ಇ-ಆಫೀಸ್ ಮೂಲಕವೇ ವ್ಯವಹರಿಸಲು ಸಿಎಂ ಸೂಚನೆ

BSY JPG
Published on

ಬೆಂಗಳೂರು: ಕರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಇನ್ನು ಮುಂದೆ ತಮ್ಮ ಕಚೇರಿಗೆ ಕಡತಗಳನ್ನು ಮತ್ತು ಪತ್ರಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸುವ ಬದಲಾಗಿ ಈಗಾಗಲೇ ಅಸ್ತಿತ್ವದಲ್ಲಿರುವ ಇ- ಆಫೀಸ್ ಮೂಲಕವೇ ಸಲ್ಲಿಸಬೇಕೆಂದು ಸಿಎಂ ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಚಿವಾಲಯದ ಎಲ್ಲ ಕಚೇರಿಗಳಲ್ಲಿ 2019ರ ಮೇ 1 ರಿಂದ ಜಾರಿಗೆ ಬರುವಂತೆ ಇ -ಆಫೀಸ್​​​ ತಂತ್ರಾಶವನ್ನು ಅನುಷ್ಠಾನಗೊಳಿಸಲಾಗಿದ್ದು, ಈ ತಂತ್ರಾಂಶವನ್ನು ಬಳಸಿ 2019ರ ನವೆಂಬರ್ 1 ರಿಂದಲೇ ಜಾರಿಗೆ ಬರುವಂತೆ ನಮ್ಮ ಕಚೇರಿಯಿಂದ ಸಚಿವಾಲಯದ ಎಲ್ಲ ಇಲಾಖೆಗಳು/ ಅಧೀನ ಸಂಸ್ಥೆಗಳಿಗೆ ಇ-ಆಫೀಸ್ ಮೂಲಕವೇ ವ್ಯವಹರಿಸಲಾಗುತ್ತಿದೆ.

ರಾಜ್ಯ ಮಟ್ಟದ ಎಲ್ಲ ಇಲಾಖೆಗಳ ಮುಖ್ಯಸ್ಥರ ಕಚೇರಿ, ಪ್ರಾದೇಶಿಕ ಆಯುಕ್ತರ ಕಚೇರಿ, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿ, ಪೊಲೀಸ್ ವರಿಷ್ಠಾಧಿಕಾರಿಗಳ, ಉಪ ಅರಣ್ಯ ಸಂರಕ್ಷಣಾಧಿಕಾರಿ (ಪ್ರಾದೇಶಿಕ) ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ (ಸಾಮಾಜಿಕ)ಗಳ ಕಚೇರಿಯಲ್ಲಿ 2020ರ ಜನವರಿ 1 ರಿಂದ ಜಾರಿಗೆ ಬರುವಂತೆ ಇ- ಆಫೀಸ್ ಅನ್ನು ಜಾರಿಗೊಳಿಸಲಾಗಿದೆ.

ಕರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಇನ್ನು ಮುಂದೆ ಕಡತಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸುವ ಬದಲಾಗಿ ನಮ್ಮ ಕಚೇರಿಗೆ ಇ- ಆಫೀಸ್ ಮೂಲಕವೇ ಸಲ್ಲಿಸಬೇಕು ಹಾಗೂ ಎಲ್ಲ ಸಚಿವರು ತಮ್ಮ ಕಚೇರಿಗಳಲ್ಲಿ ಇ- ಆಫೀಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ನಿರ್ವಹಿಸಬೇಕೆಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net