ವರ್ಗಾವಣೆ ದಂಧೆ ಬಗ್ಗೆಯೇ ಮಾತನಾಡಿದ್ದಾರೆ ಎಂದು ಆರೋಪಿಸಿದರು.
    ಸಿಎಸ್‌ಆರ್ ಫಂಡ್ ಆಗಿದ್ದರೆ ವಿವೇಕಾನಂದ ಯಾರು? ಮಹದೇವ್ ಅವರಿಗೆ ಫೋನ್ ಮಾಡಿ ನಾನು ಕೊಟ್ಟ 5 ಹೆಸರನ್ನು ಮಾತ್ರ ಮಾಡಬೇಕಿತ್ತು ಎಂದಿದ್ದಾರೆ. ಸಿದ್ದರಾಮಯ್ಯ ಅವರು ವಿಷಯವನ್ನು ತಿರುಚಿ ಸುಳ್ಳು ಹೇಳುತ್ತಿದ್ದಾರೆ. ಈ ವಿಡಿಯೋಗಿಂತ ದೊಡ್ಡ ಸಾಕ್ಷಿ ಏನು ಬೇಕು? ಎಂದು ಕೇಳಿದರು.
    ನಿಮ್ಮ ಮಗ ಯತೀಂದ್ರನವರೇ ನಿಮ್ಮನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ನಿಮ್ಮ ಕಾರ್ಯದರ್ಶಿ ಮಹದೇವ್‌ರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ಅವಧಿಯಲ್ಲಿ ಸಂಪೂರ್ಣ ಭ್ರಷ್ಟಾಚಾರ ನಡೆದಿದೆ. ಕಾಂಗ್ರೆಸ್ ಸರಕಾರವು ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts